Home> Career
Advertisement

IBPS ನೇಮಕಾತಿ: 6128 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಅಹ್ವಾನ, ಇಂದೇ ಅರ್ಜಿ ಸಲ್ಲಿಸಿ

IBPS Recruitment 2024: IBPS ಕ್ಲರ್ಕ್ ಪ್ರಿಲಿಮ್ಸ್ ಪರೀಕ್ಷೆಯು 100 ಅಂಕಗಳ 100 ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಇಂಗ್ಲಿಷ್ ಭಾಷೆ, ಸಂಖ್ಯಾ ಸಾಮರ್ಥ್ಯ ಮತ್ತು ರೀಸನಿಂಗ್ ಎಬಿಲಿಟಿ ವಿಭಾಗಗಳಿಂದ ಪ್ರಶ್ನೆಗಳು ಬರುತ್ತವೆ. ಮುಖ್ಯ ಪರೀಕ್ಷೆಯು ಒಟ್ಟು 200 ಅಂಕಗಳಿಗೆ 2 ಗಂಟೆಗಳ ಅವಧಿಯಾಗಿರುತ್ತದೆ.

IBPS ನೇಮಕಾತಿ: 6128 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಅಹ್ವಾನ, ಇಂದೇ ಅರ್ಜಿ ಸಲ್ಲಿಸಿ

IBPS Recruitment 2024: ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) 2025-2026ರ ಸಾಮಾನ್ಯ ನೇಮಕಾತಿ ಪ್ರಕ್ರಿಯೆ (CRP)-XIV ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಈ ನೇಮಕಾತಿಯ ಮೂಲಕ 6,128 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಬ್ಯಾಂಕ್ ಉದ್ಯೋಗಕ್ಕಾಗಿ ಕಾಯುತ್ತಿರುವ ನಿರುದ್ಯೋಗಿಗಳಿಗೆ ಇದು ಸುವರ್ಣ ಅವಕಾಶವಾಗಿದೆ.  

ವಿದ್ಯಾರ್ಹತೆ:ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನದೊಂದಿಗೆ ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

ಇದನ್ನೂ ಓದಿ: Daily GK Quiz: ಭಾರತೀಯ ಬಾಹ್ಯಾಕಾಶ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ?

ವಯೋಮಿತಿ: ಜುಲೈ 1, 2024ರಂತೆ ಅಭ್ಯರ್ಥಿಗಳ ವಯಸ್ಸು 20ರಿಂದ 28 ವರ್ಷಗಳ ನಡುವೆ ಇರಬೇಕು. ಅಂದರೆ ಅರ್ಜಿದಾರರು ಜುಲೈ 2, 1996 ಮತ್ತು ಜುಲೈ 1, 2004ರ ನಡುವೆ ಜನಿಸಿದವರಾಗಿರಬೇಕು. 

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳು 850 ರೂ. ಪಾವತಿಸಬೇಕು. SC/ST, PWD, EMM, DESM ಅಭ್ಯರ್ಥಿಗಳು 175 ರೂ. ನೋಂದಣಿ ಶುಲ್ಕ ಪಾವತಿಸಬೇಕು. ಅಂತಿಮ ಆಯ್ಕೆಯು ಪ್ರಾಥಮಿಕ ಮತ್ತು ಮುಖ್ಯ ಪರೀಕ್ಷೆಯ ಆಧಾರದ ಮೇಲೆ ಇರುತ್ತದೆ.

ಅರ್ಜಿ ಸಲ್ಲಿಕೆ: ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜುಲೈ 1ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 21 ಆಗಿದೆ. 

ಲಿಖಿತ ಪರೀಕ್ಷಾ ವಿಧಾನ: IBPS ಕ್ಲರ್ಕ್ ಪ್ರಿಲಿಮ್ಸ್ ಪರೀಕ್ಷೆಯು 100 ಅಂಕಗಳ 100 ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಇಂಗ್ಲಿಷ್ ಭಾಷೆ, ಸಂಖ್ಯಾ ಸಾಮರ್ಥ್ಯ ಮತ್ತು ರೀಸನಿಂಗ್ ಎಬಿಲಿಟಿ ವಿಭಾಗಗಳಿಂದ ಪ್ರಶ್ನೆಗಳು ಬರುತ್ತವೆ. ಮುಖ್ಯ ಪರೀಕ್ಷೆಯು ಒಟ್ಟು 200 ಅಂಕಗಳಿಗೆ 2 ಗಂಟೆಗಳ ಅವಧಿಯಾಗಿರುತ್ತದೆ.

ಪ್ರಮುಖ ದಿನಾಂಕಗಳು

  • ಆನ್‌ಲೈನ್ ಅಪ್ಲಿಕೇಶನ್‌ಗೆ ಪ್ರಾರಂಭಿಕ ದಿನಾಂಕ : ಜುಲೈ 01,2024
  • ಆನ್‌ಲೈನ್ ಅಪ್ಲಿಕೇಶನ್‌ಗೆ ಕೊನೆಯ ದಿನಾಂಕ : ಜುಲೈ 21, 2024
  • ಪೂರ್ವ ಪರೀಕ್ಷೆಯ ತರಬೇತಿಯ ದಿನಾಂಕ : ಆಗಸ್ಟ್ 12ರಿಂದ 17ರವರೆಗೆ
  • ಆನ್‌ಲೈನ್ ಪೂರ್ವಭಾವಿ ಪರೀಕ್ಷೆ: ಆಗಸ್ಟ್ 24, 25, 31ರಂದು
  • ಪೂರ್ವಭಾವಿ ಪರೀಕ್ಷೆಯ ಫಲಿತಾಂಶ ಬಿಡುಗಡೆ ದಿನಾಂಕ : ಸೆಪ್ಟೆಂಬರ್ ತಿಂಗಳಲ್ಲಿ
  • ಆನ್‌ಲೈನ್ ಮುಖ್ಯ ಪರೀಕ್ಷೆಗಳು : ಅಕ್ಟೋಬರ್ 13, 2024

ಇದನ್ನೂ ಓದಿ: Good News: ಬೆಂಗಳೂರು-ಪಂಢರಾಪುರ ನಡುವೆ ವಿಶೇಷ ರೈಲು ಸಂಚಾರ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Read More