Home> Entertainment
Advertisement

ಖ್ಯಾತ ಚಲನಚಿತ್ರ ನಿರ್ದೇಶಕ ಮಣಿರತ್ನಂ ಆಸ್ಪತ್ರೆಗೆ ದಾಖಲು

ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ಚೆನ್ನೈನಲ್ಲಿರುವ ಅಪೋಲೋ ಆಸ್ಪತ್ರೆಗೆ ಮಣಿರತ್ನಂ ಅವರನ್ನು ದಾಖಲಿಸಲಾಗಿದೆ.

ಖ್ಯಾತ ಚಲನಚಿತ್ರ ನಿರ್ದೇಶಕ ಮಣಿರತ್ನಂ ಆಸ್ಪತ್ರೆಗೆ ದಾಖಲು

ಚೆನ್ನೈ: ಕಾಲಿವುಡ್ ಖ್ಯಾತ ನಿರ್ದೇಶಕ ಮಣಿರತ್ನಂ(63) ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ಚೆನ್ನೈನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಲವು ವರ್ಷಗಳಿಂದ ಹೃದಯ ಸಮಸ್ಯೆಯಿಂದ ಬಳಲುತ್ತಿರುವ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವು ವರ್ಷಗಳ ಹಿಂದೆ ಸಿನಿಮಾವೊಂದರ ಚಿತ್ರೀಕರಣದ ವೇಳೆ ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆ ಸೇರಿದ್ದರು. 2004ರಲ್ಲಿ 'ಯುವ' ಹೆಸರಿನ ಬಾಲಿವುಡ್​ ಸಿನಿಮಾ ಚಿತ್ರ ಸೆಟ್ಟೇರುವಾಗ ಕೂಡ ಹೃದಯ ಸಂಬಂಧಿ ಸಮಸ್ಯೆ ಉಂಟಾಗಿತ್ತು. 2015 ರಲ್ಲಿ ಇದೇ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದರು.

ಸದ್ಯ ಬಹು ತಾರಾಗಣದ 'ಪೊನ್ನಿಯನ್ ಸೆಲ್ವನ್' ಚಿತ್ರವನ್ನು ನಿರ್ದೇಶಿಸುತ್ತಿರುವ ಮಣಿರತ್ನಂ ಅವರು ಹಲವಾರು ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ಚಿತ್ರರಂಗಕ್ಕೆ ನೀಡಿದ್ದಾರೆ.

Read More