Home> Entertainment
Advertisement

ಪ್ರಜ್ವಲ್ ದೇವರಾಜ್-ಅದಿತಿ ಪ್ರಭುದೇವ ಅಭಿನಯದ ‘ಮಾಫಿಯಾ’ ಚಿತ್ರದ ಡಬ್ಬಿಂಗ್ ಮುಕ್ತಾಯ

Mafia Kannada Movie: ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಐದು ಸಾಹಸ ಸನ್ನಿವೇಶಗಳಿದೆ. ಈ ಚಿತ್ರಕ್ಕಾಗಿ ಪ್ರಜ್ವಲ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ.

ಪ್ರಜ್ವಲ್ ದೇವರಾಜ್-ಅದಿತಿ ಪ್ರಭುದೇವ ಅಭಿನಯದ ‘ಮಾಫಿಯಾ’ ಚಿತ್ರದ ಡಬ್ಬಿಂಗ್ ಮುಕ್ತಾಯ

ಬೆಂಗಳೂರು: ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಮತ್ತು ಅದಿತಿ ಪ್ರಭುದೇವ ನಟಿಸಿರುವ "ಮಾಫಿಯಾ" ಚಿತ್ರಕ್ಕೆ ಸಾಧುಕೋಕಿಲ ಅವರ ಲೂಪ್ ಸ್ಟುಡಿಯೋದಲ್ಲಿ ಡಬ್ಬಿಂಗ್ ಮುಕ್ತಾಯವಾಗಿದೆ. ಬೆಂಗಳೂರು ಕುಮಾರ್ ಫಿಲ್ಮ್ಸ್ ಲಾಂಛನದಡಿ ಕುಮಾರ್ ಬಿ ನಿರ್ಮಿಸಿರುವ ಈ ಚಿತ್ರವನ್ನು ಲೋಹಿತ್ ಹೆಚ್ ನಿರ್ದೇಶಿಸಿದ್ದಾರೆ. ಅಕ್ಟೋಬರ್‍ನಲ್ಲಿ ಟೀಸರ್ ಬರಲಿದ್ದು, ನವೆಂಬರ್ ಅಂತ್ಯದ ವೇಳೆಗೆ ಸಿನಿಮಾ ತೆರೆಗೆ ಬರಲಿದೆ.

ಇದನ್ನೂ ಓದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ತೇಜಸ್ವಿನಿ : ಬೇಬಿ ಬಂಪ್ಸ್ ಫೋಟೋಸ್‌ ಇಲ್ಲಿವೆ

ಆಕ್ಷನ್ ಜಾನರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್‍ನಲ್ಲಿ ಚಿತ್ರೀಕರಣ ನಡೆದಿದೆ. ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಐದು ಸಾಹಸ ಸನ್ನಿವೇಶಗಳಿದೆ. ಈ ಚಿತ್ರಕ್ಕಾಗಿ ಪ್ರಜ್ವಲ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್‌ ಧ್ವನಿಯ ಹಿಂದಿರುವ ಆ ವ್ಯಕ್ತಿ ಯಾರು ಗೊತ್ತಾ?

ಈ ಚಿತ್ರದಲ್ಲಿ 4 ಹಾಡುಗಳಿದ್ದು, ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಎಸ್.ಪಾಂಡಿಕುಮಾರ್ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ  ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್, ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More