Home> Business
Advertisement

Shaktikanta Das: ಮುಂದಿನ 3 ವರ್ಷಗಳಿಗೆ ಆರ್‌ಬಿಐ ಗವರ್ನರ್ ಆಗಿ ಶಕ್ತಿಕಾಂತ್ ದಾಸ್ ಮರುನೇಮಕ

ಆರ್‌ಬಿಐನ ಹಾಲಿ ಗವರ್ನರ್ ಶಕ್ತಿಕಾಂತ್ ದಾಸ್ ಅವರ ಅಧಿಕಾರಾವಧಿಯನ್ನು ಕೇಂದ್ರ ಸರ್ಕಾರವು ಶುಕ್ರವಾರ 3 ವರ್ಷಗಳ ಅವಧಿಗೆ ವಿಸ್ತರಿಸಿದೆ.

Shaktikanta Das: ಮುಂದಿನ 3 ವರ್ಷಗಳಿಗೆ ಆರ್‌ಬಿಐ ಗವರ್ನರ್ ಆಗಿ ಶಕ್ತಿಕಾಂತ್ ದಾಸ್ ಮರುನೇಮಕ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI)ನ ಹಾಲಿ ಗವರ್ನರ್ ಶಕ್ತಿಕಾಂತ್ ದಾಸ್(RBI Governor Shaktikanta Das)ಅವರ ಅಧಿಕಾರಾವಧಿಯನ್ನು ಕೇಂದ್ರ ಸರ್ಕಾರವು ಶುಕ್ರವಾರ 3 ವರ್ಷಗಳ ಅವಧಿಗೆ ವಿಸ್ತರಿಸಿದೆ. ಮುಂದಿನ 3 ವರ್ಷಗಳಿಗೆ ಅಂದರೆ 2024ರವರೆಗೆ ಆರ್‌ಬಿಐ ಗವರ್ನರ್ ಆಗಿ ಶಕ್ತಿಕಾಂತ್ ದಾಸ್ ಅವರು ಮುಂದುವರಿಯಲಿದ್ದಾರೆ.

ದಾಸ್ ಅಧಿಕಾರಾವಧಿ 2021ರ ಡಿಸೆಂಬರ್ 10ಕ್ಕೆ ಮುಕ್ತಾಯವಾಗಬೇಕಿತ್ತು. ಆದರೆ ಈಗ ಕೇಂದ್ರ ಸರ್ಕಾರ ಮತ್ತೆ ವಿಸ್ತರಿಸಿದೆ. ‘ಡಿಸೆಂಬರ್ 10 ನಂತರದ ಮುಂದಿನ 3 ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಶಕ್ತಿಕಾಂತ್ ದಾಸ್ ಅವರನ್ನು ಆರ್‌ಬಿಐ(Reserve Bank of India) ಗವರ್ನರ್ ಆಗಿ ಮರುನೇಮಕ ಮಾಡಲು ಸಂಪುಟದ ನೇಮಕಾತಿ ಸಮಿತಿಯು ಅನುಮೋದಿಸಿದೆ’ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಮಹಾಘಟಬಂಧನ್ ಬಿಕ್ಕಟ್ಟಿನ ಚರ್ಚೆ ನಡುವೆಯೇ ಲಾಲುಗೆ ಕರೆ ಮಾಡಿದ ಸೋನಿಯಾ ಗಾಂಧಿ

ಶಕ್ತಿಕಾಂತ್ ದಾಸ್(Shaktikanta Das) ಅವರನ್ನು ಡಿಸೆಂಬರ್ 2018ರಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (RBI)ನ ಗವರ್ನರ್ ಆಗಿ ನೇಮಿಸಲಾಗಿತ್ತು. ಕ್ಯಾಬಿನೆಟ್ ನೇಮಕಾತಿ ಸಮಿತಿ (ACC) ತೆಗೆದುಕೊಂಡ ನಿರ್ಧಾರದ ಪ್ರಕಾರ ತಮಿಳುನಾಡು ಕೇಡರ್‌ನ ಐಎಎಸ್ ಅಧಿಕಾರಿ ದಾಸ್ ಅವರು 3 ವರ್ಷಗಳ ಅಧಿಕಾರವಧಿಯನ್ನು ಹೊಂದಿರುತ್ತಾರೆ. ಶಕ್ತಿಕಾಂತ್ ದಾಸ್ ಕಳೆದ ವರ್ಷ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿಯಾಗಿ ನಿವೃತ್ತರಾಗಿದ್ದರು. ನಂತರ 15ನೇ ಹಣಕಾಸು ಆಯೋಗದ ಸದಸ್ಯರಾದರು.

ಬಹುಮುಖ್ಯ ಹುದ್ದೆಗಳನ್ನು ನಿಭಾಯಿಸಿದ ಅನುಭವ

ದಾಸ್​ 2018ರ ಡಿಸೆಂಬರ್​ 11ರಂದು ಆರ್​ಬಿಐ ಗವರ್ನರ್​ ಆಗಿ ನೇಮಕಗೊಂಡಿದ್ದರು. ಇದಕ್ಕೂ ಮೊದಲು ಆರ್ಥಿಕ ವ್ಯವಹಾರಗಳ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿದ್ದರು. ಹಣಕಾಸು, ತೆರಿಗೆ​​, ಉದ್ಯಮ, ಮೂಲಸೌಕರ್ಯಗಳಿಗೆ ಸಂಬಂಧಪಟ್ಟ ಕ್ಷೇತ್ರದಲ್ಲಿ ಬಹುಮುಖ್ಯ ಹುದ್ದೆಗಳನ್ನು ನಿಭಾಯಿಸಿದ ಅನುಭವ ಹೊಂದಿದ್ದಾರೆ. ವಿಶ್ವ ಬ್ಯಾಂಕ್​, ಏಷ್ಯನ್​ ಡೆವಲಪ್​ಮೆಂಟ್​ ಬ್ಯಾಂಕ್​ (ADB), ನ್ಯೂ ಡೆವಲಪ್​ಮೆಂಟ್​ ಬ್ಯಾಂಕ್ (NDB), ಏಷ್ಯನ್​ ಇನ್​ಫ್ರಾಸ್ಟ್ರಕ್ಚರ್​​ ಇನ್ವೆಸ್ಟ್​ಮೆಂಟ್ ಬ್ಯಾಂಕ್​ (AHB)ಗಳಲ್ಲಿ ಭಾರತದ ಪರ್ಯಾಯ ಗವರ್ನರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಹಣಕಾಸು ಸಚಿವಾಲಯದಲ್ಲಿ ಸುದೀರ್ಘ ಅವಧಿಗೆ ಕಾರ್ಯನಿರ್ವಹಿಸಿರುವ ದಾಸ್​ ಒಟ್ಟು 8 ಕೇಂದ್ರ ಬಜೆಟ್​​ಗಳ ತಯಾರಿಕೆಯಲ್ಲಿ ನೇರವಾಗಿ ಕಾರ್ಯನಿರ್ವಹಿಸಿದ್ದಾರೆ.

ಇದನ್ನೂ ಓದಿ: Coronavirus Havoc: ಈ ದೇಶದಲ್ಲಿ ಮತ್ತೆ ವಿನಾಶ ಉಂಟು ಮಾಡುತ್ತಿದೆ ಕರೋನಾ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Read More