Home> Entertainment
Advertisement

ಇದು "ಕೊರಗಜ್ಜ ದೈವ"ದ ನಿಜ ಜೀವನದ ಕಥೆಯ ಚಿತ್ರವೇ?

ಇತ್ತೀಚಿನ ಹಲವಾರು ವರ್ಷಗಳಿಂದ  ಕೊರಗಜ್ಜನ ಮಹಿಮೆ ಮತ್ತು ಕಾರ್ಣಿಕವನ್ನು ತೆರೆಯ ಮೇಲೆ ತರಬೇಕೆಂಬ ಸಹವಾಸವನ್ನು  ಹಲವಾರು ನಿರ್ಮಾಪಕರು ಯತ್ನಿಸುತ್ತಿದ್ದರು. ಇದೀಗ ಸುಧೀರ್ ಅತ್ತಾವರ್ ಕೊರಗಜ್ಜನ ಜೀವನದ ಬಗ್ಗೆ ಸಾಕಷ್ಟು ಮಾಹಿತಿಗಳನ್ನು ಕಲೆ ಹಾಕಿ, ಕೊರಗಜ್ಜನ ಜನಾಂಗದ ಮಹನೀಯರೊಂದಿಗೆ ಚರ್ಚಿಸಿ, ಸುಮಾರು 12ನೇ ಶತಮಾನದಲ್ಲಿದ್ದ ಕೊರಗಜ್ಜನ ನಿಜ ಬದುಕಿನ ಯಾರಿಗೂ ತಿಳಿದಿರದಂತಹ ಸಾಕಷ್ಟು ವಿಷಯಗಳನ್ನು ಈ ಸಿನಿಮಾದ ಮೂಲಕ ಜಗತ್ತಿಗೆ ತೋರಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಇದು

ದೃತಿ ಕ್ರಿಯೇಷನ್ಸ್ ಮತ್ತು ಸಕ್ಸಸ್ ಫಿಲ್ಮ್ಸ್ ಬ್ಯಾನರ್ ಅಡಿ  ತ್ರಿವಿಕ್ರಮ್ ಸಪಲ್ಯ ನಿರ್ಮಿಸುತ್ತಿರುವ, ಸುಧೀರ್ ಅತ್ತಾವರ್ ನಿರ್ದೇಶನದಲ್ಲಿ "ಕರಿ ಹೈದ....ಕರಿ ಅಜ್ಜ..."ಸಿನೆಮಾದ ಮುಹೂರ್ತ ಸಮಾರಂಭವು ಅದ್ದೂರಿಯಾಗಿ ನೆರವೇರಿತು. ಬೆಳ್ತಂಗಡಿ ತಾಲೂಕಿನ  ಬಳ್ಳಮಂಜದ ಇತಿಹಾಸ ಪ್ರಸಿದ್ಧ  ಶ್ರೀಅನಂತೇಶ್ವರ ದೇವಸ್ಥಾನದಲ್ಲಿ ಸ್ಥಳಿಯ ಶಾಸಕ ಹರೀಶ್ ಪೂಂಜ ರವರು ಕ್ಯಾಮರಾ ಚಾಲೂ ಮಾಡುವುದರ ಮೂಲಕ ಅದ್ದೂರಿ ಚಾಲನೆ ನೀಡಿದರು. ಮಾತೃಶ್ರೀ ಕಮಲ ಕೆ ಸಪಲ್ಯ ಆರಂಭ ಫಲಕ ತೋರಿಸಿದರು.

ಇದನ್ನೂ ಓದಿ:  ಮಗಳ ಜೊತೆ ವಿರುಷ್ಕಾ ಉತ್ತರಾಖಂಡ ಪ್ರವಾಸ : ಕರೋಲಿ ಬಾಬಾ ಆರ್ಶೀವಾದ ಪಡೆದ ಸ್ಟಾರ್‌ ದಂಪತಿ

ಇತ್ತೀಚಿನ ಹಲವಾರು ವರ್ಷಗಳಿಂದ  ಕೊರಗಜ್ಜನ ಮಹಿಮೆ ಮತ್ತು ಕಾರ್ಣಿಕವನ್ನು ತೆರೆಯ ಮೇಲೆ ತರಬೇಕೆಂಬ ಸಹವಾಸವನ್ನು  ಹಲವಾರು ನಿರ್ಮಾಪಕರು ಯತ್ನಿಸುತ್ತಿದ್ದರು. ಇದೀಗ ಸುಧೀರ್ ಅತ್ತಾವರ್ ಕೊರಗಜ್ಜನ ಜೀವನದ ಬಗ್ಗೆ ಸಾಕಷ್ಟು ಮಾಹಿತಿಗಳನ್ನು ಕಲೆ ಹಾಕಿ, ಕೊರಗಜ್ಜನ ಜನಾಂಗದ ಮಹನೀಯರೊಂದಿಗೆ ಚರ್ಚಿಸಿ, ಸುಮಾರು 12ನೇ ಶತಮಾನದಲ್ಲಿದ್ದ ಕೊರಗಜ್ಜನ ನಿಜ ಬದುಕಿನ ಯಾರಿಗೂ ತಿಳಿದಿರದಂತಹ ಸಾಕಷ್ಟು ವಿಷಯಗಳನ್ನು ಈ ಸಿನಿಮಾದ ಮೂಲಕ ಜಗತ್ತಿಗೆ ತೋರಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಇತ್ತೀಚೆಗೆ  ಸುಧೀರ್ ನಿರ್ದೇಶನದ ಅರೇಬಿಕ್- ಇಂಗ್ಲಿಷ್ ಸಿನೆಮಾ "ಗುಲೇ ಬಕಾವಲಿ" ಮತ್ತು ಮರಾಠಿ-ಕನ್ನಡ ಸಿನಿಮಾ  "ಅಗೋಳಿ ಮಂಜಣ್ಣ" ಫ್ಲೋರ್ ನಲ್ಲಿ ಇರುವ ಮಧ್ಯೆಯೇ ಇದೀಗ ಸುಧೀರ್ ಮತ್ತೊಂದು ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಮುಹೂರ್ತ ನಡೆಸುವ ಮೊದಲು ಕೊರಗಜ್ಜನ ಸಮುದಾಯದ ಪ್ರಮುಖ ವ್ಯಕ್ತಿಗಳು ಡೊಳ್ಳು -ತಮಟೆಗಳ ವಿಶೇಷ  ಪೂಜೆಯನ್ನು ನಡೆಸಿ ಸಿನೆಮಾಕ್ಕೆ ಶುಭ ಹಾರೈಸಿದರು.

ಇದನ್ನೂ ಓದಿ: Athiya Shetty Wedding: ಮಗಳು ಅಥಿಯಾ - ಕೆಎಲ್‌ ರಾಹುಲ್‌ ಮದುವೆಯ ಹೀಗೆ ಹೇಳಿದ್ರು ನಟ ಸುನೀಲ್ ಶೆಟ್ಟಿ

ಖ್ಯಾತ ಹಾಲಿವುಡ್-ಬಾಲಿವುಡ್ ನಟ ಕಬೀರ್ ಬೇಡಿಯವರು ವಿಶೇಷ ಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರದಲ್ಲಿ ಖ್ಯಾತ ನಟಿಯರಾದ ಭವ್ಯ ಮತ್ತು ಶ್ರುತಿ ಕೂಡಾ ಅಭಿನಯಿಸುತ್ತಿದ್ದಾರೆ. ಭರತ್ ಸೂರ್ಯ ಎನ್ನುವ ಹೊಸ ಕಲಾವಿದನನ್ನು ಈ ಚಿತ್ರದ ಮೂಲಕ ಪರಿಚಯಿಸುತ್ತಿದ್ದಾರೆ. ವಿದ್ಯಾಧರ್ ಶೆಟ್ಟಿ ಸಂಕಲನದ ಜೊತೆಗೆ ಎಂಟುನೂರು ವರ್ಷಗಳ ಇತಿಹಾಸದ ದಾಖಲೆ ಮತ್ತು ಪುರಾವೆಗಳನ್ನು ಕಲೆ ಹಾಕುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಪವನ್ ವಿ ಕುಮಾರ್ ಮತ್ತು ಗಣೇಶ್ ಕೆಳಮನೆ ಕ್ಯಾಮರಾ, ಸುಧೀರ್- ಕ್ರಷ್ಣ ರವಿ ಸಂಗೀತ, ಸುಧೀರ್ ಅತ್ತಾವರ್ ಕಲೆ ಚಿತ್ರಕ್ಕಿದೆ. ತ್ರಿವಿಕ್ರಮ ಬೆಳ್ತಂಗಡಿ ನಿರ್ಮಾಣದ ನಾಲ್ಕನೆಯ ಸಿನೆಮಾ ಇದಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀ

Read More