Home> Entertainment
Advertisement

Rakul Preet Singh: ಡ್ರಗ್ ಪ್ರಕರಣದಲ್ಲಿ ರಕುಲ್ ಪ್ರೀತ್ ಸಿಂಗ್‌ಗೆ ಸಂಕಷ್ಟ

Rakul Preet Singh in Drugs Case : ಕಳೆದ ವರ್ಷ ಬೆಂಗಳೂರು, ಮುಂಬೈ ಮತ್ತು ಹೈದರಾಬಾದ್‌ನಲ್ಲಿ ಡ್ರಗ್ಸ್ ಪ್ರಕರಣ ಎಷ್ಟು ಸಂಚಲನ ಮೂಡಿಸಿತ್ತು ಎಂಬುದು ಎಲ್ಲರಿಗೂ ತಿಳಿದಿದೆ. ಇಡಿ ಹಲವು ಸ್ಟಾರ್‌ ನಟ - ನಟಿಯರು ಮತ್ತು ಅವರ ಕುಟುಂಬ ಸದಸ್ಯರಿಗೆ ನೋಟಿಸ್ ಜಾರಿ ಮಾಡಿದೆ ಎಂಬ ವರದಿಗಳಿವೆ. 

Rakul Preet Singh: ಡ್ರಗ್ ಪ್ರಕರಣದಲ್ಲಿ ರಕುಲ್ ಪ್ರೀತ್ ಸಿಂಗ್‌ಗೆ ಸಂಕಷ್ಟ

Rakul Preet Singh in Drugs Case : ಬಾಲಿವುಡ್ ನಟಿ ರಾಕುಲ್ ಪ್ರೀತ್ ಸಿಂಗ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಡ್ರಗ್ಸ್ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯವು ನಟಿ ರಕುಲ್ ಪ್ರೀತ್ ಸಿಂಗ್ ಅವರಿಗೆ ಸಮನ್ಸ್ ನೀಡಿದೆ. ಈ ಪ್ರಕರಣದಲ್ಲಿ ಡಿಸೆಂಬರ್ 19 ರಂದು ರಕುಲ್ ಪ್ರೀತ್ ಸಿಂಗ್ ಅವರನ್ನು ಇಡಿ ವಿಚಾರಣೆ ನಡೆಸಲಿದೆ. ಈ ವಿಚಾರದಲ್ಲಿ ಇಡಿ ಹಲವು ಟಾಲಿವುಡ್ ಸಿನಿಮಾ ತಾರೆಯರನ್ನು ಪ್ರಶ್ನಿಸಿದೆ.

ಇದನ್ನೂ ಓದಿ: ನಾನು ಸತ್ತಿಲ್ಲ, ಬದುಕಿದ್ದೇನೆ : ನಟಿ ವೀಣಾ ಕಪೂರ್ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ಮಾಧ್ಯಮ ವರದಿಗಳ ಪ್ರಕಾರ, ಇದು 4 ವರ್ಷಗಳ ಹಿಂದಿನ ಮಾದಕವಸ್ತು ಪ್ರಕರಣಕ್ಕೆ ಸಂಬಂಧಿಸಿದೆ. ಈ ವೇಳೆ ಹಲವು ತಾರೆಯರಿಗೆ ಸಮನ್ಸ್ ಜಾರಿಯಾಗಿದೆ. 2017ರಲ್ಲಿ ತೆಲಂಗಾಣ ಅಬಕಾರಿ ಇಲಾಖೆ 30 ಲಕ್ಷ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿತ್ತು ಎಂದು ಹೇಳಲಾಗಿದೆ. 12 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಅಬಕಾರಿ ನಂತರ ಇಡಿ ಈ ವಿಷಯವನ್ನು ಪರಿಶೀಲಿಸಿದಾಗ, ಅವರು ಅಕ್ರಮ ಹಣ ವರ್ಗಾವಣೆಯನ್ನು ಶಂಕಿಸಿದ್ದಾರೆ. ಈ ನಿಟ್ಟಿನಲ್ಲಿ ತನಿಖೆ ಆರಂಭಿಸಲಾಗಿತ್ತು. ಈ ಬಗ್ಗೆ ತನಿಖೆ ನಡೆಸಲು ರಕುಲ್ ಪ್ರೀತ್ ಸಿಂಗ್ ಜೊತೆಗೆ ಚಾರ್ಮಿ ಕೌರ್, ತೇಜಾ ಮುಮೈತ್ ಖಾನ್, ರಾಣಾ ದಗ್ಗುಬಾಟಿ ಮತ್ತು ಪುರಿ ಜಗನ್ನಾಥ್ ಅವರನ್ನು ವಿಚಾರಣೆಗೆ ಕರೆಯಲಾಗಿದೆ.

ರಕುಲ್ ಪ್ರೀತ್ ಸಿಂಗ್ ಇತ್ತೀಚೆಗೆ ಆಯುಷ್ಮಾನ್ ಖುರಾನಾ ಅವರೊಂದಿಗೆ ಡಾಕ್ಟರ್ ಜಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಒಟಿಟಿಯಲ್ಲಿ ಚಿತ್ರಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. 

ಇದನ್ನೂ ಓದಿ: Bagheera : ಶ್ರೀಮುರಳಿ ಫ್ಯಾನ್ಸ್‌ಗೆ ಸಿಕ್ತು ಸರ್‌ಪ್ರೈಸ್‌! ಸಿನಿಪ್ರಿಯರ ಕುತೂಹಲ ಕೆರಳಿಸಿದ ಬಘೀರ ಪೋಸ್ಟರ್‌

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More