Home> Crime
Advertisement

Fake Bomb Call: ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ

ಸುಮಾರು ಎರಡು ಗಂಟೆಗಳಿಗೂ ಹೆಚ್ಚು ಕಾಲ ತಪಾಸಣೆ ನಡೆಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ ಬಳಿಕ ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದು ನಿಟ್ಟುಸಿರು ಬಿಟ್ಟಿದ್ದಾರೆ.

Fake Bomb Call: ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ

ಬೆಂಗಳೂರು: ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪರಿಚಿತ ಇಂದು ಮುಂಜಾನೆ ಹುಸಿ ಬಾಂಬ್ ಕರೆ ಬಂದಿದ್ದು, ಇದರಿಂದಾಗಿ ವಿಮಾನ ನಿಲ್ದಾಣದಲ್ಲಿ ಕೆಲ ಕಾಲ ಭಯದ ವಾತಾವರಣ ನಿರ್ಮಾಣವಾಗಿತ್ತು. 

ಇಂದು ಬೆಳಗಿನ ಜಾವ 3.30 ರ ಸಮಯದಲ್ಲಿ ಅಪರಿಚಿತ ವ್ಯಕ್ತಿ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ, ಕೆಂಪೇಗೌಡ ಅಂತರರಾಷ್ಟ್ರೀಯ  ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ- Heavy Rains : ಬೆಂಗಳೂರಿನಲ್ಲಿ ಭಾರೀ ಮಳೆ : ರಾಜ್ಯದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್!

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಏರ್ಪೋರ್ಟ್ ಪೊಲೀಸರು ತಕ್ಷಣವೇ ಸ್ಥಳಕ್ಕೆ ದೌಡಾಯಿಸಿ ಎಲ್ಲೆಡೆ ಪರಿಶೀಲನೆ ನಡೆಸಿದರು. ಡಾಗ್ ಸ್ಕ್ವಾಡ್, ಸಿಎಸ್ ಎಫ್, ಬಿಎಸ್ ಎಫ್ ತಂಡದವರು ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದರು. 

ಏರ್‌ಲೈನ್ ಗೇಟ್‌ಗಳು ಸೇರಿದಂತೆ ವಿಮಾನ ನಿಲ್ದಾಣದ ಟರ್ಮಿನಲ್‌ನಲ್ಲಿ ಸುಮಾರು ಎರಡು ಗಂಟೆಗಳಿಗೂ ಹೆಚ್ಚು ಕಾಲ ತಪಾಸಣೆ ನಡೆಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ ಬಳಿಕ ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದು ನಿಟ್ಟುಸಿರು ಬಿಟ್ಟಿದ್ದಾರೆ.

ಇದನ್ನೂ ಓದಿ- ರಾಜ್ಯದಲ್ಲಿ 4 ದಿನ ವರುಣಾರ್ಭಟ: ರಾಜಧಾನಿಯಲ್ಲಿ ಕಟ್ಟೆಚ್ಚರ

ಬೆಳ್ಳಂಬೆಳಗ್ಗೆಯೇ ಈ ಹುಸಿ ಬಾಂಬ್ ಕರೆಯಿಂದಾಗಿ  ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪರಿಶೀಲನೆ ಬಳಿಕ ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದು ಪ್ರಯಾಣಿಕರಲ್ಲಿ ಆತಂಕ ದೂರವಾಗಿದೆ. ಇದೀಗ ಹುಸಿ ಬಾಂಬ್ ಬೆದರಿಕೆ ಹಾಕಿದ ವ್ಯಕ್ತಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More