Home> Entertainment
Advertisement

'ವಾಮನ' ಜೊತೆಯಾದ ರಚನಾ ರೈ... ಸಕಲಕಲಾವಲ್ಲಭೆ ಈ ತುಳುನಾಡ ಬೆಡಗಿ

ಶಂಕರ್ ರಾಮನ್ ನಿರ್ದೇಶನದಲ್ಲಿ  ಮೂಡಿ ಬರ್ತಿರುವ ವಾಮನ ಸಿನಿಮಾಗೆ ತುಳುನಾಡ ಕುವರಿ ರಚನಾ ರೈ ಎಂಟ್ರಿ ಕೊಟ್ಟಿದ್ದಾರೆ. ಈ ಹಿಂದೆ ತುಳು ಸಿನಿಮಾವೊಂದರಲ್ಲಿ ನಟಿಸಿದ್ದ ರಚನಾಗೆ ಇದು ಮೊದಲ ಕನ್ನಡ ಸಿನಿಮಾವಾಗಿದೆ.

'ವಾಮನ' ಜೊತೆಯಾದ ರಚನಾ ರೈ... ಸಕಲಕಲಾವಲ್ಲಭೆ ಈ ತುಳುನಾಡ ಬೆಡಗಿ

ಬೆಂಗಳೂರು: ಶೋಕ್ದಾರ್ ಧನ್ವೀರ್ ಗೌಡ ನಟನೆಯ  ವಾಮನ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದ್ದು, ಇದೀಗ ವಾಮನ ಅಂಗಳದಿಂದ ಮೆಗಾ ಅಪ್ ಡೇಟ್ ವೊಂದು ಸಿಕ್ಕಿದೆ. ಧನ್ವೀರ್ ಗೆ ನಾಯಕಿ ಯಾರ್ತಾರೆ ಅನ್ನೋ ಅಭಿಮಾನಿಗಳ ಕುತೂಹಲದ ಪ್ರಶ್ನೆಗೀಗ ಚಿತ್ರತಂಡ ಉತ್ತರ ನೀಡಿದೆ.

ಶಂಕರ್ ರಾಮನ್ ನಿರ್ದೇಶನದಲ್ಲಿ  ಮೂಡಿ ಬರ್ತಿರುವ ವಾಮನ ಸಿನಿಮಾಗೆ ತುಳುನಾಡ ಕುವರಿ ರಚನಾ ರೈ ಎಂಟ್ರಿ ಕೊಟ್ಟಿದ್ದಾರೆ. ಈ ಹಿಂದೆ ತುಳು ಸಿನಿಮಾವೊಂದರಲ್ಲಿ ನಟಿಸಿದ್ದ ರಚನಾಗೆ ಇದು ಮೊದಲ ಕನ್ನಡ ಸಿನಿಮಾವಾಗಿದೆ.

ಇದನ್ನೂ ಓದಿ- ಅಪ್ಪಣ್ಣ ಸಂತೋಷ್ ನಿರ್ದೇಶನದ 'ಮನಸ್ಮಿತ' ಚಿತ್ರ ಜೂ.3ಕ್ಕೆ ತೆರೆಗೆ!

ತಮ್ಮ ಪಾತ್ರದ ಬಗ್ಗೆ ಹೆಚ್ಚೇನೂ ಗುಟ್ಟುಬಿಟ್ಟು ಕೊಡದ ರಚನಾ,  ಬಬ್ಲಿ ಪಾತ್ರದ ಮೂಲಕ ಅಭಿಮಾನಿಗಳನ್ನು ರಂಜಿಸುವುದಾಗಿ ಹೇಳಿಕೊಂಡಿದ್ದಾರೆ.  ಬ್ಯಾಡ್ಮಿಂಟನ್ ಫ್ಲೈಯರ್ ಆಗಿರುವ ಈ ತುಳುನಾಡ ಚೆಲುವೆ, ಮಾಡೆಲ್, ಡ್ಯಾನ್ಸರ್ ಹಾಗೇ ಬರಹಗಾರ್ತಿ ಕೂಡ. ಓ‌ ಮೈ ಡಾಗ್ ಎಂಬ ಪುಸ್ತಕ ಬರೆದಿರುವ ರಚನಾ ಸಕಲಕಲಾವಲ್ಲಭೆ. 

ಸದ್ಯ ವಾಮನ ಸಿನಿಮಾದಲ್ಲಿ ಧನ್ವೀರ್ ಗೆ ನಾಯಕಿಯಾಗಿ ನಟಿಸ್ತಿರುವ ರಚನಾ ರೈ, ಈಗಾಗಲೇ ಸೆಕೆಂಡ್ ಶೆಡ್ಯೂಲ್ಡ್ ಶೂಟಿಂಗ್ ಕಂಪ್ಲೀಟ್ ಮಾಡಿದ್ದಾರೆ. 

ಇದನ್ನೂ ಓದಿ- ಬಾಕ್ಸ್ ಆಫೀಸ್ ನಲ್ಲಿ ಬಾಲಿವುಡ್ ನಟರ ಸಿನಿಮಾಗಳ ಹೆಡಮುರಿಗೆ ಕಟ್ಟಿದ ಕೆಜಿಎಫ್ 2...!

ಈಕ್ವಿನಾಕ್ಸ್ ಗ್ಲೋಬಲ್ ಎಂಟರ್‌ಟೈನ್‌ಮೆಂಟ್‌ ನಡಿ ಮೂಡಿ ಬರ್ತಿರುವ ಮಾಸ್​ ಆಕ್ಷನ್ ಎಂಟರ್​ಟೇನರ್ ವಾಮನ ಸಿನಿಮಾಗೆ ಚೇತನ್ ಕುಮಾರ್ ಬಂಡವಾಳ ಹೂಡಿದ್ದು, ಕನ್ನಡ ಮತ್ತು ತೆಲುಗು ಚಿತ್ರಗಳಿಗೆ ಸಂಭಾಷಣಾಗಾರನಾಗಿ ಕಾರ್ಯನಿರ್ವಹಿಸಿದ್ದ ಶಂಕರ್ ರಾಮನ್ ಈಗ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More