Home> Crime
Advertisement

ಕೊಳೆತ ಸ್ಥಿತಿಯಲ್ಲಿ ಮನೆಯಲ್ಲಿಯೇ ಮಹಿಳೆಯ ಶವ ಪತ್ತೆ

Kannada Crime News: ಗೌರಿಬಿದನೂರು ನಗರದ ಗಂಗಾನಗರದ ಮನೆಯಲ್ಲಿ ಮೃತ ಪಟ್ಟ ಮಹಿಳೆಯನ್ನು ಲಕ್ಷ್ಮಿದೇವಮ್ಮ (43) ಎಂದು ತಿಳಿದು ಬಂದಿದೆ. ಸದ್ಯ ಮೃತಳ ಗಂಡ ಕೃಷ್ಣಪ್ಪ ಪರಾರಿ ಯಾಗಿದ್ದು ಕೊಲೆಯ ಹಿಂದೆ ಮೃತಳ‌ ಗಂಡನ ಕೈವಾಡ ಇದೆ ಎಂದು ಮಾಹಿತಿ ತಿಳಿದು ಬಂದಿದೆ.

ಕೊಳೆತ ಸ್ಥಿತಿಯಲ್ಲಿ ಮನೆಯಲ್ಲಿಯೇ ಮಹಿಳೆಯ ಶವ ಪತ್ತೆ

Crime News: ಕೊಲೆಯಾಗಿ 5 ದಿನಗಳ ನಂತರ ಕೊಳೆತ ಸ್ಥಿತಿಯಲ್ಲಿ ಮನೆಯಲ್ಲಿಯೇ ಮಹಿಳೆ ಶವ ಪತ್ತೆಯಾಗಿರುವ ಘಟನೆ ಜಿಲ್ಲೆಯ ಗೌರಿಬಿದನೂರು ನಗರದ ಹೊರವಲಯದಲ್ಲಿ ಬೆಳಕಿಗೆ ಬಂದಿದೆ.

ಗೌರಿಬಿದನೂರು ನಗರದ ಗಂಗಾನಗರದ ಮನೆಯಲ್ಲಿ ಮೃತ ಪಟ್ಟ ಮಹಿಳೆಯನ್ನು ಲಕ್ಷ್ಮಿದೇವಮ್ಮ (43) ಎಂದು ತಿಳಿದು ಬಂದಿದೆ. ಸದ್ಯ ಮೃತಳ ಗಂಡ ಕೃಷ್ಣಪ್ಪ ಪರಾರಿ ಯಾಗಿದ್ದು ಕೊಲೆಯ ಹಿಂದೆ ಮೃತಳ‌ ಗಂಡನ ಕೈವಾಡ ಇದೆ ಎಂಬುವುದು ಮಾಹಿತಿ ತಿಳಿದು ಬಂದಿದೆ

ಇದನ್ನೂ ಓದಿ- Tumakuru: ತುಮಕೂರಿನಲ್ಲಿ ನಾಪತ್ತೆಯಾಗಿದ್ದ 4 ಮಕ್ಕಳು ಹಾಸನದಲ್ಲಿ ಪತ್ತೆ..!

ಗೌರಿಬಿದನೂರು ತಾಲ್ಲೂಕಿನ ರಾಮಚಂದ್ರಪುರ ಸರಕಾರಿ ಶಾಲೆಯಲ್ಲಿ ಶಿಕ್ಷಕನಾಗಿ ಕೃಷ್ಣಪ್ಪ ಸೇವೆ ಸಲ್ಲಿಸುತ್ತಿದ್ದರು. ಆದರೆ   ಕಳೆದ ಮೂರು ದಿನಗಳಿಂದ ಕೃಷ್ಣಪ್ಪ ಪರಾರಿಯಾಗಿದ್ದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಇನ್ನೂ ಕಳೆದ ನಾಲ್ಕು ದಿನಗಳಿಂದ ಮೃತ ಮಹಿಳೆಯ ಮಕ್ಕಳು ತಾಯಿಯೊಂದಿಗೆ ಮಾತನಾಡಲು ಪೋನ್ ಕರೆ ಮಾಡಿದ್ದಾರೆ. ಆದರೆ ಕರೆ ಸ್ವೀಕರಿಸದ ಹಿನ್ನಲೇ ಮನೆಯ ಬಳಿ ಬಂದು ನೋಡಿದ ವೇಳೆ ತಾಯಿ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.
 
ಮೃತ ಮಹಿಳೆಗೆ ಇಬ್ಬರು ಹೆಣ್ಣು ಮಕ್ಕಳಿದ್ದು ಲಿಖಿತ ಎಂಬ ಮಗಳಿಗೆ ಮದುವೆಯಾಗಿದ್ದು, ಎರಡನೇ ಮಗಳಾದ ಲೀಲಾ ಬೆಂಗಳೂರಿನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದಾಳೆ. ಇನ್ನೂ ಮನೆಯಲ್ಲಿ ಪ್ರತಿನಿತ್ಯವು ಗಂಡ ಹೆಂಡತಿಯ ಜಗಳವಾಡಿಕೊಳ್ಳುತ್ತಿದ್ದರು ಎಂದು ಪಕ್ಕದ ನಿವಾಸಿಗಳು ತಿಳಿಸಿದ್ದಾರೆ.

ಇದನ್ನೂ ಓದಿ- Aluminium Babu: ನಟೋರಿಯಸ್ ರೌಡಿಶೀಟರ್ ಅಲ್ಯೂಮಿನಿಯಂ ಬಾಬು ಹತ್ಯೆ, ಕಾಡಿನಲ್ಲಿ ಶವ ಪತ್ತೆ!

ಸದ್ಯ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಿಎಲ್ ನಾಗೇಶ್ ಭೇಟಿ ನೀಡಿ ಪರಿಶೀಲಿಸಿದ್ದು ಗಂಡ ಕೃಷ್ಣಪ್ಪ ಕೊಲೆ ಮಾಡಿ ಪರಾರಿಯಾಗಿರಬಹುದು ಆದರಿಂದ ಈಗಾಗಲೇ ಆರೋಪಿಯ ಪತ್ತೆಗೆ ಸರ್ಕಲ್ ಇನ್ಸ್ಪೆಕ್ಟರ್ ಕೆಪಿ ಸತ್ಯನಾರಾಯಣ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದ್ದು ಆರೋಪಿ ಸಿಕ್ಕ ಮೇಲೆ ಘಟನೆಯ ಸಂಪೂರ್ಣ ಮಾಹಿತಿ ತಿಳಿಯುತ್ತದೆ ಇನ್ನು ಮಗಳ ದೂರಿನ ಮೇರೆಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Read More