RBI Governor: ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಇದುವರೆಗೆ 1.80 ಲಕ್ಷ ಕೋಟಿ ರೂಪಾಯಿ ಮೌಲ್ಯದ 2000 ರೂಪಾಯಿ ನೋಟುಗಳು ಬ್ಯಾಂಕಿಂಗ್ ಸಿಸ್ಟಮ್ ಮರಳಿವೆ ಎಂದು ಹೇಳಿದ್ದಾರೆ. 2023ರ ಮಾರ್ಚ್ 31ರವರೆಗೆ ಚಲಾವಣೆಯಲ್ಲಿದ್ದ 2000 ರೂಪಾಯಿ ನೋಟುಗಳ ಪೈಕಿ ಅರ್ಧದಷ್ಟು ಅಂದರೆ ಶೇ.50ರಷ್ಟು ನೋಟುಗಳು ವಾಪಸ್ ಬಂದಿವೆ ಎಂದು ಹೇಳಿದ್ದಾರೆ. ಇದುವರೆಗೆ 3.62 ಲಕ್ಷ ಕೋಟಿ ರೂಪಾಯಿ ಮೌಲ್ಯದ ನೋಟುಗಳು ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಚಲಾವಣೆಯಲ್ಲಿವೆ ಎಂದು ಆರ್ಬಿಐ ಗವರ್ನರ್ ತಿಳಿಸಿದ್ದಾರೆ.
85ರಷ್ಟು ನೋಟುಗಳು ಬ್ಯಾಂಕ್ ಖಾತೆಗೆ ಠೇವಣಿಯಾಗುತ್ತಿವೆ
1000 ರೂಪಾಯಿ ಬಿಡುಗಡೆ ಸಾಧ್ಯತೆ ನಿರಾಕರಣೆ!
ಈ ಸುದ್ದಿಗೋಷ್ಠಿಯ ಸಂದರ್ಭದಲ್ಲಿ ಆರ್ಬಿಐ ಗವರ್ನರ್ಗೆ 1000 ರೂಪಾಯಿ ನೋಟು ಮರು ಬಿಡುಗಡೆಯಾಗಬಹುದೇ ಅಥವಾ 500 ರೂಪಾಯಿ ನೋಟು ಹಿಂಪಡೆಯಬಹುದೇ ಎಂದು ಪ್ರಶ್ನಿಸಲಾಗಿದೆ. ಈ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಆರ್ಬಿಐ ಗವರ್ನರ್ ತಮ್ಮ ಉತ್ತರದಲ್ಲಿ ತಿಳಿಸಿದ್ದಾರೆ. ಅಂತಹ ಯಾವುದೇ ಆಲೋಚನೆ ಇಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಊಹಾಪೋಹ ಸೃಷ್ಟಿಸಬೇಡಿ ಎಂದು ಎಂದು ಜನಸಾಮಾನ್ಯರಲ್ಲಿ ಅವರು ಮನವಿ ಮಾಡಿದ್ದಾರೆ.
ಇದನ್ನೂ ಓದಿ-RBI MPC: ಹಣದುಬ್ಬರಕ್ಕೆ ಸಂಬಂಧಿಸಿದಂತೆ ಸಂತಸದ ಸುದ್ದಿ ಪ್ರಕಟಿಸಿದ RBI ಗವರ್ನರ್
ನೋಟುಗಳನ್ನು ಹಿಂದಿರುಗಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ
ಮೇ 19, 2022 ರಂದು, RBI ರೂ 2000 ಕರೆನ್ಸಿ ನೋಟನ್ನು ಹಿಂಪಡೆದುಕೊಳ್ಳುತ್ತಿರುವುದಾಗಿ ಘೋಷಿಸಿತ್ತು. ಇದನ್ನು ಪ್ರಕಟಿಸಿದ ಆರ್ಬಿಐ, ನೋಟ್ ಕ್ಲೀನ್ ನೀತಿಯ ಅಡಿಯಲ್ಲಿ, ಆರ್ಬಿಐ 2000 ರೂ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿದೆ ಎಂದು ಹೇಳಿಟ್ಟು. 2000 ರೂಪಾಯಿ ಚಲಾವಣೆಯಲ್ಲಿರಬಹುದು ಆದರೆ 2000 ರೂಪಾಯಿ ನೋಟು ಕಾನೂನುಬದ್ಧವಾಗಿ ಮಾನ್ಯವಾಗಿರುತ್ತದೆ. 30 ಸೆಪ್ಟೆಂಬರ್ 2023 ರವರೆಗೆ 2000 ರೂಪಾಯಿ ನೋಟುಗಳನ್ನು ಬ್ಯಾಂಕ್ಗಳಲ್ಲಿ ಬದಲಾಯಿಸಬಹುದು ಎಂದು ಆರ್ಬಿಐ ಹೇಳಿದೆ. ಇದರೊಂದಿಗೆ, 2000 ರೂಪಾಯಿ ನೋಟುಗಳನ್ನು ಬ್ಯಾಂಕ್ಗಳ ಶಾಖೆಗಳಲ್ಲಿ ಮತ್ತು ಆರ್ಬಿಐನ 19 ಪ್ರಾದೇಶಿಕ ಕಚೇರಿಗಳಲ್ಲಿ ಇತರ ಮುಖಬೆಲೆಯ ಕರೆನ್ಸಿಯೊಂದಿಗೆ ವಿನಿಮಯ ಮಾಡಿಕೊಳ್ಳಬಹುದು ಎಂದು ಅದು ಬ್ಯಾಂಕ್ ಗ್ರಾಹಕರಿಗೆ ಸೂಚಿಸಿತ್ತು.
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.