Home> Career
Advertisement

SSLC, PUC ಪಾಸಾದವರಿಗೆ ಕೋರ್ಟ್‌ನಲ್ಲಿ ಉದ್ಯೋಗಾವಕಾಶ; ಇಂದೇ ಅರ್ಜಿ ಸಲ್ಲಿಸಿ

Karnataka District Court Recruitment 2024: ರಾಜ್ಯದ ವಿವಿಧ ಜಿಲ್ಲಾ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 10 ಮತ್ತು 12 ನೇ ತರಗತಿ ಪಾಸಾದ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

SSLC, PUC ಪಾಸಾದವರಿಗೆ ಕೋರ್ಟ್‌ನಲ್ಲಿ ಉದ್ಯೋಗಾವಕಾಶ; ಇಂದೇ ಅರ್ಜಿ ಸಲ್ಲಿಸಿ

Karnataka District Court Recruitment 2024: ರಾಜ್ಯದ ವಿವಿಧ ಜಿಲ್ಲಾ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 10 ಮತ್ತು 12 ನೇ ತರಗತಿ ಪಾಸಾದ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...

ವಿದ್ಯಾರ್ಹತೆ: ಬೆರಳಚ್ಚುಗಾರರು ಹುದ್ದೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಕಮರ್ಷಿಯಲ್ ಪ್ರಾಕ್ಟೀಸ್‌ನಲ್ಲಿ 3 ವರ್ಷಗಳ ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣ ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಪ್ರೌಢ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಸೆಕ್ರೆಟರಿಯಲ್ ಪ್ರಾಕ್ಟೀಸ್ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಇದನ್ನೂ ಓದಿ: Daily GK Quiz: "ಡಿಸ್ಕವರಿ ಆಫ್ ಇಂಡಿಯಾ" ಕೃತಿಯನ್ನು ಬರೆದವರು ಯಾರು?

ಹುದ್ದೆಗಳು ಸಂಖ್ಯೆ: ಈ ನೇಮಕಾತಿಯಡಿ 3 ಬೆರಳಚ್ಚುಗಾರರು, 3 ಬೆರಳಚ್ಚು ನಕಲುಗಾರರು ಮತ್ತು 20 ಆದೇಶ ಜಾರಿಕಾರರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. 

ಆಯ್ಕೆ ವಿಧಾನ: ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗೆ ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಗಣಕಯಂತ್ರದಲ್ಲಿ ಬೆರಳಚ್ಚು ಮಾಡುವ ಕೌಶಲ್ಯ ಪರೀಕ್ಷೆಯಲ್ಲಿ ಗಳಿಸಿರುವ ಶೇಕಡಾವಾರು ಅಂಕಗಳು ಹಾಗೂ ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಆದೇಶ ಜಾರಿಗಾರ ಹುದ್ದೆಗೆ ಶೈಕ್ಷಣಿಕ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳು ₹300, ಪ್ರವರ್ಗ 2A, 2B & 3B ಅಭ್ಯರ್ಥಿಗಳು ₹150 ರೂ, SC/ST ಪ್ರವರ್ಗ ಹಾಗೂ ಅಂಗವಿಕಲ ಅಭ್ಯರ್ಥಿಗಳು ₹100 ಅರ್ಜಿ ಶುಲ್ಕ ಪಾವತಿಸಬೇಕು. 

ಶುಲ್ಕ ಪಾವತಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಹಾಗೂ ಯುಪಿಐ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ: ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ಪ್ರಮುಖ ದಿನಾಂಕಗಳು: ಆನ್​​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಆರಂಭ ದಿನಾಂಕ - ಜೂನ್ 20, ಆನ್​​ಲೈನ್​ ಮೂಲಕ ಅರ್ಜಿ ಸಲ್ಲಿಕೆಯ ಮುಕ್ತಾಯ ದಿನಾಂಕ - ಜುಲೈ 19

ಸಂಬಳ: ಬೆರಳಚ್ಚುಗಾರರು ಹಾಗೂ ಬೆರಳಚ್ಚು ನಕಲುಗಾರರು ಹುದ್ದೆಗೆ ಮಾಸಿಕ 21,400 ರಿಂದ 42,000 ರೂ. ವೇತನ, ಆದೇಶ ಜಾರಿಕಾರರು ಹುದ್ದೆಗೆ ಮಾಸಿಕ 19,950 ರಿಂದ 37,900 ರೂ. ವೇತನ ನೀಡಲಾಗುತ್ತದೆ.

ಇದನ್ನೂ ಓದಿ: PPFನಿಂದ NPSವರೆಗೆ ನೌಕರರಿಗಾಗಿ ಇಲ್ಲಿದೆ ಟಾಪ್ 5 ಉತ್ತಮ ಹೂಡಿಕೆ ಆಯ್ಕೆಗಳು

ಉದ್ಯೋಗ ಸ್ಥಳ: ಉತ್ತರ ಕನ್ನಡ ಜಿಲ್ಲೆ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Read More