Home> Crime
Advertisement

Chamarajanagar : 14 ವರ್ಷದ ಬಾಲಕಿ ಜೊತೆ ಬಲವಂತದ ಮದುವೆ: ತಾಯಿ-ಮಗನಿಗೆ 20 ವರ್ಷ ಶಿಕ್ಷೆ 

ಅಪ್ರಾಪ್ತ ಬಾಕಿಯನ್ನು ಬಲವಂತದಿಂದ ಮದುವೆ ಮಾಡಿಕೊಂಡಿದ್ದ ಯುವಕ ಹಾಗೂ ಇದಕ್ಕೆ ಸಹಕರಿಸಿದ್ದ ಈತನ ತಾಯಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಚಾಮರಾಜನಗರ ಜಿಲ್ಲಾ ಮಕ್ಕಳ ಸ್ನೇಹಿ ನ್ಯಾಯಾಲಯವು ಆದೇಶ ನೀಡಿದೆ. 

Chamarajanagar : 14 ವರ್ಷದ ಬಾಲಕಿ ಜೊತೆ ಬಲವಂತದ ಮದುವೆ: ತಾಯಿ-ಮಗನಿಗೆ 20 ವರ್ಷ ಶಿಕ್ಷೆ 

ಚಾಮರಾಜನಗರ : ಅಪ್ರಾಪ್ತ ಬಾಕಿಯನ್ನು ಬಲವಂತದಿಂದ ಮದುವೆ ಮಾಡಿಕೊಂಡಿದ್ದ ಯುವಕ ಹಾಗೂ ಇದಕ್ಕೆ ಸಹಕರಿಸಿದ್ದ ಈತನ ತಾಯಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಚಾಮರಾಜನಗರ ಜಿಲ್ಲಾ ಮಕ್ಕಳ ಸ್ನೇಹಿ ನ್ಯಾಯಾಲಯವು ಆದೇಶ ನೀಡಿದೆ. 

ತಮಿಳುನಾಡಿನ ತಿರಚಂಗೂರು ತಾಲೂಕಿನ ಶರಣ್ ರಾಜ್(25) ಹಾಗೂ ಈತನ ತಾಯಿ ಸೆಲ್ವಿ(40) ಶಿಕ್ಷೆಗೊಳಗಾದ ಅಪರಾಧಿಗಳು.  14 ವರ್ಷದ ಬಾಲಕಿಯನ್ನು ಪುಸಲಾಯಿಸಿ ಬೈಕಿನಲ್ಲಿ ಹತ್ತಿಸಿಕೊಂಡು ಕರೆದೊಯ್ದು ಬಲವಂತದಿಂದ ಮದುವೆಯಾಗಿ, ಲೈಂಗಿಕ‌ ದೌರ್ಜನ್ಯ ಎಸಗಿದ್ದರಿಂದ ನ್ಯಾ. ನಿಶಾರಾಣಿ ತಾಯಿ ಹಾಗೂ ಮಗನಿಗೆ ತಲಾ 20 ವರ್ಷ ಕಠಿಣ ಶಿಕ್ಷೆ ವಿಧಿಸಿದ್ದಾರೆ. ಈ ಪ್ರಕರಣದಲ್ಲಿ ಮತ್ತೋರ್ವ ಆರೋಪಿ ತಲೆ ಮರೆಸಿಕೊಂಡಿದ್ದಾನೆ. 

ಇದನ್ನೂ ಓದಿ : Hassan : ಮುಖಕ್ಕೆ ಮಾರಕವಾದ ಮೇಕಪ್ : ಮುಂದೂಡಿದ ಮದುವೆ!

2018 ರಲ್ಲಾಗಿತ್ತು ಈ ಮದುವೆ : 

ಶರಣ್ ರಾಜ್ ಎಲೆಕ್ಟ್ರೆಷಿಯನ್ ಕೆಲಸ ಮಾಡಿಕೊಂಡಿದ್ದು ತಾಯಿ ಸೆಲ್ವಿ ಪೇಪರ್ ಮಿಲ್ ನಲ್ಲಿ ನೌಕರಿ ಮಾಡುತ್ತಿದ್ದರು. 2018 ರ ಸೆ. 9 ರಂದು ಹನೂರು ತಾಲೂಕಿನ ಗ್ರಾಮವೊಂದರ 14 ವರ್ಷದ ಬಾಲಕಿಯನ್ನು ಶರಣ್ ರಾಜ್ ತನ್ನ ಬೈಕಿನಲ್ಲಿ ಪುಸಲಾಯಿಸಿ ಕರೆದೊಯ್ದಿದ್ದ. ಬಳಿಕ, ಆಕೆ ಜೊತೆ ಬಲವಂತದಿಂದ ಮದುವೆಯನ್ನೂ ಮಾಡಿಕೊಂಡು ಆಕೆಗೆ ಲೈಂಗಿಕ ದೌರ್ಜನ್ಯ ಎಸಗಿದ್ದನು. ಕೃತ್ಯಕ್ಕೆ ತಾಯಿ ಸೆಲ್ವಿ ಮತ್ತು‌ ಶಶಿಕುಮಾರ್ ಎಂಬವರು ಸಹಕರಿಸಿದ್ದರು. ಈ ಘಟನೆ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಅಂದಿನ ಇನ್ಸ್ಪೆಕ್ಟರ್ ಬಿ.ಮಹೇಶ್ ಪ್ರಕರಣ ದಾಖಲಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿ( ಕೃತ್ಯದ ಶಶಿಕುಮಾರ್ ಎಂಬಾತ ತಲೆ ಮರೆಸಿಕೊಂಡಿದ್ದಾನೆ) ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ವಾದ-ಪ್ರತಿವಾದ ನಡೆದು ಆರೋಪಿಗಳ ವಿರುದ್ಧ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ತಾಯಿ-ಮಗನಿಗೆ ನ್ಯಾ.ನಿಶಾರಣಿ ತಲಾ 20 ವರ್ಷ ಕಠಿಣ ಶಿಕ್ಷೆ  10 ಸಾವಿರ ರೂ. ದಂಡ‌ ವಿಧಿಸಿದ್ದಾರೆ. ಜೊತೆಗೆ, ಕಾನೂನು ಸೇವಾ ಪ್ರಾಧಿಕಾರವು ನೊಂದ ಬಾಲಕಿಗೆ 1 ಲಕ್ಷ ರೂ. ಪರಿಹಾರವನ್ನು 30 ದಿನದೊಳಗೆ ಕೊಡಬೇಕೆಂದು ಆದೇಶಿಸಿದ್ದಾರೆ. 

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಕೆ.ಯೋಗೇಶ್ ವಾದ ಮಂಡಿಸಿದ್ದರು.

ಇದನ್ನೂ ಓದಿ : ಡಿಜೆಹಳ್ಳಿ ಪೊಲೀಸರ ಭರ್ಜರಿ ಆಪರೇಷನ್ : 413 ಕೆಜಿ ಗಾಂಜಾ ಸೀಜ್..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More