Home> Entertainment
Advertisement

ಕರ್ನಾಟಕದಲ್ಲಿ ಪ್ರತಿಷ್ಟಿತ "ROMEO PICTURES" ಮೂಲಕ ಬಿಡುಗಡೆಯಾಗಲಿದೆ ಕಮಲ್ ಹಾಸನ್ ಅಭಿನಯದ "ಇಂಡಿಯನ್ 2"

ಇಂಡಿಯನ್ 2" ಚಿತ್ರವನ್ನು ಕರ್ನಾಟಕದಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡುವುದಾಗಿ ROMEO PICTURES ನ ರಾಹುಲ್ ತಿಳಿಸಿದ್ದಾರೆ.  ಪ್ರಖ್ಯಾತ ವಿತರಣಾ ಸಂಸ್ಥೆಯಾದ  ROMEO PICTURES  ಅಜಿತ್ ಕುಮಾರ್ ಅವರ "ನೆರ್ಕೊಂಡ ಪಾರವೈ", "ಥುನಿವು", ಉದಯನಿಧಿ ಸ್ಟಾಲಿನ್ ಅವರ "ನೆಂಜುಕು ನೀಧಿ"  ಮುಂತಾದ ಜನಪ್ರಿಯ ಚಿತ್ರಗಳನ್ನು ವಿತರಣೆ ಮಾಡಿದೆ. 

 ಕರ್ನಾಟಕದಲ್ಲಿ ಪ್ರತಿಷ್ಟಿತ

ಬೆಂಗಳೂರು: ಕಮಲ್ ಹಾಸನ್ ನಾಯಕರಾಗಿ ನಟಿಸಿರುವ, ಆರ್ ಶಂಕರ್ ನಿರ್ದೇಶನದ ಬಹು ನಿರೀಕ್ಷಿತ "ಇಂಡಿಯನ್ 2" ಚಿತ್ರ ಜುಲೈ 12 ಕ್ಕೆ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಕರ್ನಾಟಕದಲ್ಲಿ ಈ ಚಿತ್ರ ಪ್ರತಿಷ್ಠಿತ  ROMEO PICTURES ಮೂಲಕ ಬಿಡುಗಡೆಯಾಗಲಿದೆ. ಹೆಸರಾಂತ ROMEO PICTURES ಅವರು "ಇಂಡಿಯನ್ 2" ಚಿತ್ರದ ಕರ್ನಾಟಕದ ವಿತರಣೆಯ ಹಕ್ಕನ್ನು ಪಡೆದುಕೊಂಡಿದ್ದಾರೆ.

ಇದನ್ನು ಓದಿ : Tamilnadu : ಪಿಕ್ಸೆಲ್ ಸ್ಮಾರ್ಟ್‌ಫೋನ್‌ಗಳ ಉತ್ಪಾದನೆಗೆ ಗೂಗಲ್ ಫಾಕ್ಸ್‌ಕಾನ್‌ನೊಂದಿಗೆ ಪಾಲುದಾರಿಕೆ : ಮುಖ್ಯಮಂತ್ರಿ ಎಂಕೆ ಸ್ಟಾಲಿನ್

ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ಕಮಲ್ ಹಾಸನ್ ಅಭಿನಯದ "ಇಂಡಿಯನ್ 2" ಚಿತ್ರವನ್ನು ಕರ್ನಾಟಕದಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡುವುದಾಗಿ ROMEO PICTURES ನ ರಾಹುಲ್ ತಿಳಿಸಿದ್ದಾರೆ.  ಪ್ರಖ್ಯಾತ ವಿತರಣಾ ಸಂಸ್ಥೆಯಾದ  ROMEO PICTURES  ಅಜಿತ್ ಕುಮಾರ್ ಅವರ "ನೆರ್ಕೊಂಡ ಪಾರವೈ", "ಥುನಿವು", ಉದಯನಿಧಿ ಸ್ಟಾಲಿನ್ ಅವರ "ನೆಂಜುಕು ನೀಧಿ"  ಮುಂತಾದ ಜನಪ್ರಿಯ ಚಿತ್ರಗಳನ್ನು ವಿತರಣೆ ಮಾಡಿದೆ. ಸುಭಾಸ್ಕರನ್ ಅವರ ಲೈಕಾ ಪ್ರೊಡಕ್ಷನ್ಸ್ ಹಾಗೂ ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್  ಈ ಚಿತ್ರವನ್ನು ನಿರ್ಮಿಸಿದೆ.

ಕಮಲ್ ಹಾಸನ್, ಸಿದ್ಧಾರ್ಥ್, ಕಾಜಲ್ ಅಗರವಾಲ್, ರಕುಲ್ ಪ್ರೀತ್ ಸಿಂಗ್ , ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೊವರ್, ವಿವೇಕ್, ಸಮುದ್ರಕನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೀಪಾ ಶಂಕರ್ ಮುಂತಾದವರು "ಇಂಡಿಯನ್ 2" ಚಿತ್ರದ ತಾರಾಬಳಗದಲ್ಲಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Read More