Home> Entertainment
Advertisement

ಸಾವಿನ ನಂತರದ ಕಥೆ ಹೇಳಲು ಬಂದ ʼರಾವುತʼ... ವಿಭಿನ್ನ ಸಿನಿಮಾದ ಹಾಡು ಬಿಡುಗಡೆ ಮಾಡಿದ ಕಾಂಗ್ರೆಸ್ ಮುಖಂಡ ಹೆಚ್.ಎಂ ರೇವಣ್ಣ

ವಿಶ್ವಕರ್ಮ ಸಿನಿಮಾಸ್ ಲಾಂಛನದಲ್ಲಿ ಈರಣ್ಣ ಸುಭಾಷ್ ಬಡಿಗೇರ್ ನಿರ್ಮಿಸಿರುವ, ಸಿದ್ದುವಜ್ರಪ್ಪ ನಿರ್ದೇಶನದ ಹಾಗೂ ರಾಜ್ ಪ್ರವೀಣ್ ನಾಯಕನಾಗಿ ನಟಿಸಿರುವ ʼರಾವುತʼ ಚಿತ್ರದ ಹಾಡುಗಳು ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು.  

ಸಾವಿನ ನಂತರದ ಕಥೆ ಹೇಳಲು ಬಂದ ʼರಾವುತʼ...  ವಿಭಿನ್ನ ಸಿನಿಮಾದ ಹಾಡು ಬಿಡುಗಡೆ ಮಾಡಿದ ಕಾಂಗ್ರೆಸ್ ಮುಖಂಡ ಹೆಚ್.ಎಂ ರೇವಣ್ಣ

ವಿಶ್ವಕರ್ಮ ಸಿನಿಮಾಸ್ ಲಾಂಛನದಲ್ಲಿ ಈರಣ್ಣ ಸುಭಾಷ್ ಬಡಿಗೇರ್ ನಿರ್ಮಿಸಿರುವ, ಸಿದ್ದುವಜ್ರಪ್ಪ ನಿರ್ದೇಶನದ ಹಾಗೂ ರಾಜ್ ಪ್ರವೀಣ್ ನಾಯಕನಾಗಿ ನಟಿಸಿರುವ ʼರಾವುತʼ ಚಿತ್ರದ ಹಾಡುಗಳು ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು.

ಇದನ್ನೂ ಓದಿ: ಈ ದಿನದಂದು ತಪ್ಪಿಯೂ ತುಳಸಿಯನ್ನು ಮುಟ್ಟಬೇಡಿ: ಎಷ್ಟೇ ಶ್ರೀಮಂತನಾಗಿದ್ದರೂ ದಾರಿದ್ರ್ಯ ಸುತ್ತಿ ಸಾಲದ ಸುಳಿಗೆ ಬೀಳುವಿರಿ; ಆಯಸ್ಸಿಗೂ ಬರುತ್ತೆ ಕುತ್ತು!

ಕಾಂಗ್ರೆಸ್‌ ಮುಖಂಡ ಹೆಚ್ ಎಂ ರೇವಣ್ಣ ʼರಾವುತʼ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಸಿರಿ ಮ್ಯೂಸಿಕ್ ನಲ್ಲಿ ಈ ಚಿತ್ರದ ಹಾಡುಗಳು ಬಿಡುಗಡೆಯಾಗಿದೆ. ಹಾಡುಗಳ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಇದು ನನ್ನ ಮೊದಲ ನಿರ್ದೇಶನದ ಚಿತ್ರ ಎಂದು ಮಾತನಾಡಿದ ನಿರ್ದೇಶಕ ಸಿದ್ದು ವಜ್ರಪ್ಪ, ಇದು ಸಾವಿನ ನಂತರ ನಡೆಯುವ ಕಥೆ.‌ ಈ ಕುರಿತು ನಾನು ಪುಸ್ತಕಗಳನ್ನು ಓದಿ ತಿಳಿದುಕೊಂಡಿದ್ದೇನೆ. ಗರುಡ ಪುರಾಣದ ಕೆಲವು ಅಂಶಗಳು ಹಾಗೂ ನಾನು ಚಿಕ್ಕವಯಸ್ಸಿನಲ್ಲಿ ಕಂಡಿದ್ದ ಕೆಲವು ಘಟನೆಗಳು ಈ ಕಥೆಗೆ ಸ್ಪೂರ್ತಿ. ಚಿತ್ರದ ನಾಯಕನಾಗಿ ರಾಜ್ ಪ್ರವೀಣ್ ಅಭಿನಯಿಸಿದ್ದಾರೆ. ಶಿವಬಸವ ಹಾಗೂ ಬಲ್ಲವ ಎರಡು ಪಾತ್ರಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ನಾಯಕಿ ಭವಾನಿ ಪುರೋಹಿತ್ ಅವರು ಎರಡು ಶೇಡ್ ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಮೂರು ಹಾಡುಗಳಿದ್ದು ಸುಚಿನ್ ಶರ್ಮ ಸಂಗೀತ ನೀಡಿದ್ದಾರೆ‌. ವಿನಯ್ ಗೌಡ ಈ ಚಿತ್ರದ ಛಾಯಾಗ್ರಹಕರು. ಇತ್ತೀಚೆಗೆ ಚಿತ್ರದ ಸೆನ್ಸಾರ್ ಸಹ ಮುಗಿದಿದ್ದು, ಮಂಡಳಿಯಿಂದ ಚಿತ್ರಕ್ಕೆ ಮೆಚ್ಚುಗೆ ಮಾತುಗಳು ಕೇಳಿಬಂದಿದೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ ಎಂದರು.

ಇದು ನನ್ನ ಅಭಿನಯದ ಮೂರನೇ ಚಿತ್ರ. ನಿರ್ದೇಶಕರು ಹಾಗೂ ನನ್ನದು ಎಂಟು ವರ್ಷಗಳ ಗೆಳೆತನ. ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ಕಥೆ ಮೆಚ್ಚಿ, ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯಾವಾದ. ನಿರ್ದೇಶಕರು ಹೇಳಿದ ಹಾಗೆ ನಾನು ಈ ಚಿತ್ರದಲ್ಲಿ ಎರಡಲ್ಲ, ಮೂರು ಶೇಡ್ ಗಳಲ್ಲಿ ಕಾಣಿಸಿಕೊಂಡಿದ್ದೇನೆ ಎಂದರು ನಾಯಕ ರಾಜ್ ಪ್ರವೀಣ್.

ನಾನು ಮೂಲತಃ ಐಟಿ ಉದ್ಯೋಗಿ. ನಿರ್ದೇಶಕರು ಹೇಳಿದ ಕಥೆ ಇಷ್ಟವಾಗಿ ಸಿನಿಮಾ ನಿರ್ಮಾಣಕ್ಕೆ ಮುಂದಾದೆ. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಈರಣ್ಣ ಸುಭಾಷ್ ಬಡಿಗೇರ್.

ಇದನ್ನೂ ಓದಿ: 13 ಸಾವಿರಕ್ಕಿಂತ ಕಡಿಮೆ ಬೆಲೆಗೆ ಐಫೋನ್ 16! ಇಷ್ಟೊಂದು ಅಗ್ಗದ ಬೆಲೆಯಲ್ಲಿ

ನಾಯಕಿ ಭವಾನಿ ಪುರೋಹಿತ್, ಸಂಗೀತ ನಿರ್ದೇಶಕ ಸುಚಿನ್ ಶರ್ಮ, ಸಿರಿಚಿಕ್ಕಣ್ಣ, ರಾಘವ್ ಗೌಡಪ್ಪ, ಮಾರೇಶ್, ನರಸಿಂಹ ಹಾಗೂ ಹರ್ಷ ವರ್ಧನ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Read More