Home> Entertainment
Advertisement

Radhe Shyam: 'ರಾಧೆ ಶ್ಯಾಮ್' ಚಿತ್ರತಂಡ ಸೇರಿದ ಸೆಂಚುರಿ ಸ್ಟಾರ್ ಶಿವರಾಜಕುಮಾರ್

Radhe Shyam: ಶಿವರಾಜ್​ಕುಮಾರ್​ ಅವರಿಗೆ 'ರಾಧೆ ಶ್ಯಾಮ್' ನಿರ್ಮಾಣ ಸಂಸ್ಥೆಯಾದ  'ಯುವಿ ಕ್ರಿಯೇಷನ್ಸ್' ಧನ್ಯವಾದ ತಿಳಿಸಿದೆ. 

Radhe Shyam: 'ರಾಧೆ ಶ್ಯಾಮ್' ಚಿತ್ರತಂಡ ಸೇರಿದ ಸೆಂಚುರಿ ಸ್ಟಾರ್ ಶಿವರಾಜಕುಮಾರ್

'ರಾಧೆ ಶ್ಯಾಮ್​' (Radhe Shyam) ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಪ್ಯಾನ್​ ಇಂಡಿಯಾ ಸ್ಟಾರ್​ ಪ್ರಭಾಸ್​ (Prabhas) ಮತ್ತು ನಟಿ ಪೂಜಾ ಹೆಗ್ಡೆ ಅಭಿನಯದ ಬಹುನಿರೀಕ್ಷಿತ ಸಿನಿಮಾ ಇದಾಗಿದೆ.

ಇದನ್ನೂ ಓದಿ: Ravichandran: ನಟ ವಿ.ರವಿಚಂದ್ರನ್ ತಾಯಿ ನಿಧನ

ಈ ಚಿತ್ರತಂಡಕ್ಕೆ ಈಗ ಶಿವರಾಜ್​ಕುಮಾರ್​ (Shivarajkumar) ಕೂಡ ಜೊತೆಯಾಗಿದ್ದಾರೆ. 'ರಾಧೆ ಶ್ಯಾಮ್​' ಸಿನಿಮಾದ ನಿರ್ಮಾಪಕರು ಸ್ವತಃ ಈ ಮಾಹಿತಿ ಬಿಟ್ಟುಕೊಟ್ಟಿದ್ದಾರೆ. 

ಶಿವರಾಜ್​ಕುಮಾರ್​ ಮಾತ್ರವಲ್ಲದೇ ಖ್ಯಾತ ನಿರ್ದೇಶಕ ರಾಜಮೌಳಿ (Rajamouli), ಮಲಯಾಳಂ ಸೂಪರ್​ ಸ್ಟಾರ್​ ಪೃಥ್ವಿರಾಜ್ ಸುಕುಮಾರನ್​ (Pruthviraj Sukumaran) ಕೂಡ 'ರಾಧೆ ಶ್ಯಾಮ್​' ಚಿತ್ರತಂಡ ಸೇರಿಕೊಂಡಿದ್ದಾರೆ. 

 

 

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರಲಿದೆ. ರಾಧಾ ಕೃಷ್ಣ ಕುಮಾರ್ ನಿರ್ದೇಶನದ ಈ ಸಿನಿಮಾ ಒಂದು ರೋಮ್ಯಾಂಟಿಕ್ ಕಥೆಯಾಗಿದೆ. ಸಿನಿಮಾದಲ್ಲಿ ಬರುವ ಒಂದು ಹಿನ್ನೆಲೆ ನಿರೂಪಣೆಗೆ ಧ್ವನಿ ನೀಡಲು ಆಯಾ ಭಾಷೆಯ ಬಿಗ್ ಸ್ಟಾರ್ ಗಳು ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಇದನ್ನೂ ಓದಿ: Shruti Hassan ಗೆ ತಗುಲಿದ ಕೊರೊನಾ ಸೋಂಕು, ಮನೆಯಲ್ಲಿಯೇ ಚಿಕಿತ್ಸೆ

'ರಾಧೆ ಶ್ಯಾಮ್​' ಚಿತ್ರದ ಕನ್ನಡ ವರ್ಷನ್​ ನಿರೂಪಣೆಗೆ ಶಿವರಾಜ್​ಕುಮಾರ್​ (Shivarajkumar) ಅವರು ಹಿನ್ನೆಲೆ ಧ್ವನಿ ನೀಡಿದ್ದಾರೆ. ಅದೇ ರೀತಿ, ತೆಲುಗಿನಲ್ಲಿ ರಾಜಮೌಳಿ, ಮಲಯಾಳಂನಲ್ಲಿ ಪೃಥ್ವಿರಾಜ್​ ಸುಕುಮಾರನ್​  ನಿರೂಪಣೆಗೆ ಹಿನ್ನೆಲೆ ಧ್ವನಿ ನೀಡಿದ್ದಾರೆ.   

ಮಾರ್ಚ್ 11 ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More