Home> Crime
Advertisement

Bangalore: ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ದುರ್ಮರಣ..!

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಹೊಸಕೋಟೆ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Bangalore: ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ದುರ್ಮರಣ..!

ಬೆಂಗಳೂರು: ಕೃಷಿ ಹೊಂಡದಲ್ಲಿ ಮುಳುಗಿ ಮೂವರು ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕರಿಬೀರನಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. 

ಮೃತರನ್ನು 70 ವರ್ಷದ ಮರಿಯಪ್ಪ, 60 ವರ್ಷದ ಮುನಿಯಮ್ಮ ಮತ್ತು 40 ವರ್ಷದ ಭಾರತಿ ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಊಟ ಮಾಡಿ ಕೈ ತೊಳೆಯಲು ಹೋದ ವೇಳೆ ಈ ದುರ್ಘಟನೆ ನಡೆದಿದೆ. 

ಇದನ್ನೂ ಓದಿ: ಹಾವೇರಿ ಜಿಲ್ಲೆಯಲ್ಲಿ ನೀರಿಗಾಗಿ ಜನರ ಪರದಾಟ

ವಿಕಲಚೇತನಳಾಗಿದ್ದ ಮಗಳು ಭಾರತಿ ಕೈ ತೊಳೆಯಲು ಹೋಗಿದ್ದಾಗ ಜಾರಿ ಕೃಷಿ ಹೊಂಡಕ್ಕೆ ಬಿದ್ದಿದ್ದಾಳೆ. ಇದನ್ನು ಗಮನಿಸಿದ ಹೆತ್ತವರು ಆಕೆಯನ್ನು ರಕ್ಷಿಸಲು ಮುಂದಾದಾಗ ಅವರು ಸಹ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಹೊಸಕೋಟೆ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಸಂಸದ ರಮೇಶ್ ಜಿಗಜಿಣಗಿ ಆರೋಗ್ಯದಲ್ಲಿ ಏರುಪೇರು

ಇತ್ತೀಚೆಗಷ್ಟೇ ಗ್ರಾಮದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ತಂದೆ-ತಾಯಿ ಮತ್ತು‌ ಮಗಳು ಭಾಗವಹಿಸಿದ್ದರು. ಒಂದೇ ಕುಟುಂಬದ ಮೂವರು ನೀರುಪಾಲಾಗಿದ್ದು ಗ್ರಾಮದಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Read More