Home> Entertainment
Advertisement

ವಿನಯ್ ರಾಜ್ ಕುಮಾರ್ ನಟನೆಯ ‘ಒಂದು ಸರಳ ಪ್ರೇಮಕಥೆ’ ಪೋಸ್ಟರ್ ರಿಲೀಸ್

ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಮೈಸೂರಿನಲ್ಲಿ ಎರಡನೇ ಹಂತದ ಚಿತ್ರೀಕರಣದಲ್ಲಿ ನಿರತವಾಗಿದೆ. ಇದೀಗ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ ಚಿತ್ರತಂಡ.

ವಿನಯ್ ರಾಜ್ ಕುಮಾರ್ ನಟನೆಯ ‘ಒಂದು ಸರಳ ಪ್ರೇಮಕಥೆ’ ಪೋಸ್ಟರ್ ರಿಲೀಸ್

ಬೆಂಗಳೂರು : ಸಿಂಪಲ್ ಸುನಿ ನಿರ್ದೇಶನದಲ್ಲಿ ವಿನಯ್ ರಾಜ್ ಕುಮಾರ್ ನಟಿಸುತ್ತಿರುವ ರೋಮ್ಯಾಂಟಿಕ್ ಕಾಮಿಡಿ ಸಿನಿಮಾ ‘ಒಂದು ಸರಳ ಪ್ರೇಮಕಥೆ’. ಚಿತ್ರದಲ್ಲಿ ನಾಯಕಿಯರಾಗಿ ಸ್ವಾತಿಷ್ಠ ಕೃಷ್ಣನ್, ‘ರಾಧಾ ಕೃಷ್ಣ’ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್ ನಟಿಸುತ್ತಿದ್ದಾರೆ. ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಮೈಸೂರಿನಲ್ಲಿ ಎರಡನೇ ಹಂತದ ಚಿತ್ರೀಕರಣದಲ್ಲಿ ನಿರತವಾಗಿದೆ. ಇದೀಗ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ ಚಿತ್ರತಂಡ.

ನಟ ವಿನಯ್ ರಾಜ್ ಕುಮಾರ್ ಮಾತನಾಡಿ ಮೊದಲ ಶೆಡ್ಯೂಲ್ ಚಿತ್ರೀಕರಣ ಮುಗಿದಿದೆ. ನನಗೆ ಮೊದಲಿನಿಂದಲೂ ರೋಮ್ಯಾಂಟಿಕ್ ಕಾಮಿಡಿ ಸಿನಿಮಾ ತುಂಬಾ ಇಷ್ಟ. ಜೊತೆಗೆ ಸುನಿ ಅವರ ನಿರ್ದೇಶನದ ಶೈಲಿ ಕೂಡಾ ತುಂಬಾ ಇಷ್ಟ ಎಂದಿದ್ದಾರೆ. ಸುನಿ ಅವರು ಈ ಸಿನಿಮಾ ಕಥೆ ಹೇಳಲು ಬಂದಾಗ ಅವರ ನಿರ್ದೇಶನದಲ್ಲಿ ಸಿನಿಮಾ ಮಾಡ್ತಿದ್ದೀನಿ ಅನ್ನೋದೇ ತುಂಬಾ ಖುಷಿ ಕೊಟ್ಟಿತ್ತು. ಈ ಚಿತ್ರದಲ್ಲಿ ಸಂಗೀತ ನಿರ್ದೇಶಕನ ಪಾತ್ರದಲ್ಲಿ ನಟಿಸಿರುವುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ. 

ಇದನ್ನೂ ಓದಿ : ಹಿರಿಯ ನಟ ನಿರ್ದೇಶಕ ಸತೀಶ್ ಕೌಶಿಕ್ ವಿಧಿ ವಶ !

ನಿರ್ದೇಶಕ ಸಿಂಪಲ್ ಸುನಿ ಮಾತನಾಡಿ ‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಗೆ ಇಟ್ಟ ಮೊದಲ ಟೈಟಲ್ ‘ಒಂದು ಸರಳ ಪ್ರೇಮಕಥೆ’. ಯಾವುದಾದರೂ ಸಿನಿಮಾಗೆ ಈ ಟೈಟಲ್ ಇಡೋಣ ಎಂದು ಹತ್ತು ವರ್ಷದಿಂದ ಟೈಟಲ್ ರಿನಿವಲ್ ಮಾಡಿಕೊಂಡು ಬಂದಿದ್ದೆ ಎಂದಿದ್ದಾರೆ. ಚಿತ್ರಕ್ಕೆ ಪ್ರಸನ್ನ ಅವರು ಕಥೆ ಬರೆದಿದ್ದಾರೆ. ಜನವರಿ 23ರಂದು ಸಿನಿಮಾ ಮುಹೂರ್ತ ಆಗಿತ್ತು, ಬೆಂಗಳೂರು, ಚಿಕ್ಕಪೇಟೆಯಲ್ಲಿ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು, ಮೈಸೂರಿನಲ್ಲಿ ಇವತ್ತು ಕೊನೆಯ ದಿನದ ಚಿತ್ರೀಕರಣ ನಡೆಯುತ್ತಿದೆ. ಈಗಾಗಲೇ ಶೇಕಡಾ 50ರಷ್ಟು ಚಿತ್ರೀಕರಣ ಮುಗಿದಿದೆ ಎಂದು ಹೇಳಿದ್ದಾರೆ. 

ಸಾಧುಕೋಕಿಲ, ರಾಜೇಶ್ ನಟರಂಗ, ಅರುಣ ಬಾಲರಾಜ್ ಒಳಗೊಂಡ ಕಲಾವಿದರು ಒಂದು ಸರಳ ಪ್ರೇಮಕಥೆ ಚಿತ್ರದಲ್ಲಿದ್ದು, ಕಾರ್ತಿಕ್ ಛಾಯಾಗ್ರಹಣ, ಆದಿ ಸಂಕಲನ, ವೀರ್ ಸಮರ್ಥ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

ಇದನ್ನೂ ಓದಿ : ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಡಿ ಬಾಸ್‌..!

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Read More