Home> Crime
Advertisement

Mangaluru: ರನ್ನಿಂಗ್ ರೇಸ್‍ನಲ್ಲಿ ಬಹುಮಾನ ಸಿಗದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ..!  

Student Suicide: ಇತ್ತೀಚೆಗಷ್ಟೇ ಬಿಹಾರದಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ ರೇಸ್‌ನಲ್ಲಿ ಪಾಲ್ಗೊಂಡಿದ್ದರು. ಆದರೆ ಓಟದ ಸ್ಪರ್ಧೆಯಲ್ಲಿ ಬಹುಮಾನ ಸಿಗದ ಕಾರಣ ಆಕೆ ಬೇಸರಗೊಂಡಿದ್ದಳು. ​

Mangaluru: ರನ್ನಿಂಗ್ ರೇಸ್‍ನಲ್ಲಿ ಬಹುಮಾನ ಸಿಗದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ..!  

ಮಂಗಳೂರು: ರನ್ನಿಂಗ್ ರೇಸ್‍ನಲ್ಲಿ ಬಹುಮಾನ ಸಿಗದ ಕಾರಣ ಮನನೊಂದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸಂಪ್ಯದಲ್ಲಿ ನಡೆದಿದೆ. ನಿಶಾ (17) ಸಾವನ್ನಪ್ಪಿದ ವಿದ್ಯಾರ್ಥಿನಿ.  

ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ಕಾರಣ ನಿಶಾ ಖಿನ್ನತೆಗೊಳಗಾಗಿದ್ದಳು. ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿರುವ ಈಕೆ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಳೆದ 1 ವಾರದ ಹಿಂದೆಯೇ ನಿಶಾ ವಿಷ ಸೇವಿಸಿದ್ದಳು. ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.  

ಇದನ್ನೂ ಓದಿ: ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆ ಸಂವಿಧಾನದ ಆಶಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಇತ್ತೀಚೆಗಷ್ಟೇ ಬಿಹಾರದಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ ರೇಸ್‌ನಲ್ಲಿ ಪಾಲ್ಗೊಂಡಿದ್ದರು. ಆದರೆ ಓಟದ ಸ್ಪರ್ಧೆಯಲ್ಲಿ ಬಹುಮಾನ ಸಿಗದ ಕಾರಣ ಆಕೆ ಬೇಸರಗೊಂಡಿದ್ದಳು. ಇದರಿಂದ ಖಿನ್ನತೆಗೊಳದ ಆಕೆ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಕೂಡಲೇ ಆಕೆಯನ್ನು ಗಮನಿಸಿದ ಪೋಷಕರು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದ್ದರು.   

ಪುತ್ತೂರಿನಿಂದ ಮಂಗಳೂರಿಗೆ ಕರೆದೊಯ್ಯುವಂತೆ ವೈದ್ಯರು ತಿಳಿಸಿದ್ದರು. ಹೀಗಾಗಿ ಕಳೆದೊಂದು ವಾರದಿಂದ ನಿಶಾ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಸಾವನ್ನಪ್ಪಿದ್ದಾಳೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಎರಡು ಟ್ಯಾಂಕರ್ ಗಳ ನಡುವೆ‌ ಭೀಕರ ಅಪಘಾತ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More