Home> Entertainment
Advertisement

ಮುಕ್ತಾಯ ಹಂತದಲ್ಲಿ ಪೃಥ್ವಿ-ಮಿಲನಾ ಅಭಿನಯದ ʻF0R REGNʼ ಚಿತ್ರೀಕರಣ

ಈ ಚಿತ್ರದಲ್ಲಿ ಪೃಥ್ವಿ ಅಂಬರ್ ಆಶು ಪಾತ್ರದಲ್ಲಿ ಹಾಗೂ ಮಿಲನಾ ನಾಗರಾಜ್ ಅವರು ಅನ್ವಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಮುಕ್ತಾಯ ಹಂತದಲ್ಲಿ ಪೃಥ್ವಿ-ಮಿಲನಾ ಅಭಿನಯದ ʻF0R REGNʼ ಚಿತ್ರೀಕರಣ

ಬೆಂಗಳೂರು: 2020ರ ಸೂಪರ್ ಹಿಟ್ ಚಿತ್ರಗಳಾದ ‘ದಿಯಾ’ ಹಾಗೂ ‘ಲವ್ ಮಾಕ್ಟೇಲ್’ ಚಿತ್ರಗಳ ಮೂಲಕ ಮನೆಮಾತಾಗಿರುವ ನಟ ಪೃಥ್ವಿ ಅಂಬರ್ ಹಾಗೂ ಮಿಲನಾ ನಾಗರಾಜ್ ಅಭಿನಯದಲ್ಲಿ ಮೂಡಿಬರುರುತ್ತಿರುವ  "F0R REGN" (ಫಾರ್ ರಿಜಿಸ್ಟರೇಷನ್) ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ‌.

ಮೇ 24 ಅಂದರೆ ಮಂಗಳವಾರ ನಿರ್ದೇಶಕ ನವೀನ್ ದ್ವಾರಕನಾಥ್ ಅವರ ಹುಟ್ಟುಹಬ್ಬ. ಈ ಸಂಭ್ರಮಕ್ಕಾಗಿ ಚಿತ್ರತಂಡ ಮೇಕಿಂಗ್ ವಿಡಿಯೋ ಬಿಡುಗಡೆ ಮಾಡುವ ಮೂಲಕ ಶುಭಾಶಯ ಕೋರಿದೆ. ಚಿತ್ರತಂಡದ ಈ ಪ್ರೀತಿಗೆ ಸಂತಸಪಟ್ಟಿರುವ ನಿರ್ದೇಶಕ ನವೀನ್ ದ್ವಾರಕನಾಥ್, ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ: ರಕ್ತಸಿಕ್ತ ಕೈಯಲ್ಲಿ ಲಾಂಗ್ ಹಿಡಿದು ವಸಿಷ್ಠ ಎಂಟ್ರಿ.. ʻLove..ಲಿʼ ರಾ ಲುಕ್‌ಗೆ ಫ್ಯಾನ್ಸ್‌ ಫಿದಾ!

ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ಈ ಚಿತ್ರದ ಫಸ್ಟ್ ಲುಕ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಈ ಚಿತ್ರದಲ್ಲಿ ಪೃಥ್ವಿ ಆಶು ಪಾತ್ರದಲ್ಲಿ ಹಾಗೂ ಮಿಲನಾ ಅವರು ಅನ್ವಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಿಶ್ಚಲ್ ಫಿಲಂಸ್ ಮೂಲಕ ಎನ್.ನವೀನ್ ರಾವ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನವೀನ್ ದ್ವಾರಕನಾಥ್ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆಯನ್ನು ನಿರ್ದೇಶಕರೇ ಬರೆದಿದ್ದಾರೆ.

ಆರ್.ಕೆ.ಹರೀಶ್ ಸಂಗೀತ ನಿರ್ದೇಶನ, ಅಭಿಷೇಕ್ ಕಲ್ಲತ್ತಿ ಛಾಯಾಗ್ರಹಣ ಹಾಗೂ ಮನು ಶೆಡ್ಗಾರ್ ಅವರ ಸಂಕಲನವಿರುವ ಈ ಚಿತ್ರದ ಕಾರ್ಯಕಾರ ನಿರ್ಮಾಪಕರಾಗಿ ನಿರಂಜನ್ ರಾಧಾಕೃಷ್ಣ ಇದ್ದಾರೆ.

ಇದನ್ನೂ ಓದಿ: ʼವಿಕ್ರಾಂತ್‌ ರೋಣಾʼ ನೋಡಿದ ರಾಮ್‌ಗೋಪಾಲ್‌ ವರ್ಮಾ ಸಿನಿರಂಗಕ್ಕೆ ಎಚ್ಚರಿಕೆ ಕೊಟ್ಟಿದ್ಯಾಕೆ?

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More