Home> Entertainment
Advertisement

ಬಿಡುಗಡೆಯಾಯ್ತು ಬೆರಗಾಗಿಸೋ ‘ಬನಾರಸ್’ ಲಿರಿಕಲ್ ವಿಡಿಯೋ ಸಾಂಗ್

ಇತ್ತೀಚೆಗಷ್ಟೇ ಬಿಡುಗಡೆಗೊಂಡಿದ್ದ ಮಾಯಾಗಂಗೆ ಎಂಬ ಹಾಡಿನ ಮೋಡಿಗೆ ಸಿಲುಕದವರೇ ಇಲ್ಲ. ಸಾಹಿತ್ಯ, ಸಂಗೀತ, ದೃಶ್ಯೀಕರಣ ಸೇರಿದಂತೆ ಎಲ್ಲದರಲ್ಲಿಯೂ ಸೈ ಅನ್ನಿಸಿಕೊಂಡಿದ್ದ ಮಾಯಾಗಂಗೆ ಈವತ್ತಿಗೂ ಟ್ರೆಂಡಿಂಗ್‌ನಲ್ಲಿದೆ. ಇದೇ ಹೊತ್ತಿನಲ್ಲೀಗ ಲಿರಿಕಲ್ ವೀಡಿಯೋ ಸಾಂಗ್ ಒಂದು ಬಿಡುಗಡೆಗೊಂಡಿದೆ.

ಬಿಡುಗಡೆಯಾಯ್ತು ಬೆರಗಾಗಿಸೋ ‘ಬನಾರಸ್’ ಲಿರಿಕಲ್ ವಿಡಿಯೋ ಸಾಂಗ್

ಝೈದ್ ಖಾನ್ ನಾಯಕನಾಗಿ ಎಂಟ್ರಿ ಕೊಡುತ್ತಿರುವ ಬಹುನಿರೀಕ್ಷಿತ ಚಿತ್ರ ಬನಾರಸ್. ಜಯತೀರ್ಥ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾ ಈಗಾಗಲೇ ನಾನಾ ದಿಕ್ಕುಗಳಿಂದ ಪ್ರೇಕ್ಷಕರನ್ನು ಸೆಳೆದುಕೊಂಡಿದ್ದು, ಕುತೂಹಲ ಹುಟ್ಟು ಹಾಕಿದೆ. ಅದನ್ನೆಲ್ಲ ಮತ್ತಷ್ಟು ತೀವ್ರವಾಗಿಸಿದ ಕ್ರೆಡಿಟ್ ಸಲ್ಲುವುದು ಮುದ್ದಾಗಿ ಮೂಡಿಬಂದು, ಹಂತ ಹಂತವಾಗಿ ಬಿಡುಗಡೆಯಾದ ಹಾಡುಗಳಿಗೆ.

ಇದನ್ನೂ ಓದಿ:   ವಂಚಕನನ್ನು ಮದುವೆಯಾಗಲು ಇಚ್ಚಿಸಿದ್ದ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್..!

ಇತ್ತೀಚೆಗಷ್ಟೇ ಬಿಡುಗಡೆಗೊಂಡಿದ್ದ ಮಾಯಾಗಂಗೆ ಎಂಬ ಹಾಡಿನ ಮೋಡಿಗೆ ಸಿಲುಕದವರೇ ಇಲ್ಲ. ಸಾಹಿತ್ಯ, ಸಂಗೀತ, ದೃಶ್ಯೀಕರಣ ಸೇರಿದಂತೆ ಎಲ್ಲದರಲ್ಲಿಯೂ ಸೈ ಅನ್ನಿಸಿಕೊಂಡಿದ್ದ ಮಾಯಾಗಂಗೆ ಈವತ್ತಿಗೂ ಟ್ರೆಂಡಿಂಗ್‌ನಲ್ಲಿದೆ. ಇದೇ ಹೊತ್ತಿನಲ್ಲೀಗ ಲಿರಿಕಲ್ ವೀಡಿಯೋ ಸಾಂಗ್ ಒಂದು ಬಿಡುಗಡೆಗೊಂಡಿದೆ.

‘ಎಲ್ಲ ಟ್ರೋಲು ಎಲ್ಲಾ ಟ್ರೋಲು, ಸಿಕ್ಕಾಪಟ್ಟೆ ಕೊಲೇಸ್ಟ್ರಾಲು’ ಅಂತ ಶುರುವಾಗೋ ಈ ಹಾಡಿಗೆ ಡಾ. ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ. ವಿಶೇಷವೆಂದರೆ, ಸಂಗೀತ ಸಂಯೋಜನೆ ಮಾಡಿರುವ ಅಜನೀಶ್ ಲೋಕನಾಥ್ ಅವರೇ ಈ ಹಾಡನ್ನು ಹಾಡಿದ್ದಾರೆ. ಸಾಮಾನ್ಯವಾಗಿ ಮೆಲೋಡಿ ಹಾಡುಗಳ ಮೂಲಕ ಗಮನ ಸೆಳೆಯುವ, ಅದಕ್ಕೆ ಪ್ರಸಿದ್ಧಿ ಪಡೆದುಕೊಂಡಿರುವವರು ನಾಗೇಂದ್ರ ಪ್ರಸಾದ್. ಅವರು ಆಗಾಗ ಟಪ್ಪಾಂಗುಚ್ಚಿ ಸಾಂಗಿಗೂ ಸೈ ಎಂಬುದನ್ನು ಸಾಬೀತುಪಡಿಸುತ್ತಿರುತ್ತಾರೆ.

ಈ ಟ್ರೋಲ್ ಹಾಡಿನ ಮೂಲಕ ಅದು ಮತ್ತೊಮ್ಮೆ ರುಜುವಾತಾಗಿದೆ. ವಿಶೆಷವಾಗಿ, ಈ ಹಾಡಿನಲ್ಲಿ ಝೈದ್ ಖಾನ್ ಮತ್ತೆ ಮಿಂಚಿದ್ದಾರೆ. ಆ ಮೂಲಕ ಮತ್ತಷ್ಟು ಭರವಸೆ ಮೂಡಿಸಿದ್ದಾರೆ. ಈ ಹಿಂದೆ ಮಾಯಾಗಂಗೆ ಹಾಡು ನೋಡಿದವರೆಲ್ಲರೂ ಝೈದ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದರು. ಇದೀಗ ಸದರಿ ಟ್ರೋಲ್ ಸಾಂಗ್ ಕೂಡಾ ಅಂಥಾದ್ದೇ ಮೆಚ್ಚುಗೆಗೆ ಪಾತ್ರವಾಗಿದೆ. ಈ ಜಮಾನದ ಟ್ರೆಂಡ್ ಅನ್ನು ಸಾಹಿತ್ಯಕ್ಕೆ ಒಗ್ಗಿಸಿಕೊಂಡಿರುವ ಈ ಹಾಡೂ ಕೂಡಾ ಟ್ರೆಂಡ್ ಸೆಟ್ ಮಾಡೋದರಲ್ಲಿ ಯಾವ ಅನುಮಾನವೂ ಇಲ್ಲ. 

ಇದನ್ನೂ ಓದಿ:  ತೆರೆ ಕಂಡಾಯ್ತು ಮಾನ್ಸೂನ್ ರಾಗ, ಚಿತ್ರಕ್ಕೆ ಪ್ರೇಕ್ಷಕ ಕೊಟ್ಟ ಮಾಕ್ಸ್ ಎಷ್ಟು ಗೊತ್ತಾ ?

ಬನಾರಸ್ ಏಕಕಾಲದಲ್ಲಿಯೇ ಐದು ಭಾಷೆಗಳಲ್ಲಿ ತಯಾರುಗೊಂಡಿರುವ ಪ್ಯಾನಿಂಡಿಯಾ ಚಿತ್ರ. ಇದನ್ನು ಬಲು ಪ್ರೀತಿಯಿಂದ ತಿಲಕ್ ರಾಜ್ ಬಲ್ಲಾಳ್ ನಿರ್ಮಾಣ ಮಾಡಿದ್ದಾರೆ. ಕರಾವಳಿಯ ಹುಡುಗಿ ಸೋನಲ್ ಮಂತೇರೋ ನಾಯಕಿಯಾಗಿ ಝೈದ್ ಖಾನ್‌ಗೆ ಸಾಥ್ ಕೊಟ್ಟಿದ್ದಾರೆ. ಸುಜಯ್ ಶಾಸ್ತ್ರಿ, ದೇವರಾಜ್, ಅಚ್ಯುತ್ ಕುಮಾರ್, ಸಪ್ನಾ ರಾಜ್, ಬರ್ಖತ್ ಅಲಿ ಮುಂತಾದವರು ಪ್ರಧಾನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಬನಾರಸ್ ಇದೇ ನವೆಂಬರ್ ನಾಲಕ್ಕನೇ ತಾರೀಕಿನಂದು ಬಿಡುಗಡೆಗೊಳ್ಳಲಿದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More