Home> Bigg Boss
Advertisement

BBK10: ವೀಕೆಂಡ್‌ನಲ್ಲಿ ಸ್ಪರ್ಧಿಗಳಿಗೆ ಅಚ್ಚರಿ..! ದೊಡ್ಮನೆಯಲ್ಲಿ ಹಿರಿಯ ನಟಿ, ಬಿಗ್‌ಬಾಸ್‌ ವಿಜೇತೆ ನ್ಯಾಯ ಪಂಚಾಯ್ತಿ

Bigg Boss Kannada: ವೀಕೆಂಡ್‌ನಲ್ಲಿ ಬಿಗ್‌ಬಾಸ್ ಮನೆಯ ಸ್ಪರ್ಧಿಗಳಿಗೆ ಅಚ್ಚರಿಯೊಂದು ಎದುರಾಗಿದೆ. ಆ ಅಚ್ಚರಿ ಏನೆಂಬುದು ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಜಾಹೀರಾಗಿದೆ.
 

BBK10: ವೀಕೆಂಡ್‌ನಲ್ಲಿ ಸ್ಪರ್ಧಿಗಳಿಗೆ ಅಚ್ಚರಿ..! ದೊಡ್ಮನೆಯಲ್ಲಿ ಹಿರಿಯ ನಟಿ, ಬಿಗ್‌ಬಾಸ್‌ ವಿಜೇತೆ ನ್ಯಾಯ ಪಂಚಾಯ್ತಿ

BBK10: ಬೆಳಿಗ್ಗೆ ಎಲ್ಲ ಸ್ಪರ್ಧಿಗಳೂ ನೋಡುತ್ತಿದ್ದ ಹಾಗೆಯೇ ಮನೆಯ ಮುಖ್ಯದ್ವಾರ ತೆರೆದುಕೊಂಡಿದೆ. ಅದರಿಂದ ಹಿರಿಯ ನಟಿ, ಬಿಗ್‌ಬಾಸ್‌ ಸ್ಪರ್ಧೆಯ ವಿಜೇತೆಯೂ ಆಗಿರುವ ಶ್ರುತಿ ಅವರು ಮನೆಯೊಳಗೆ ಪ್ರವೇಶಿಸಿದ್ದಾರೆ. ಅವರನ್ನು ನೋಡುತ್ತಿದ್ದ ಹಾಗೆಯೇ ಮನೆಯ ಸದಸ್ಯರೆಲ್ಲರೂ ಖುಷಿಯಿಂದ ಕುಣಿದಾಡಿದ್ದಾರೆ. 

ಎಲ್ಲರೂ ಸಂತೋಷದ ಅಲೆಯಲ್ಲಿ ತೇಲುತ್ತಿರುವ ಹಾಗೆಯೇ ಕಟಕಟೆಯಲ್ಲಿ ನಿಲ್ಲುವ ಗಳಿಗೆ ಎದುರಾಗಿದೆ. ಶ್ರುತಿ ನ್ಯಾಯಾಧೀಶ ಕುರ್ಚಿಯಲ್ಲಿ ಕೂತಿದ್ದಾರೆ. ಸ್ಪರ್ಧಿಗಳನ್ನು ಕಟಕಟೆಯಲ್ಲಿ ನಿಲ್ಲಿಸಿ ವಿಚಾರಣೆ ಮಾಡಿದ್ದಾರೆ. ‘ವಿನಯ್ ಅವರು ವಾರಾಂತ್ಯದಲ್ಲಿ ಸುದೀಪ್ ಅವರ ಎದುರಿಗೇ ಒಂದು ರೀತಿ ಇರುತ್ತಾರೆ, ವಾರವಿಡೀ ಮನೆಯ ಸದಸ್ಯರ ಜೊತೆಗೇ ಇನ್ನೊಂದು ರೀತಿ ಇರುತ್ತಾರೆ?’ ಎಂಬ ಪ್ರಶ್ನೆಗೆ ಸಂಗೀತಾ ತುಂಬ ಪ್ರಬಲವಾಗಿ ಹೌದು ಎಂದಿದ್ದಾರೆ.

ಇದನ್ನೂ ಓದಿ-Salar: ಪ್ರಭಾಸ್‌ ನ್ಯೂ ಸಿನಿಮಾ ಶೂಟಿಂಗ್‌ ನಡೆದ ʼಖಾನ್ಸರ್ʼ ಸಿಟಿ ಎಲ್ಲಿದೆ ಗೊತ್ತಾ?

ಅಷ್ಟೇ ಅಲ್ಲ, ಇಷ್ಟು ದಿನಗಳ ಕಾಲ ವಿನಯ್ ಆಪ್ತಬಳಗದಲ್ಲಿ ಗುರ್ತಿಸಿಕೊಂಡಿದ್ದ ನಮ್ರತಾ ಕೂಡ, ‘ನನಗೂ ಹಾಗೇ ಅನಿಸುತ್ತದೆ. ಸುದೀಪ್ ಸರ್ ಎದುರಿಗೆ ಅವರು ಧ್ವನಿತಗ್ಗಿಸಿ ಮಾತಾಡುತ್ತಾರೆ’ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ವಿನಯ್, ತಮ್ಮ ಎಂದಿನ ಉಡಾಪೆಯ ಧ್ವನಿಯಲ್ಲಿ, ‘ಇವ್ರತ್ರೆಲ್ಲ ನಾಟಕ ಮಾಡ್ಕೊಂಡು ನನಗೆ ಏನೂ ಆಗ್ಬೇಕಾಗಿಲ್ಲ’ ಎಂದಿದ್ದಾರೆ. ಅವರ ಟೋನ್‌ ಬಗ್ಗೆ ನ್ಯಾಯಾಧೀಶೆ ಶ್ರುತಿ, ‘ನನ್ನ ಬಳಿ, ನ್ಯಾಯಾಧೀಶರ ಬಳಿಯೇ ಧ್ವನಿ ಎತ್ತರಿಸಿ ಮಾತಾಡ್ತೀರಾ?’ ಎಂದು ಅಸಮಧಾನ ಹೊರಹಾಕಿದ್ದಾರೆ.

ಬಿಗ್‌ಬಾಸ್ ಮನೆಯೊಳಗೇ ಸೃಷ್ಟಿಯಾದ ಈ ನ್ಯಾಯಾಲಯದಲ್ಲಿ ಯಾರು ತಪ್ಪಿತಸ್ಥರಾಗುತ್ತಾರೆ? ಯಾರು ಬಿಡುಗಡೆಯಾಗುತ್ತಾರೆ? ಯಾರಿಗೆ ಜಾಮೀನು? ಯಾರಿಗೆ ಜೈಲು? ಕೊನೆಯಲ್ಲಿ ಈ ವಾರ ಯಾರು ಮನೆಯಿಂದಲೇ ಬಿಡುಗಡೆಯಾಗಿ ಹೋಗುತ್ತಾರೆ? ಈ ಎಲ್ಲ ಪ್ರಶ್ನೆಗೆ ಉತ್ತರ ಸಿಗಲು ಬಿಗ್‌ಬಾಸ್ ಕನ್ನಡ ವೀಕ್ಷಿಸಿ.. 

ಇದನ್ನೂ ಓದಿ-ತ್ರಿಶಾ ವಿರುದ್ದ ಮೊಕದ್ದಮೆ ಹೂಡಲು ಮುಂದಾದ ಖಳನಟ: ಮನ್ಸೂರ್‌ ಅಲಿ ಖಾನ್‌ಗೆ ಮದ್ರಾಸ್‌ ಹೈಕೋರ್ಟ್‌ನಿಂದ ದಂಡ!

ಬಿಗ್‌ಬಾಸ್ ಕನ್ನಡ 24 ಗಂಟೆ ನೇರಪ್ರಸಾರವನ್ನು JioCinemaದಲ್ಲಿ ಉಚಿತವಾಗಿ ನೋಡಿ.
ಶನಿವಾರ-ಭಾನುವಾರದ ವಾರಾಂತ್ಯ ಎಪಿಸೋಡ್‌ಗಳನ್ನು Colors Kannada ದಲ್ಲಿ ರಾತ್ರಿ 9ಕ್ಕೆ ವೀಕ್ಷಿಸಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Read More