Home> Entertainment
Advertisement

ಬಿಲ್ ಗೇಟ್ಸ್ ಮೂಲಕ ಗಮನ ಸೆಳೆದ ನಿರ್ದೇಶಕರಿಂದ ರೋಲೆಕ್ಸ್ ಗೆ ಆಕ್ಷನ್ ಕಟ್

ಬಿಲ್ ಗೇಟ್ಸ್ ಮೂಲಕ ಗಮನ ಸೆಳೆದ ನಿರ್ದೇಶಕರಿಂದ ರೋಲೆಕ್ಸ್ ಗೆ ಆಕ್ಷನ್ ಕಟ್

ಸೆನ್ಸೇಶನಲ್ ಸ್ಟಾರ್ ಕೋಮಲ್ ಆಫ್ಟರ್ ಲಾಂಗ್ ಬ್ರೇಕ್ ಬಳಿಕ ಮತ್ತೆ ನಟನೆಗೆ ಮರಳಿದ್ದಾರೆ. ಇತ್ತೀಚೆಗೆ ಅವರ ಹೊಸ ಸಿನಿಮಾ 'ಕಾಲಾಯ ನಮಃ' ಸೆಟ್ಟೇರಿದ್ದು, ಈ ಚಿತ್ರದ ಮೂಲಕ ಮತ್ತೆ ಬಣ್ಣದ ಲೋಕದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಆ ಸಿನಿಮಾ ನಂತರ ಮತ್ತೊಂದು ಹೊಸ ಸಿನಿಮಾಗೂ ಗ್ರೀನ್ ಸಿಗ್ನಲ್ ನೀಡಿದ್ದಾರೆ. 

ಇದನ್ನೂ ಓದಿ : Viral Video : ಹಾವಿನ ಜೊತೆ ಹುಚ್ಚಾಟ ತಲೆಕೆಟ್ಟು ಸರ್ಪ ಕಚ್ಚಿದ್ದೆಲ್ಲಿ ನೋಡಿ..

'ಬಿಲ್ ಗೇಟ್ಸ್' ಸಿನಿಮಾ ಮೂಲಕ ಗಮನ ಸೆಳೆದ ನಿರ್ದೇಶಕ ಶ್ರೀನಿವಾಸ್ ಮಂಡ್ಯ ಹೊಸದೊಂದು ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಚಿತ್ರಕ್ಕೆ 'ರೋಲೆಕ್ಸ್' ಎಂದು ಟೈಟಲ್ ಇಡಲಾಗಿದ್ದು, ಈ ಚಿತ್ರದಲ್ಲಿ ನಾಯಕ ನಟನಾಗಿ ಕೋಮಲ್ ನಟಿಸುತ್ತಿದ್ದಾರೆ. ಈ ಚಿತ್ರ ಕಟೆಂಟ್ ಬೆಸ್ಡ್ ಸಿನಿಮಾವಾಗಿದ್ದು ಕೋಮಲ್ ತುಂಬಾ ಇಷ್ಟಪಟ್ಟು ಈ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ ಎಂದು ನಿರ್ದೇಶಕ ಶ್ರೀನಿವಾಸ್ ಮಂಡ್ಯ ತಿಳಿಸಿದ್ದಾರೆ. 

ಇದನ್ನೂ ಓದಿ : Viral Video : ಆನೆಗೆ ಕೋಲಿನಿಂದ ಹೊಡೆದ ಯುವಕ, ಕೆಣಕಿದವರನ್ನು ಸುಮ್ಮನೆ ಬಿಟ್ಟೀತಾ?

ಫೀನಿಕ್ಸ್ ಎಂಟರ್ ಟೈನ್ಮೆಂಟ್ಸ್ ಬ್ಯಾನರ್ ನಡಿ ಅನಿಲ್ ಕುಮಾರ್. ಎಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಬಹು ದೊಡ್ಡ ತಾರಾಗಣ ಸಿನಿಮಾದಲ್ಲಿದ್ದು, ರಾಕೇಶ್. ಸಿ. ತಿಲಕ್ ಕ್ಯಾಮೆರಾ ವರ್ಕ್, ಜೆಸ್ಸಿ ಗಿಫ್ಟ್ ಸಂಗೀತ ನಿರ್ದೇಶನ, ಅರವಿಂದ್ ರಾಜ್ ಸಂಕಲನ ಚಿತ್ರಕ್ಕಿದೆ. ಜನವರಿಯಲ್ಲಿ 'ರೋಲೆಕ್ಸ್ ' ಸಿನಿಮಾ ಸೆಟ್ಟೇರಲಿದ್ದು ಸದ್ಯದಲ್ಲೇ ಹೆಚ್ಚಿನ ಮಾಹಿತಿಯನ್ನು ಸಿನಿಮಾ ತಂಡ ಹಂಚಿಕೊಳ್ಳಲಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Read More