Home> Entertainment
Advertisement

ಕಾಂತಾರಾ ಫಸ್ಟ್‌ ಲುಕ್‌ ಔಟ್:‌ ಕುಂಭಾಸಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಚಿತ್ರತಂಡದಿಂದ ವಿಶೇಷ ಪೂಜೆ...

Kantara Prequel: ನಟ-ನಿರ್ದೇಶಕ ರಿಷಬ್‌ ಶೆಟ್ಟಿಯ ಕಾಂತಾರಾ ಸಿನಿಮಾದ ಮುಹೂರ್ತ ಇಂದು ಕುಂಭಾಸಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ನೆರೆವೇರಿದ್ದು, ಇದೀಗ ಚಿತ್ರತಂಡ ಚಿತ್ರದ ಫಸ್ಟ್‌ ಲುಕ್‌ ಬಿಡುಗಡೆ ಮಾಡಿದೆ.
 

ಕಾಂತಾರಾ ಫಸ್ಟ್‌ ಲುಕ್‌ ಔಟ್:‌ ಕುಂಭಾಸಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಚಿತ್ರತಂಡದಿಂದ ವಿಶೇಷ ಪೂಜೆ...

Kantara First Look: ಕಾಂತಾರ ಚಿತ್ರದ ಮೊದಲ ಅಧ್ಯಾಯಕ್ಕೆ ಇಂದು ಮುಹೂರ್ತ ನಡೆಯುತ್ತಿದ್ದು, ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕುಂಭಾಸಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಚಿತ್ರತಂಡ ವಿಶೇಷ ಪೂಜೆಯನ್ನ ಮಾಡಿಸಿದೆ. ಉದ್ಭವಮೂರ್ತಿ ವಿನಾಯಕ ದೇವರಿಗೆ ಮೂಡು ಗಣಪತಿ ಸೇವೆ, ತ್ರಿಕಾಲ ಸೇವೆ, ಅನ್ನದಾನ ನಡೆದಿದ್ದು, ದೇಗುಲಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದ್ದು ಬಣ್ಣ ಬಣ್ಣದ ಹೂವಿನಿಂದ ಸಿಂಗಾರ ಮಾಡಿಸಿದ್ದಾರೆ.ಈ ಚಿತ್ರದ ಟೀಮ್ ನಿಂದ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದ್ದು, ಸಿನಿಮಾದ ಮುಹೂರ್ತದ ದಿನದಂದೇ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ಹೊಂಬಾಳೆ ಫಿಲ್ಮ್ಸ್ ಘೋಷಣೆ ಮಾಡಿದೆ. 

ಕಾಂತಾರ ಚಿತ್ರದ ಫಸ್ಟ್ ಲುಕ್ ಗಾಗಿ ಮಾಡಿದ ಪೋಸ್ಟರ್ ನಲ್ಲಿ ಇದು ಬರಿ ಬೆಳಕಲ್ಲ, ದರ್ಶನ ಎಂದು ಟ್ಯಾಗ್ ಲೈನ್ ಕೊಡುವ ಮೂಲಕ ಕುತೂಹಲ ರಿಷಬ್ ಶೆಟ್ಟಿ ಮೂಡಿಸಿದ್ದು, ಸಿನಿಮಾ ಬಗ್ಗೆ ದಿನಕ್ಕೊಂದು ಮಾಹಿತಿ ಹೊರ ಬೀಳುತ್ತಿವೆ. ಚಿತ್ರತಂಡ  ಅಧಿಕೃತವಾಗಿ ಯಾವುದೇ ಮಾಹಿತಿ ಸಿಗದೇ ಇದ್ದರೂ, ಬಲ್ಲ ಮೂಲಗಳು ಮಾಹಿತಿಯನ್ನು ಹೊರ ಹಾಕುತ್ತಲೇ ಇವೆ. ಕಾಂತಾರ ಸಿನಿಮಾ ಮೊದಲು ಕನ್ನಡದಲ್ಲಿ ಮಾತ್ರ ರಿಲೀಸ್ ಆಗಿತ್ತು. ಹಿಟ್ ಆದ ನಂತರ ಹಲವು ಭಾಷೆಗಳಲ್ಲಿ ಅದನ್ನು ಡಬ್ ಮಾಡಲಾಯಿತು. 

ಇದನ್ನೂ ಓದಿ: "ಮೂನ್ ವೈಟ್" ಅಂತಾರಾಷ್ಟ್ರೀಯ ಚಿತ್ರೋತ್ಸವ: ಸುಧೀರ್ ಅತ್ತಾವರ್ ಅತ್ಯುತ್ತಮ ನಿರ್ದೇಶಕI ಮ್ರತ್ಯೋರ್ಮ ಅತ್ಯುತ್ತಮ ಚಿತ್ರ ಸೇರಿ 4 ಪ್ರಶಸ್ತಿಗಳು

ಆದರೆ, ಕಾಂತಾರ 2 ಬರೋಬ್ಬರಿ ಏಳು ಭಾಷೆಗಳಲ್ಲಿ ನಿರ್ಮಾಣವಾಗಲಿದ್ದು, ಹಾಗಾಗಿ ಅದ್ಧೂರಿ ಮೇಕಿಂಗ್ ಕೂಡ ಇರಲಿದೆಯಂತೆ. ಮೊನ್ನೆಯಷ್ಟೇ ಸಿನಿಮಾ ಮುಹೂರ್ತದ ಕುರಿತಂತೆ ಪಂಜುರ್ಲಿ ಮತ್ತು ಗುಳಿಗ ದೈವಕ್ಕೆ ಚಿತ್ರತಂಡ ಮೊರೆ ಹೋಗಿದ್ದು, ದೈವಗಳು ಅಸ್ತು ಎಂದಿವೆ ಎನ್ನುವ ಮಾಹಿತಿ ಸಿಕ್ಕಿದ್ದು, ಹೀಗಾಗಿ ಸಿನಿಮಾ ತಂಡ ಮುಹೂರ್ತಕ್ಕೆ ಸರ್ವ ಸಿದ್ಧತೆ ಮಾಡಿಕೊಂಡಿದೆ.ಮತ್ತೊಂದು ಸಮಾಚಾರವೆಂದರೆ, ಈ ಸಿನಿಮಾದಲ್ಲಿ 14ನೇ ಶತಮಾನದಿಂದ ಶುರುವಾಗುವ ಕಥೆ ಕೂಡ ಇರಲಿದೆಯಂತೆ. 

ಈ ವಿಚಾರ ಕುರಿತು ಚಿತ್ರತಂಡ ಮಾಹಿತಿ ನೀಡದೇ ಇದ್ದರೂ, ಗಾಂಧಿ ನಗರದ ಗಲ್ಲಿ ಗಲ್ಲಿಗಳಲ್ಲಿ ಕಾಂತರ ಕಥೆ ಹಾಟ್ ಕೇಕ್ ತರಹ ಮಾರಾಟವಾಗುತ್ತಿದೆ. ಕಾಂತಾರ’ ಸಿನಿಮಾ ವರ್ಲ್ಡ್ ವೈಡ್ ರೀಚ್ ಸಕ್ಸಸ್‌ಫುಲ್ ಪ್ರದರ್ಶನ ಕಂಡಿದ್ದು, ಇದೀಗ ‘ಕಾಂತಾರ’ ಪಾರ್ಟ್ 2 ಯಾವಾಗ ಎಂದು ಕಾದು ಕುಳಿತ ಫ್ಯಾನ್ಸ್‌ಗೆ ಸಿಹಿಸುದ್ದಿ ಸಿಕ್ಕಿದೆ. ಇದೇ ನವೆಂಬರ್‌ಗೆ ಮುಹೂರ್ತ ಫಿಕ್ಸ್ ಆಗಿದ್ದು, ಹೊಂಬಾಳೆ ಸಂಸ್ಥೆ ನಿರ್ಮಾಣದ, ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ‘ಕಾಂತಾರ 2’ ಚಿತ್ರದ ಮುಹೂರ್ತ ಇಂದು ಸರಳವಾಗಿ ನಡೆದಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

 

Read More