Home> Crime
Advertisement

Chamarajanagar: ಕುಡಿದ ಮತ್ತಿನಲ್ಲಿ ಆ್ಯಸಿಡ್ ಕುಡಿದ ವ್ಯಕ್ತಿ ಸಾವು..!

Man Dies After Drinking Acid: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ನೀರು ಎಂದು ತಿಳಿದು ಶೌಚಾಲಯ ಸ್ವಚ್ಛಗೊಳಿಸಲು ಬಳಸುವ ಆ್ಯಸಿಡ್ ಕುಡಿದು ಮೃತಪಟ್ಟಿರುವ ಘಟನೆ ಚಾಮರಾನಗರ ಜಿಲ್ಲೆಯಲ್ಲಿ ನಡೆದಿದೆ.

Chamarajanagar: ಕುಡಿದ ಮತ್ತಿನಲ್ಲಿ ಆ್ಯಸಿಡ್ ಕುಡಿದ ವ್ಯಕ್ತಿ ಸಾವು..!

ಚಾಮರಾಜನಗರ: ಕುಡಿದ ಮತ್ತಿನಲ್ಲಿ ನೀರು ಎಂದು ಆ್ಯಸಿಡ್ ಕುಡಿದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸಿದ್ದರಾಜು (35) ಮೃತ ದುರ್ದೈವಿ. ಭಾನುವಾರ(ಜುಲೈ 23) ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕುಡಿದ ಮತ್ತಿನಲ್ಲಿ ನೀರು ಎಂದು ಭಾವಿಸಿ ಸಿದ್ದರಾಜು ಮನೆಯಲ್ಲಿಟ್ಟಿದ್ದ ಶೌಚಾಲಯ ಸ್ವಚ್ಛಗೊಳಿಸುವ ಆಸಿಡ್ ಸೇವಿಸಿ ಅಸ್ವಸ್ಥಗೊಂಡಿದ್ದ.

ಇದನ್ನೂ ಓದಿ: ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯ ಪ್ರಾಣ ಕಾಪಾಡಿದ ಪೊಲೀಸ್ ಪೇದೆ

ಆಸಿಡ್ ಸೇವಿಸಿದ ಬಳಿಕ ಬಿದ್ದು ಒದ್ದಾಡುತ್ತಿದ್ದ ಸಿದ್ದರಾಜುನನ್ನು ಚಿಕಿತ್ಸೆಗಾಗಿ ಗ್ರಾಮಸ್ಥರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ರವಾನಿಸಲಾಗಿತ್ತು.

ಆದರೆ ದುರಾದೃಷ್ಟವಶಾತ್ ಸೋಮವಾರ(ಜುಲೈ 24) ಚಿಕಿತ್ಸೆ ಫಲಕಾರಿಯಾಗದೆ ಸಿದ್ದರಾಜು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Dam Water Level July 25: ರಾಜ್ಯದ ಪ್ರಮುಖ ಡ್ಯಾಂಗಳಲ್ಲಿರುವ ನೀರಿನ ಮಟ್ಟದ ಮಾಹಿತಿ ಇಲ್ಲಿದೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More