Home> Crime
Advertisement

Honour Killing: ಕೋಲಾರದಲ್ಲಿ ತಂದೆಯಿಂದಲೇ ಮಗಳ ಮರ್ಯಾದಾ ಹತ್ಯೆ..!

ಭಾನುವಾರ(ಆಗಸ್ಟ್ 27) ಬೆಳ್ಳಂಬೆಳಿಗ್ಗೆ ತಹಶೀಲ್ದಾರ್ ಹರ್ಷವರ್ಧನ್ ಅವರ ಸಮ್ಮುಖದಲ್ಲಿ ಯುವತಿಯ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಪ್ರಕರಣ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸರಿಂದ‌ ತಂದೆ ವೆಂಕಟೇಶಗೌಡ, ಮೋಹನ್ ಮತ್ತು ಚೌಡೇಗೌಡ ಎಂಬುವರನ್ನು ಬಂಧಿಸಲಾಗಿದೆ.

Honour Killing: ಕೋಲಾರದಲ್ಲಿ ತಂದೆಯಿಂದಲೇ ಮಗಳ ಮರ್ಯಾದಾ ಹತ್ಯೆ..!

ಕೋಲಾರ: ಕೋಲಾರದಲ್ಲಿ ಮತ್ತೊಂದು ಮರ್ಯಾದ ಹತ್ಯೆ ನಡೆದಿದೆ. ತಂದೆಯೇ ಹೆತ್ತ ಮಗಳನ್ನು ಕೊಲೆ ಮಾಡಿರುವ ಘಟನೆ ಕೋಲಾರ ತಾಲೂಕಿನ ತೊಟ್ಲಿ ಗ್ರಾಮದಲ್ಲಿ ನಡೆದಿದೆ. ರಮ್ಯಾ (19) ಕೊಲೆಯಾದ ಯುವತಿ.

ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಮಗಳು ರಮ್ಯಾಳನ್ನು ತಂದೆ ವೆಂಕಟೇಶಗೌಡ ಕೊಲೆ ಮಾಡಿದ್ದಾರೆ. ಎಷ್ಟೇ ಬುದ್ದಿವಾದ ಹೇಳಿದರೂ ಕೇಳದೇ ಹೋಗಿದ್ದ ಮಗಳನ್ನು ಹತ್ಯೆ ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸಿಗುತ್ತೆ ಬಾಡಿಗೆ ಗಣೇಶನ ಮೂರ್ತಿ

ಆಗಸ್ಟ್ 25ರಂದು ಮಗಳ ಹತ್ಯೆ ನಡೆಸಿದ ಬಳಿಕ ಸದ್ದಿಲ್ಲದೆ ಹೆತ್ತವರು ಆಕೆಯ ಅಂತ್ಯಸಂಸ್ಕಾರ ಮುಗಿಸಿದ್ದರು. ಬಳಿಕ ಊರಿನಲ್ಲಿ ಯುವತಿಯ ಕೊಲೆ ಮಾಡಿರುವ ಬಗ್ಗೆ ಗುಸು ಗುಸು ಶುವಾಗಿತ್ತು. ಈ ಹಿನ್ನೆಲೆ ಪೊಲೀಸರು ಆಕೆಯ ತಂದೆಯನ್ನು ಕರೆಸಿ ವಿಚಾರಣೆ ನಡೆಸಿದ್ದರು. ಈ ವೇಳೆ ಮರ್ಯಾದಾ ಹತ್ಯೆಯ ಪ್ರಕರಣ ಬೆಳಕಿಗೆ ಬಂದಿದೆ.

ಭಾನುವಾರ(ಆಗಸ್ಟ್ 27) ಬೆಳ್ಳಂಬೆಳಿಗ್ಗೆ ತಹಶೀಲ್ದಾರ್ ಹರ್ಷವರ್ಧನ್ ಅವರ ಸಮ್ಮುಖದಲ್ಲಿ ಯುವತಿಯ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಪ್ರಕರಣ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸರಿಂದ‌ ತಂದೆ ವೆಂಕಟೇಶಗೌಡ, ಮೋಹನ್ ಮತ್ತು ಚೌಡೇಗೌಡ ಎಂಬುವರನ್ನು ಬಂಧಿಸಲಾಗಿದೆ. ಈ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಗೆ ಐದು ವರ್ಷ ಕೆಲಸ ಮಾಡಲು ಅವಕಾಶ ಕೊಟ್ಟಿದ್ದಾರೆ

 ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Read More