Home> Career
Advertisement

IBPS Clerk Recruitment 2023: ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

IBPS Clerk Recruitment 2023: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆ ಕರೆಯಲಾಗುತ್ತದೆ. ಇದಾದ ಬಳಿಕ ಮುಖ್ಯ ಪರೀಕ್ಷೆ ಇರಲಿದ್ದು, ಆ ಬಳಿಕ ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ. 

IBPS Clerk Recruitment 2023: ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಬ್ಯಾಂಕ್‌ಗಳಲ್ಲಿನ ಕ್ಲರ್ಕ್​ ಹುದ್ದೆಗಳ ನೇಮಕಾತಿಗೆ ಪ್ರಕಟಣೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ibps.in ವೆಬ್‍ಸೈಟ್‍ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತು ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ.

ನೇಮಕಾತಿ ವಿವರಗಳು:

ಬ್ಯಾಂಕ್ ಹೆಸರು: ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS)

ಉದ್ಯೋಗ ಸ್ಥಳ: ಅಖಿಲ ಭಾರತ

ಹುದ್ದೆಯ ಹೆಸರು: ಕ್ಲರ್ಕ್

ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವೀಧರರಾಗಿರಬೇಕು. ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.  

ಇದನ್ನೂ ಓದಿ: ರಾಜ್ಯದ ಜನತೆಗೆ ಮತ್ತೊಂದು ಶಾಕಿಂಗ್; ವಿದ್ಯುತ್, ತರಕಾರಿ, ಮೊಟ್ಟೆ ಬೆನ್ನಲ್ಲೇ ಇದೀಗ ಹಾಲಿನ ಸರದಿ!

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 28 ವರ್ಷಕ್ಕಿಂತ ಹೆಚ್ಚಿರಬಾರದು.

ಮಾಸಿಕ ವೇತನ: ಈ ಹುದ್ದೆಗೆ ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಮಾಸಿಕ 19,900 ರೂ.ನಿಂದ 47,920 ರೂ. ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆ ಕರೆಯಲಾಗುತ್ತದೆ. ಇದಾದ ಬಳಿಕ ಮುಖ್ಯ ಪರೀಕ್ಷೆ ಇರಲಿದ್ದು, ಆ ಬಳಿಕ ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.

ಪ್ರಮುಖ ದಿನಾಂಕ: ಜುಲೈ 1ರಿಂದ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, ಶುಲ್ಕ ಪಾವತಿ ಮತ್ತು ಅರ್ಜಿ ಸಲ್ಲಿಸಲು ಜುಲೈ 21 ಕೊನೆಯ ದಿನಾಂಕವಾಗಿರುತ್ತದೆ.

fallbacks

ಆಗಸ್ಟ್ ತಿಂಗಳಲ್ಲಿ ಪರೀಕ್ಷೆಯ ಪೂರ್ವ ತರಬೇತಿ ನಡೆಯಲಿದ್ದು, ಆಗಸ್ಟ್/ಸೆಪ್ಟೆಂಬರ್‍ನಲ್ಲಿ ಪೂರ್ವಭಾವಿ ಆನ್‍ಲೈನ್ ಪರೀಕ್ಷೆ ನಡೆಯಲಿದೆ. ಸೆಪ್ಟೆಂಬರ್/ಅಕ್ಟೋಬರ್‍ನಲ್ಲಿ ಆನ್‍ಲೈನ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಳ್ಳಲಿದ್ದು, ಅಕ್ಟೋಬರ್ ತಿಂಗಳಿನಲ್ಲಿ ಮುಖ್ಯ ಆನ್‍ಲೈನ್ ಪರೀಕ್ಷೆ ನಡೆಯಲಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗೆ ಅರ್ಜಿ ಸಲ್ಲಿಸಲು www.ibps.in ಈ ಲಿಂಕ್ ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತು ಮತ್ತಷ್ಟು ಮಾಹಿತಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಅಧಿಕೃತ ವೆಬ್‍ಸೈಟ್‍ಗೆ ಭೇಟಿ ನೀಡಬೇಕು.

ಇದನ್ನೂ ಓದಿ: 40 ಸಾವಿರ ರೂ,ಗೆ ಬಾಲಕಿ ಮಾರಾಟ, ಐವರ ಬಂಧನ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More