Home> Crime
Advertisement

ಹೆತ್ತತಾಯಿಗೆ ಚಾಕು ಇರಿದು ಪ್ರಿಯಕರನ ಜೊತೆ ಪರಾರಿಯಾದ ಮಗಳು

ತಾಯಿಯನ್ನೇ ಚಾಕುವಿನಿಂದ ಇರಿದು ಅಪ್ತಾಪ್ತೆಯೊಬ್ಬಳು ತನ್ನ ಪ್ರೇಮಿಯೊಂದಿಗೆ ಪರಾರಿಯಾಗಿರುವ ಘಟನೆ ಧಾರವಾಡ ನಗರದಲ್ಲಿ ನಡೆದಿದೆ. 

ಹೆತ್ತತಾಯಿಗೆ ಚಾಕು ಇರಿದು ಪ್ರಿಯಕರನ ಜೊತೆ ಪರಾರಿಯಾದ ಮಗಳು

ಧಾರವಾಡ: ತಾಯಿಯನ್ನೇ ಚಾಕುವಿನಿಂದ ಇರಿದು ಅಪ್ತಾಪ್ತೆಯೊಬ್ಬಳು ತನ್ನ ಪ್ರೇಮಿಯೊಂದಿಗೆ ಪರಾರಿಯಾಗಿರುವ ಘಟನೆ ಧಾರವಾಡ ನಗರದಲ್ಲಿ ನಡೆದಿದೆ. 

ಕಳೆದ ರಾತ್ರಿ ಪ್ರಿಯಕರನ ಜೊತೆ ಸೇರಿ ತಾಯಿಗೆ ಇರಿದು ಬಾಲಕಿ ಪರಾರಿಯಾಗಿದ್ದಾಳೆ. ಕಳೆದ ವರ್ಷ ಇದೇ ಬಾಲಕಿ ವಿಚಾರವಾಗಿ ಪ್ರಿಯಕರ ಜೈಲು ಸೇರಿದ್ದ. ಪೋಕ್ಸೋ ಕಾಯ್ದೆ ಅಡಿ ಪ್ರಿಯಕರನನ್ನು ಬಂಧಿಸಲಾಗಿತ್ತು. 

ಇದನ್ನೂ ಓದಿ: "ಕೋವಿಡ್ ಗಾಳಿ ಮೇಲೆ ಬರಬಹುದು, ಉಸಿರಾಟದ ತೊಂದರೆಯಾಗಿ ಜನ ಬಿದ್ದು ಸಾಯಬಹುದು": ಕೋಡಿಹಳ್ಳಿ ಶ್ರೀ ಭವಿಷ್ಯ

ಆದರೆ ಏಪ್ರಿಲ್‌ನಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಬಂದಿದ್ದ. ಅಪ್ರಾಪ್ತೆ ಕೂಡಾ ಸಾಂತ್ವನ ಕೇಂದ್ರದಲ್ಲಿ ಇದ್ದಳು. ಮಗಳನ್ನು ಕಾಲೇಜಿಗೆ ಸೇರಿಸಲು ತಾಯಿ, ಮನೆಗೆ ವಾಪಸ್‌ ಕದೆರುಕೊಂಡು ಬಂದಿದ್ದರು.

ಕಳೆದ ರಾತ್ರಿ ಬಾಲಕಿ ಹಾಗೂ ಆಕೆಯ ಪ್ರೇಮಿ ಸೇರಿ ತಾಯಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಘಟನೆಯಲ್ಲಿ ಗಾಯಗೊಂಡ ತಾಯಿಯನ್ನು ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಧಾರವಾಡ ಉಪನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More