Home> Entertainment
Advertisement

ನವೆಂಬರ್ 7 ರಿಂದ 11 ರವರೆಗೆ ಗಂಧದ ಗುಡಿ ಚಿತ್ರದ ಟಿಕೆಟ್ ದರದಲ್ಲಿ ಇಳಿಕೆ

ನಮ್ಮೆಲ್ಲರ ಹೆಮ್ಮೆ ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ ಅಭಿನಯದ ಚಿತ್ರ ಗಂಧದ ಗುಡಿಯನ್ನು ಕನ್ನಡಿಗರೆಲ್ಲರೂ ನೋಡಬೇಕೆನ್ನುವ ದೃಷ್ಟಿಕೋನದಿಂದ ಈಗ ಟಿಕೆಟ್ ದರದಲ್ಲಿ ಕಡಿತ ಮಾಡಲಾಗಿದೆ.

ನವೆಂಬರ್ 7 ರಿಂದ 11 ರವರೆಗೆ ಗಂಧದ ಗುಡಿ ಚಿತ್ರದ ಟಿಕೆಟ್ ದರದಲ್ಲಿ ಇಳಿಕೆ

ಬೆಂಗಳೂರು: ನಮ್ಮೆಲ್ಲರ ಹೆಮ್ಮೆ ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ ಅಭಿನಯದ ಚಿತ್ರ ಗಂಧದ ಗುಡಿಯನ್ನು ಕನ್ನಡಿಗರೆಲ್ಲರೂ ನೋಡಬೇಕೆನ್ನುವ ದೃಷ್ಟಿಕೋನದಿಂದ ಈಗ ಟಿಕೆಟ್ ದರದಲ್ಲಿ ಕಡಿತ ಮಾಡಲಾಗಿದೆ.

ಈ ವಿಷಯವನ್ನು ಚಿತ್ರದ ನಿರ್ಮಾಪಕಿಯಾಗಿರುವ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಟ್ವೀಟ್ ಮೂಲಕ ಧೃಡಪಡಿಸಿದ್ದಾರೆ.

ಗಂಧದಗುಡಿ ಅಪ್ಪು ರವರ ಒಂದು ಕನಸು ಕರ್ನಾಟಕದ ವನ್ಯ ಸಂಪತ್ತು ಹಾಗೂ ಪ್ರಕೃತಿ ಸೌಂದರ್ಯವನ್ನು ಕನ್ನಡಿಗರಿಗೆ ಪರಿಚಯಿಸುವ ಅವರ ಹಂಬಲ ಈ ಸಿನಿಮಾ ರೂಪಗೊಳ್ಳಲು ಕಾರಣ, ಅಪ್ಪು ಅವರ ಉದ್ದೇಶ ಈ ಸಿನಿಮಾ ಎಲ್ಲ ಕನ್ನಡಿಗರು ನೋಡಬೇಕೆಂಬುದು ಅದರಲ್ಲೂ ಮಕ್ಕಳು ನೋಡಬೇಕೆಂಬುದು, ಈ ಸಲುವಾಗಿ ನಾನು ಹಾಗೂ ಚಿತ್ರ ತಂಡ ಎಲ್ಲರೊಡನೆ ಚರ್ಚಿಸಿ ವಿತರಕರ ಹಾಗೂ ಪ್ರದರ್ಶಕರ ಸಹಕಾರದೊಂದಿಗೆ ನಮ್ಮ ಚಿತ್ರ ಗಂಧದಗುಡಿ ಯನ್ನು 07-11-2022 ಸೋಮವಾರದಿಂದ 10-11-2022 ಗುರುವಾರದವರೆಗೂ Single Screens ಥೀಯೇಟರ್ ಗಳಲ್ಲಿ 56/- ರೂ.ಗಳಿಗೆ ಹಾಗೂ Mulitiplex ಗಳಲ್ಲಿ 112/- ರೂ ಗಳಿಗೆ ಕರ್ನಾಟಕ ರಾಜ್ಯಾದ್ಯಂತ ದಿನದ ಎಲ್ಲಾ ಆಟಗಳು ಪ್ರದರ್ಶನ ಮಾಡಬೇಕೆಂದು ನಿರ್ಧಾರ ಮಾಡಿದ್ದೇವೆ.ನಮ್ಮ ಮಕ್ಕಳ ನಾಳೆಗಳಿಗಾಗಿ ಕಾಡನ್ನು ಸಂರಕ್ಷಿಸೋಣ, ಗಂಧದಗುಡಿ ಯನ್ನು ತೋರಿಸೋಣ.” ಎಂದು ಅವರು ಬರೆದುಕೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

 

 

Read More