Home> Business
Advertisement

Petrol Diesel Price Today: ಮತ್ತೆ ಪೆಟ್ರೋಲ್ ಡೀಸೆಲ್ ದರದಲ್ಲಿ ಏರಿಕೆ..!

ಅಗತ್ಯ ವಸ್ತುಗಳ ಬೆಲೆ ಏರಿಕೆ ಜೊತೆ ಜೊತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರಗಳ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿದ್ದಾರೆ.

Petrol Diesel Price Today: ಮತ್ತೆ ಪೆಟ್ರೋಲ್ ಡೀಸೆಲ್ ದರದಲ್ಲಿ ಏರಿಕೆ..!

ನವದೆಹಲಿ: ಶನಿವಾರ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Petrol & Diesel Price) ಮತ್ತೊಮ್ಮೆ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ 35 ಪೈಸೆ ಏರಿಕೆಯಾಗಿ 108.99 ರೂ. ತಲುಪಿದರೆ, ಪ್ರತಿ ಲೀಟರ್ ಡೀಸೆಲ್ 35 ಪೈಸೆ ಏರಿಕೆಯಾಗಿ 97.72 ರೂ. ತಲುಪಿದೆ. ದೀಪಾವಳಿ ಹಬ್ಬಕ್ಕೂ ಮುನ್ನವೇ ಜನಸಾಮಾನ್ಯರಿಗೆ ತೈಲಬೆಲೆ ಏರಿಕೆ ಬಿಸಿ ತಟ್ಟುತ್ತಿದೆ. ನಿರಂತರವಾಗಿ ಏರಿಕೆಯಾಗುತ್ತಿರುವ ಇಂಧನ ದರದಿಂದ ಜನಸಾಮಾನ್ಯರು ಕಂಗೆಟ್ಟು ಹೋಗಿದ್ದಾರೆ. ಇದು ಹೀಗೆ ಮುಂದುವರಿದರೆ ನಾವು ಜೀವನ ಮಾಡುವುದು ಹೇಗೆ ಅಂತಾ ಪ್ರಶ್ನಿಸುತ್ತಿದ್ದಾರೆ.

ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ(Petrol Price) 34 ಪೈಸೆಯಷ್ಟು ಹೆಚ್ಚಳವಾಗಿದ್ದು, 114.81 ರೂ. ತಲುಪಿದ್ದರೆ, ಲೀಟರ್ ಡೀಸೆಲ್ ದರ 37 ಪೈಸೆ ಏರಿಕೆಯಾಗಿ 105.86 ರೂ. ಆಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 36 ಪೈಸೆ ಏರಿಕೆಯಾಗಿದ್ದು, 112.79 ರೂ. ಆಗಿದ್ದರೆ, ಪ್ರತಿ ಲೀಟರ್ ಡೀಸೆಲ್ ದರ 37 ಪೈಸೆ ಹೆಚ್ಚಳವಾಗಿದ್ದು, 103.72 ರೂ.ಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ 31 ಪೈಸೆ ದುಬಾರಿಯಾಗಿದ್ದು, 105.74 ರೂ. ಆದರೆ, ಲೀಟರ್ ಡೀಸೆಲ್ ದರದಲ್ಲಿ 33 ಪೈಸೆ ಏರಿಕೆಯಾಗಿ 101.92 ರೂ. ಆಗಿದೆ.  ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 34 ಪೈಸೆ ಏರಿಕೆಯಾಗಿ 109.46 ರೂ. ಆದರೆ, ಲೀಟರ್ ಡೀಸೆಲ್ ಬೆಲೆ 35 ಪೈಸೆ ಏರಿಕೆಯಾಗಿ 100.84 ರೂ. ತಲುಪಿದೆ.

ಇದನ್ನೂ ಓದಿ: Electric Scooter: ಈ ಎಲೆಕ್ಟ್ರಿಕ್ ಸ್ಕೂಟರ್‌ಗಳು 50 ಸಾವಿರ ರೂ.ಗಿಂತ ಕಡಿಮೆ ಬೆಲೆಗೆ ಲಭ್ಯವಿವೆ

ಭೋಪಾಲ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 36 ಪೈಸೆ ಹೆಚ್ಚಳಗೊಂಡು 117.71 ರೂ.ಗೆ ಏರಿಕೆಯಾಗಿದೆ. ಡೀಸೆಲ್ ಬೆಲೆ(Diesel Price) ಲೀಟರ್‌ಗೆ 37 ಪೈಸೆ ಏರಿಕೆಯಾಗಿ 107.13 ರೂ.ನಷ್ಟು ದುಬಾರಿಯಾಗಿದೆ. ಹೈದರಾಬಾದ್ ನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 113.36 ರೂ. ಆದರೆ, ಡೀಸೆಲ್ ಲೀಟರ್‌ಗೆ 106.60 ರೂ. ತಲುಪಿದೆ. ಇಂಧನ ದರ ನಿರಂತರವಾಗಿ ಏರಿಕೆ ಕಾಣುತ್ತಿರುವ ಹಿನ್ನೆಲೆ ಗ್ರಾಹಕರಿಗೆ ಜೇಬು ಖಾಲಿಯಾಗುತ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಜೊತೆ ಜೊತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರಗಳ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿದ್ದಾರೆ.

ತೈಲ ಕಂಪನಿಗಳು ಅಳವಡಿಸಿಕೊಂಡ ಬೆಲೆ ಸೂತ್ರದ ಪ್ರಕಾರ ಪೆಟ್ರೋಲ್ ಮತ್ತು ಡೀಸೆಲ್ ದರ(Fuel Rates)ಗಳನ್ನು ಪ್ರತಿದಿನ ಪರಿಷ್ಕರಿಸಲಾಗುತ್ತದೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್( BPCL ), ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ( HPCL)ಅಂತಾರಾಷ್ಟ್ರೀಯ ಬೆಲೆ ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಇಂಧನ ಬೆಲೆಯನ್ನು ಪ್ರತಿದಿನ ಪರಿಷ್ಕರಿಸುತ್ತವೆ. ಪ್ರಸ್ತುತ ದೇಶದ 4 ಮೆಟ್ರೋ ನಗರಗಳಲ್ಲಿ ಇಂಧನ ದರ ಅತ್ಯಧಿಕವಾಗಿದೆ.

ಇದನ್ನೂ ಓದಿ: ದೇಶದಲ್ಲಿ ಇಳಿಕೆಯಾಗಲಿದೆ ಅಡುಗೆ ಎಣ್ಣೆ, ಬೇಳೆ ಕಾಳುಗಳ ಬೆಲೆ, ಸರ್ಕಾರ ನೀಡಿದೆ ಉತ್ತರ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Petrol-Diesel Price)ಗಳು ಪ್ರತಿ ದಿನ ಬೆಳಿಗ್ಗೆ 6 ಗಂಟೆಗೆ ಬದಲಾಗುತ್ತವೆ. ಸಂಜೆ 6 ರಿಂದ ಹೊಸ ಶುಲ್ಕಗಳು ಅನ್ವಯವಾಗುತ್ತವೆ. ಅಬಕಾರಿ ತೆರಿಗೆ, ಡೀಲರ್ ಕಮಿಷನ್ ಮತ್ತು ಹೀಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸೇರಿಸಿದ ನಂತರ, ಅದರ ಬೆಲೆ ಬಹುತೇಕ ದ್ವಿಗುಣಗೊಳ್ಳುತ್ತದೆ. ವಿದೇಶಿ ವಿನಿಮಯ ದರಗಳೊಂದಿಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆ ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿದಿನ ಬದಲಾಗುತ್ತವೆ.

ಈ ರೀತಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Petrol Diesel Price)ಯನ್ನು ಪರಿಶೀಲಿಸಿ ನೀವು ಪೆಟ್ರೋಲ್ ಡೀಸೆಲ್ ಬೆಲೆಯನ್ನು SMS ಮೂಲಕ ತಿಳಿದುಕೊಳ್ಳಬಹುದು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿದಿನ ಸಂಜೆ 6 ಗಂಟೆಗೆ ನವೀಕರಿಸಲಾಗುತ್ತದೆ. ಇಂಡಿಯನ್ ಆಯಿಲ್ ಗ್ರಾಹಕರ ಬೆಲೆಯನ್ನು ತಿಳಿಯಲು, ನೀವು ನಿಮ್ಮ ನಗರ ಕೋಡ್ ಅನ್ನು RSP ಯೊಂದಿಗೆ ಟೈಪ್ ಮಾಡಬೇಕು ಮತ್ತು 9224992249 ಗೆ SMS ಕಳುಹಿಸಬೇಕು. ಪ್ರತಿ ನಗರ ಕೋಡ್ ವಿಭಿನ್ನವಾಗಿರುತ್ತದೆ. ಈ ವಿವರಗಳನ್ನು ಐಒಸಿಎಲ್ ವೆಬ್‌ಸೈಟ್‌ನಲ್ಲಿ ಕಾಣಬಹುದು. ಬಿಪಿಸಿಎಲ್ ಗ್ರಾಹಕರು ಆರ್‌ಎಸ್‌ಪಿ 9223112222 ಮತ್ತು ಎಚ್‌ಪಿಸಿಎಲ್ ಗ್ರಾಹಕ ಎಚ್‌ಪಿ ಬೆಲೆ 9222201122 ಗೆ ಎಸ್‌ಎಂಎಸ್ ಕಳುಹಿಸುವ ಮೂಲಕ ತಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಂಡುಹಿಡಿಯಬಹುದು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Read More