Home> Entertainment
Advertisement

ʼಇಡೀ ದೇಶವೇ ಕನ್ನಡಿಗರ ಬಗ್ಗೆ ಮಾತನಾಡುತ್ತಿದೆʼ : ಕನ್ನಡಾಭಿಮಾನ ಮೆರೆದ ʼನಾನಿʼ

ಭಾರತೀಯ ಚಿತ್ರರಂಗದಲ್ಲಿ ಸ್ಯಾಂಡಲ್‌ವುಡ್‌ ಸಿನಿಮಾಗಳು ಇತಿಹಾಸ ಸೃಷ್ಟಿಸುತ್ತಿವೆ. ಎಲ್ಲರೂ ಕನ್ನಡ ಸಿನಿಮಾಗಳತ್ತ ಮುಖ ಮಾಡುತ್ತಿದ್ದಾರೆ. ಸದ್ಯ ಟಾಲಿವುಡ್‌ ಸ್ಟಾರ್‌ ನಟ ನಾನಿ ಕನ್ನಡಿಗರ ಸಾಧನೆಯನ್ನು ಹಾಡಿಹೊಗಳಿದ್ದು, ಕಾಂತಾರ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 ʼಇಡೀ ದೇಶವೇ ಕನ್ನಡಿಗರ ಬಗ್ಗೆ ಮಾತನಾಡುತ್ತಿದೆʼ : ಕನ್ನಡಾಭಿಮಾನ ಮೆರೆದ ʼನಾನಿʼ

ಬೆಂಗಳೂರು : ಭಾರತೀಯ ಚಿತ್ರರಂಗದಲ್ಲಿ ಸ್ಯಾಂಡಲ್‌ವುಡ್‌ ಸಿನಿಮಾಗಳು ಇತಿಹಾಸ ಸೃಷ್ಟಿಸುತ್ತಿವೆ. ಎಲ್ಲರೂ ಕನ್ನಡ ಸಿನಿಮಾಗಳತ್ತ ಮುಖ ಮಾಡುತ್ತಿದ್ದಾರೆ. ಸದ್ಯ ಟಾಲಿವುಡ್‌ ಸ್ಟಾರ್‌ ನಟ ನಾನಿ ಕನ್ನಡಿಗರ ಸಾಧನೆಯನ್ನು ಹಾಡಿಹೊಗಳಿದ್ದು, ಕಾಂತಾರ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಿನ್ನೆ ರಾಜಧಾನಿಯಲ್ಲಿ ನಡೆದ 2022 ಫಿಲ್ಮ್ ಫೇರ್ ಸೌತ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ನಾನಿ, ಎಂತೆಂಥ ಸಿನಿಮಾಗಳನ್ನು ಬರ್ತೀವೆ ಕನ್ನಡದಿಂದ, ತುಂಬಾ ಹೆಮ್ಮೆ ಅನಿಸುತ್ತಿದೆ. ಕಾಂತಾರ ಸಿನಿಮಾದ ಹೆಸರು ಎಲ್ಲಾ ಕಡೆ ಕೇಳಿಬರುತ್ತಿದೆ ಎಂದರು. ಇನ್ನು ನಾನಿ ಮಾತಿಗೆ ಅಭಿಮಾನಿಗಳು ಸಂತೋಷ ವ್ಯಕ್ತಪಡಿಸಿದ್ದಾರೆ. ಸದ್ಯ ನಾನಿ ಮಾತನಾಡಿದ ವಿಡಿಯೋ ಎಲ್ಲೆಡೆ ವೈರಲ್ ಆಗ್ತಿದೆ.

ಇದನ್ನೂ ಓದಿ: ಭಾರತೀಯ ಚಿತ್ರರಂಗದ 'ರಾಜ'ಮೌಳಿ : ಸೋಲಿಗೂ ಈ ಕನ್ನಡಿಗನ ಕಂಡರೆ ಭಯ..!

 ಇನ್ನೂ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಚಿತ್ರಕ್ಕೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಿಂದಿ, ತೆಲುಗು, ಮಲಯಾಳಂ ಭಾಷೆಯಲ್ಲಿ ಸಿನಿಮಾ ಡಬ್ಬ್‌ ಆಗುತ್ತಿದೆ. ಜನರು ಸಿನಿಮಾ ನೋಡಲು ಚಿತ್ರಮಂದಿರಗಳಿಗೆ ನುಗ್ಗುತ್ತಿದ್ದಾರೆ. ಎಲ್ಲಿ ನೋಡಿದ್ರೂ ಹೌಸ್ ಪುಲ್ ಬೋರ್ಡ್‌ ಕಾಣಿಸುತ್ತಿದೆ. ರಿಷಬ್ ಶೆಟ್ಟಿ ನಟನೆಗೆ ಪ್ರೇಕ್ಷಕ ಮಹಾಶಯ ಜೈ ಅಂದಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More