Home> Crime
Advertisement

Road Accident: ಲಾರಿ-ಸರ್ಕಾರಿ ಬಸ್‌ ನಡುವೆ ಭೀಕರ ಅಪಘಾತ, 8 ಮಂದಿ ಸ್ಥಳದಲ್ಲೇ ಸಾವು!

Road Accident: ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರು ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಪಲಮನೇರು ಕಡೆಯಿಂದ ಚಿತ್ತೂರು ಕಡೆಗೆ ಹೋಗುತ್ತಿದ್ದ ಸರ್ಕಾರಿ ಸಾರಿಗೆ ಬಸ್ ಮೊಗಿಲಿ ಘಾಟ್ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

Road Accident: ಲಾರಿ-ಸರ್ಕಾರಿ ಬಸ್‌ ನಡುವೆ ಭೀಕರ ಅಪಘಾತ, 8 ಮಂದಿ ಸ್ಥಳದಲ್ಲೇ ಸಾವು!

Road Accident: ಲಾರಿ ಮತ್ತು ಸರ್ಕಾರಿ ಬಸ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ 8 ಮಂದಿ ಸಾವನ್ನಪ್ಪಿದ್ದು, 33 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಆಂಧ್ರಪ್ರದೇಶದಲ್ಲಿ ಶುಕ್ರವಾರ (ಸೆಪ್ಟೆಂಬರ್‌ 13) ಈ ದುರ್ಘಟನೆ ನಡೆದಿದೆ.

ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಮೊಘಲಿ ಘಾಟ್ ರಸ್ತೆಯಲ್ಲಿ ಎರಡು ಲಾರಿಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 33 ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಗಾಯಾಳುಗಳನ್ನು ಚಿತ್ತೂರು ಜಿಲ್ಲೆಯ ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ನಾಳೆ ರಾಜ್ಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ..! ಸೋಮವಾರವೂ ರಜೆ, ಸರ್ಕಾರದ ಈ ನಿರ್ಧಾರಕ್ಕೆ ಕಾರಣವೇನು..?

ಮಾಹಿತಿ ತಿಳಿದ ತಕ್ಷಣ ಪೊಲೀಸರು ಮತ್ತು ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ಸ್ಥಳಾಂತರಿಸಿದರು. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳಾಂತರಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಲಾಗಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರು ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಪಲಮನೇರು ಕಡೆಯಿಂದ ಚಿತ್ತೂರು ಕಡೆಗೆ ಹೋಗುತ್ತಿದ್ದ ಸರ್ಕಾರಿ ಸಾರಿಗೆ ಬಸ್ ಮೊಗಿಲಿ ಘಾಟ್ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಳಿಕ ಅದೇ ರಸ್ತೆಯಲ್ಲಿ ಕಬ್ಬಿಣದ ಲೋಡ್‌ನೊಂದಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಎರಡು ವಾಹನಗಳು ಮತ್ತೊಂದು ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದ ತೀವ್ರತೆ ಹೆಚ್ಚಿದೆ ಎನ್ನಲಾಗಿದೆ.

ಇದನ್ನೂ ಓದಿ: ವರ್ಜಿನ್‌, 30 ಲಕ್ಷ ಸಂಬಳ ಪಡೆವ ವರ ಎರಡನೇ ಮದುವೆಯಾಗಲು ಬೇಕಂತೆ ಈ ಸುಂದರಿಗೆ.! ರೂಲ್ಸ್‌ ಬೇರೆ ಇದಾವೆ ಗುರು.. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More