Home> Entertainment
Advertisement

ʻರಶ್ಮಿಕಾ ಮಂದಣ್ಣ ಪ್ರಾಣಾಪಾಯದಿಂದ ಪಾರು!ʼ ಆತಂಕ ಹುಟ್ಟಿಸಿರುವ ಖ್ಯಾತ ನಟಿಯ ಪೋಸ್ಟ್!!

Rashmika flight emergency landing: ನಟಿ ರಶ್ಮಿಕಾ ಮಂದಣ್ಣ ಕುರಿತ ಸುದ್ದಿಯಿಂದ ಅವರ ಅಭಿಮಾನಿಗಳು ಶಾಕ್ ಆಗಿದ್ದಾರೆ. ರಶ್ಮಿಕಾ ಮಂದಣ್ಣ ತೆರಳುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ ಆಗಿದೆ. 

ʻರಶ್ಮಿಕಾ ಮಂದಣ್ಣ ಪ್ರಾಣಾಪಾಯದಿಂದ ಪಾರು!ʼ ಆತಂಕ ಹುಟ್ಟಿಸಿರುವ ಖ್ಯಾತ ನಟಿಯ ಪೋಸ್ಟ್!!

Rashmika flight emergency landing: ನಟಿ ರಶ್ಮಿಕಾ ಮಂದಣ್ಣ ಸಂಚರಿಸುತ್ತಿದ್ದ ವಿಮಾನ ತುರ್ತು ಭೂ ಸ್ಪರ್ಶ ಮಾಡಿದೆ. ಇದರಿಂದ ಕೆಲ ಹೊತ್ತು ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಇದರ ಬಗ್ಗೆ ಖುದ್ದು ರಶ್ಮಿಕಾ ಮಂದಣ್ಣ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ. ವಿಮಾನದಲ್ಲಿ ಕುಳಿತಿರುವ- ಫೋಟೋದ ಜೊತೆ ಆತಂಕದ ಕ್ಷಣಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. 

fallbacks

ಇದನ್ನೂ ಓದಿ: Bollywood Actress: 19 ಸಿನಿಮಾ ಫ್ಲಾಪ್‌.. 4000 ಕೋಟಿ ಗಳಿಕೆ, ಬಾಲಿವುಡ್‌ನ ಅತ್ಯಂತ ಯಶಸ್ವಿ ನಟಿ

ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ರಶ್ಮಿಕಾ ಅವರು ನಟಿ ಶ್ರದ್ಧಾ ಅವರೊಂದಿಗೆ ಸೆಲ್ಫಿ ಹಂಚಿಕೊಂಡಿದ್ದಾರೆ. "ನಾವು ಇಂದು ಸಾವಿನ ದವಡೆಯಿಂದ ಪಾರಾಗಿದ್ದೇವೆ" ಎಂದು ಬರೆದುಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಮುಂಬೈನಿಂದ ಹೈದರಾಬಾದ್‌ಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ತಾಂತ್ರಿಕ ಸಮಸ್ಯೆಯಿಂದ ವಿಮಾನ 30 ನಿಮಿಷಗಳ ನಂತರ ಮತ್ತೆ ಮುಂಬೈಗೆ ಮರಳಿತು. ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ರಶ್ಮಿಕಾ ಮಂದಣ್ಣ ಸದ್ಯ ನ್ಯಾಷನಲ್‌ ಕ್ರಶ್‌ ಎಂದೇ ಖ್ಯಾತರಾಗಿದ್ದಾರೆ. ಅನಿಮಲ್ ಯಶಸ್ಸಿನ ಬಳಿಕ, ಪುಷ್ಪಾ 2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಸುಕುಮಾರ್ ಬರೆದು ನಿರ್ದೇಶಿಸಿದ ಪುಷ್ಪ: ದಿ ರೈಸ್ 2021 ರಲ್ಲಿ ಬಿಡುಗಡೆಯಾಯಿತು. ಅದು ಬ್ಲಾಕ್ ಬಸ್ಟರ್ ಹಿಟ್‌ ಆಯಿತು. ಚಿತ್ರದಲ್ಲಿ ಶ್ರೀವಲ್ಲಿ ಪಾತ್ರದಲ್ಲಿ ರಶ್ಮಿಕಾ ನಟಿಸಿದ್ದಾರೆ.

ಇದನ್ನೂ ಓದಿ: Nayanthara Remuneration: ಸಂಭಾವನೆಗಾಗಿ ಗಂಡನ ಸಿನಿಮಾನೇ ಕೈಬಿಟ್ಟ ನಯನತಾರಾ!?  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Read More