Home> Crime
Advertisement

ಹಿಟ್ ಅಂಡ್ ರನ್ ಮಾಡಿ ಎಸ್ಕೇಪ್ ಆಗಿದ್ದ ಅಪರಾಧಿ ಪೊಲೀಸ್ ಬಲೆಗೆ

ಕ್ಯಾಬ್ ಚಾಲನಾಗಿದ್ದ ರಘುನಾಥ್ 2009 ರಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಎನ್ಐಆರ್ ಲೇಔಟ್ ಬಳಿ ಪಾದಚಾರಿಯೊಬ್ಬರಿಗೆ ಗುದ್ದಿ ಹಿಟ್ ಅಂಡ್ ರನ್ ಮಾಡಿದ್ದ‌‌‌. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು  ಆರೋಪಿಯನ್ನು ಬಂಧಿಸಿ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದರು‌. 
 
ಹಿಟ್ ಅಂಡ್ ರನ್ ಮಾಡಿ ಎಸ್ಕೇಪ್ ಆಗಿದ್ದ ಅಪರಾಧಿ ಪೊಲೀಸ್ ಬಲೆಗೆ

ಬೆಂಗಳೂರು: ಹಿಟ್ ಅಂಡ್ ರನ್ ಮಾಡಿ  ಶಿಕ್ಷೆಗೊಳಗಾಗಿ ತಲೆಮರೆಸಿಕೊಂಡಿದ್ದ ಅಪರಾಧಿಯನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ರಘುನಾಥ್ ಪಾಸ್ವಾನ್ ತಲೆಮರೆಸಿಕೊಂಡಿದ್ದ ಅಪರಾಧಿ.

ಕ್ಯಾಬ್ ಚಾಲನಾಗಿದ್ದ ರಘುನಾಥ್ 2009 ರಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಎನ್ಐಆರ್ ಲೇಔಟ್ ಬಳಿ ಪಾದಚಾರಿಯೊಬ್ಬರಿಗೆ ಗುದ್ದಿ ಹಿಟ್ ಅಂಡ್ ರನ್ ಮಾಡಿದ್ದ‌‌‌. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು  ಆರೋಪಿಯನ್ನು ಬಂಧಿಸಿ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದರು‌. 

ಇದನ್ನೂ ಓದಿ- ಪ್ರೇಯಸಿ ಜೊತೆ ಐಷಾರಾಮಿ ಜೀವನ ನಡೆಸೋಕೆ ಎಟಿಎಂ ದೋಚಿದ್ದ ಸೆಕ್ಯೂರಿಟಿ ಗಾರ್ಡ್ ಬಂಧನ

ಹಿಟ್ ಅಂಡ್ ರನ್ ಪ್ರಕರಣದಲ್ಲಿ ಆರೋಪಿ ರಘುನಾಥ್ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ಆತನಿಗೆ ಆರು ತಿಂಗಳ ಶಿಕ್ಷೆ ಹಾಗೂ 5 ಸಾವಿರ ದಂಡ ವಿಧಿಸಿತ್ತು. ಕೆಳಹಂತದ ನ್ಯಾಯಾಲಯ ತೀರ್ಪು ಪ್ರಶ್ನಿಸಿ ರಘುನಾಥ್ ಹೈಕೋರ್ಟ್ ಮೆಟ್ಟಿಲೇರಿದ್ದ‌. 

ಇದನ್ನೂ ಓದಿ- Suicide: ನೇಣು ಬಿಗಿದ ಸ್ಥಿತಿಯಲ್ಲಿ ಕೇಂದ್ರ ಸಚಿವರ ಸೋದರಳಿಯನ ಶವ ಪತ್ತೆ..!

ಹೈಕೋರ್ಟಿನಲ್ಲಿ ವಾದ-ಪ್ರತಿವಾದ ಆಲಿಸಿ 5ನೇ ಸಂಚಾರ ನ್ಯಾಯಾಲಯ ತೀರ್ಪು ಎತ್ತಿ ಹಿಡಿದಿತ್ತು. ಒಂದು ತಿಂಗಳೊಳಗಾಗಿ ನ್ಯಾಯಾಲಯ ಮುಂದೆ ಹಾಜರಾಗಬೇಕೆಂದು ಆದೇಶಿಸಿತ್ತು‌‌. ಆದರೆ  ತಲೆಮರೆಸಿಕೊಂಡಿದ್ದ ಆರೋಪಿಯನ್ನ ಹಲಸೂರು ಗೇಟ್ ಸಂಚಾರ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More