Home> Career
Advertisement

Job Alert: ತಿಂಗಳಿಗೆ ₹63,000 ಸಂಬಳ ನೀಡುವ ಈ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿ

Vijayanagara Gram Panchayat Recruitment 2024: ವಿಜಯನಗರ ಗ್ರಾಮ ಪಂಚಾಯ್ತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾನಿಲಯಗಳಿಂದ 2nd PUC ಹಾಗೂ ಸರ್ಟಿಫಿಕೇಟ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪೂರ್ಣಗೊಳಿಸಿರಬೇಕು.

Job Alert: ತಿಂಗಳಿಗೆ ₹63,000 ಸಂಬಳ ನೀಡುವ ಈ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿ

Vijayanagara Gram Panchayat Recruitment 2024: ವಿಜಯನಗರ ಗ್ರಾಮ ಪಂಚಾಯ್ತಿಗಳಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರವು ಆಧಿಸೂಚನೆ ಪ್ರಕಟಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ನಿಗದಿಪಡಿಸಿರುವ ಅರ್ಹತೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. ವಿಜಯನಗರ ಗ್ರಾಮ ಪಂಚಾಯ್ತಿಯಲ್ಲಿ ಒಟ್ಟು 22 ಹುದ್ದೆಗಳು ಖಾಲಿ ಇವೆ. ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.   

ವಿದ್ಯಾರ್ಹತೆ: ವಿಜಯನಗರ ಗ್ರಾಮ ಪಂಚಾಯ್ತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾನಿಲಯಗಳಿಂದ 2nd PUC ಹಾಗೂ ಸರ್ಟಿಫಿಕೇಟ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: ICAI : ಮೇ ತಿಂಗಳಲ್ಲಿ ನಡೆಯಬೇಕಿದ್ದ 2024ರ ಸಿಎ ಪರೀಕ್ಷೆ ಮುಂದೂಡಿಕೆ : ಮಾಹಿತಿ ಇಲ್ಲಿದೆ

ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗೆ ₹19,000-₹63,000ವರೆಗೆ ವೇತನ ನೀಡಲಾಗುತ್ತದೆ.

ವಯೋಮಿತಿ: ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷಗಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 2A, 2B, 3A, 3Bಗೆ ಮೂರು ವರ್ಷ ಹಾಗೂ SC/ST ಅಭ್ಯರ್ಥಿಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ. 

ಆಸಕ್ತ ಮತ್ತು ಅರ್ಹ ಅಭ್ಯರ್ಥಿಳು ನಿಗದಿತ ಅರ್ಜಿ ನಮೂನೆಯ ಮೂಲಕ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ ದೃಢೀಕರಿಸಿದ ದಾಖಲೆಗಳೊಂದಿಗೆ ಮೆಂಬರ್ ಸೆಕ್ರೆಟರಿ, ಸೆಲೆಕ್ಷನ್ ಕಮಿಟಿ ಅಂಡ್ ಡೆಪ್ಯೂಟಿ ಸೆಕ್ರೆಟರಿಸ್, ಜಿಲ್ಲಾ ಪಂಚಾಯತ್ ವಿಜಯನಗರ, ಕಲೆಕ್ಟರ್ ಆಫೀಸ್ ಬಿಲ್ಡಿಂಗ್, TB ಡ್ಯಾಮ್ ರೋಡ್, ಹೊಸಪೇಟೆ- 583225 ಇಲ್ಲಿಗೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ ವಿಜಯನಗರ ಜಿಲ್ಲಾ ಪಂಚಾಯ್ತಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.

ಇದನ್ನೂ ಓದಿ: ಲೋಕಸಭೆ ಚುನಾವಣೆ : ಧಾರ್ಮಿಕ ಸ್ಥಳಗಳಲ್ಲಿ ರಾಜಕೀಯ ಚಟುವಟಿಕೆಗಳಿಗೆ ನಿರ್ಬಂಧ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Read More