Home> Business
Advertisement

Gruha Lakshmi scheme: ಮೈಸೂರಿನ ಚಾಮುಂಡೇಶ್ವರಿ ದೇವಿಗೂ ಪ್ರತಿ ತಿಂಗಳು ₹2,000

Gruhalakshmi scheme: MLC ದಿನೇಶ್ ಗೂಳಿಗೌಡರ ಪತ್ರಕ್ಕೆ ತಕ್ಷಣವೇ ಸ್ಪಂದಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು, ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ 2 ಸಾವಿರ ರೂ. ಅರ್ಪಿಸಲು ಕ್ರಮ ವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಸೂಚನೆ ನೀಡಿದ್ದಾರೆ.

Gruha Lakshmi scheme: ಮೈಸೂರಿನ ಚಾಮುಂಡೇಶ್ವರಿ ದೇವಿಗೂ ಪ್ರತಿ ತಿಂಗಳು ₹2,000

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ, 5 ಗ್ಯಾರಂಟಿಗಳ ಪೈಕಿ ಮನೆಯ ಯಜಮಾನತಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುವ ‘ಗೃಹ ಲಕ್ಷ್ಮಿ ಯೋಜನೆ’ಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಾಲನೆ ನೀಡಲಾಗಿತ್ತು. ಇದೀಗ ರಾಜ್ಯ ಸರ್ಕಾರ ‘ಗೃಹ ಲಕ್ಷ್ಮಿ ಯೋಜನೆ’ಯಡಿ ನಾಡದೇವತೆ ಚಾಮುಂಡೇಶ್ವರಿ ದೇವಿಗೂ ಪ್ರತಿ ತಿಂಗಳು 2 ಸಾವಿರ ರೂ. ನೀಡಲು ನಿರ್ಧರಿಸಿದೆ.

ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಪ್ರತಿ ತಿಂಗಳು ‘ಗೃಹ ಲಕ್ಷ್ಮಿ ಯೋಜನೆ’ಯ ಹಣ ನೀಡುವಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್​ ಅವರಿಗೆ ಕಾಂಗ್ರೆಸ್‍ನ ಎಂಎಲ್​ಸಿ ಮತ್ತು ಪಕ್ಷದ ರಾಜ್ಯ ಮಾಧ್ಯಮ ಘಟಕದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಪತ್ರ ಬರೆದಿದ್ದರು. ಇದಕ್ಕೆ ಕಾಂಗ್ರೆಸ್ ಸರ್ಕಾರ ಅಸ್ತು ಎಂದಿದೆ.

ಇದನ್ನೂ ಓದಿ: "ಪಟ್ಟಭದ್ರ ಹಿತಾಸಕ್ತಿಗಳು ಹಿಂದೆಯೂ ಇದ್ದರು, ಈಗಲೂ ಇದ್ದಾರೆ"

ದಿನೇಶ್ ಗೂಳಿಗೌಡರ ಪತ್ರಕ್ಕೆ ತಕ್ಷಣವೇ ಸ್ಪಂದಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು, ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ 2 ಸಾವಿರ ರೂ. ಅರ್ಪಿಸಲು ಕ್ರಮ ವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಗೂಳಿಗೌಡ, ‘ನಾಡದೇವತೆ ಚಾಮುಂಡೇಶ್ವರಿ ದೇವಿಗೆ ‘ಗೃಹ ಲಕ್ಷ್ಮಿ ಯೋಜನೆ’ಯಡಿ 2 ಸಾವಿರ ರೂ. ನೀಡುವ ಪ್ರಸ್ತಾವನೆಗೆ ಡಿಸಿಎಂ ಒಪ್ಪಿಗೆ ಸೂಚಿಸಿದ್ದು, ಪ್ರತಿ ತಿಂಗಳು ದೇವಸ್ಥಾನದ ಖಾತೆಗೆ ನೇರವಾಗಿ ಹಣ ಜಮಾ ಮಾಡುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸೂಚಿಸಿದ್ದಾರೆ’ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಹರಕೆಯ ಭಾಗವಾಗಿ ಚಾಮುಂಡೇಶ್ವರಿ ದೇವಸ್ಥಾನದ ಖಾತೆಗೆ 2,000 ರೂ. ಹಣ ಠೇವಣಿ ಮಾಡಲಾಗುತ್ತದೆ.

ಇದನ್ನೂ ಓದಿ: ಟೀಂ ಇಂಡಿಯಾದ ಗೆಲುವಿಗೆ ಸಿಎಂ ಸಿದ್ಧರಾಮಯ್ಯ ಬೆಸ್ಟ್ ವಿಶಸ್

ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿಗಳು

ಎಲ್ಲಾ ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್ (ಗೃಹ ಜ್ಯೋತಿ), ಬಿಪಿಎಲ್ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ 10 ಕೆಜಿ ಉಚಿತ ಅಕ್ಕಿ (ಅನ್ನ ಭಾಗ್ಯ), ನಿರುದ್ಯೋಗಿ ಪದವೀಧರ ಯುವಕರಿಗೆ ₹3,000 ತಿಂಗಳ ನೆರವು ಮತ್ತು ನಿರುದ್ಯೋಗಿ ಡಿಪ್ಲೋಮಾದಾರರಿಗೆ (ಇಬ್ಬರೂ 18-25 ವರ್ಷ ವಯಸ್ಸಿನವರು) 2 ವರ್ಷಗಳವರೆಗೆ (ಯುವನಿಧಿ) ₹1,500 ಮತ್ತು ಕೊನೆಯದಾಗಿ ಸಾರ್ವಜನಿಕ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ (ಶಕ್ತಿ ಯೋಜನೆ) ಇವು ಕಾಂಗ್ರೆಸ್ ಸರ್ಕಾರದ ಇತರ 4 ಪ್ರಮುಖ ಗ್ಯಾರಂಟಿಗಳಾಗಿವೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More