Home> Entertainment
Advertisement

ಬಹು ನಿರೀಕ್ಷಿತ "ಜವಾನ್" ಚಿತ್ರದ ವಿಲನ್ ಪೋಸ್ಟರ್ ಬಿಡುಗಡೆ

ಇದುವರೆಗೂ ದಕ್ಷಿಣ ಭಾರತದ ಚಿತ್ರಗಳಲ್ಲಿ ತಮ್ಮ ಅದ್ಭುತ ಅಭಿನಯ ಮತ್ತು ವೈವಿಧ್ಯಮಯ ಪಾತ್ರಗಳಿಂದ ಎಲ್ಲರ ಮನಸ್ಸನ್ನು ಸೂರೆಗೊಂಡಿದ್ದ ವಿಜಯ್ ಸೇತುಪತಿ, ಈಗ ಮೊದಲ ಬಾರಿಗೆ ಶಾರುಖ್ ಖಾನ್ ಎದುರು ಖಳನಟನಾಗಿ ಅಬ್ಬರಿಸಲಿದ್ದಾರೆ. 

ಬಹು ನಿರೀಕ್ಷಿತ

ಶಾರುಖ್ ಖಾನ್ ಅಭಿನಯದ ಹೊಸ ಚಿತ್ರ ‘ಜವಾನ್’ ಬಗ್ಗೆ ದಿನದಿಂದ ದಿನಕ್ಕೆ ನಿರೀಕ್ಷೆ ಹೆಚ್ಚಾಗುತ್ತಿದೆ. ಅದಕ್ಕೆ ಸರಿಯಾಗಿ ಇಂದು ಚಿತ್ರದಲ್ಲಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ವಿಜಯ್ ಸೇತುಪತಿ ಅವರ ಫಸ್ಟ್ ಲುಕ್ ಅನ್ನು ಶಾರುಖ್ ಖಾನ್ ಬಿಡುಗಡೆ ಮಾಡಿದ್ದಾರೆ.

ವಿಜಯ್ ಸೇತುಪತಿ ಅವರನ್ನು ಚಿತ್ರದಲ್ಲಿ ‘ಸಾವಿನ ವ್ಯಾಪಾರಿ’ ಎಂದು ಶಾರುಖ್ ಬಣ್ಣಿಸಿದ್ದು, ಈ ಚಿತ್ರದಲ್ಲಿ ಅವರೊಂದಿಗೆ ಮೊದಲ ಬಾರಿಗೆ ಮುಖಾಮುಖಿಯಾಗಲಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ‘ಜವಾನ್’ ಚಿತ್ರದ ಪ್ರಿವ್ಯೂನಲ್ಲಿ ವಿಜಯ್ ಸೇತುಪತಿ ಅವರ ಝಲಕ್ ನೋಡುವುದಕ್ಕೆ ಸಿಕ್ಕಿತ್ತು. ಈಗ ಅವರ ಪಾತ್ರವನ್ನು ಹೊಸ ಪೋಸ್ಟರ್ ಮೂಲಕ ಪರಿಚಯಿಸಿದ್ದಾರೆ ಶಾರುಖ್ ಖಾನ್. 

ಇದನ್ನೂ ಓದಿ- ಆಕೆ ಬಿರುಗಾಳಿಗೂ ಮುಂಚೆ ಬರುವ ಗುಡುಗು: 'ಜವಾನ್' ಚಿತ್ರದ ನಯನತಾರಾ ಪೋಸ್ಟರ್ ಬಿಡುಗಡೆ ಬಳಿಕ ಶಾರುಖ್

ಇದುವರೆಗೂ ದಕ್ಷಿಣ ಭಾರತದ ಚಿತ್ರಗಳಲ್ಲಿ ತಮ್ಮ ಅದ್ಭುತ ಅಭಿನಯ ಮತ್ತು ವೈವಿಧ್ಯಮಯ ಪಾತ್ರಗಳಿಂದ ಎಲ್ಲರ ಮನಸ್ಸನ್ನು ಸೂರೆಗೊಂಡಿದ್ದ ವಿಜಯ್ ಸೇತುಪತಿ, ಈಗ ಮೊದಲ ಬಾರಿಗೆ ಶಾರುಖ್ ಖಾನ್ ಎದುರು ಖಳನಟನಾಗಿ ಅಬ್ಬರಿಸಲಿದ್ದಾರೆ. 

ಇದನ್ನೂ ಓದಿ- ಆಲಿಯಾ - ರಣಬಿರ್‌ ವಿಚ್ಛೇದನ? ಕಂಗನಾ ನಂತರ, ನೀತು ಕಪೂರ್ ಪೋಸ್ಟ್ ಹೆಚ್ಚಿಸಿತು ಆತಂಕ!

ಪ್ರತಿ ಹೊಸ ಪೋಸ್ಟರ್ ಮೂಲಕವೂ ‘ಜವಾನ್’ ಚಿತ್ರದ ಮೇಲಿನ ಪ್ರೇಕ್ಷಕರ ನಿರೀಕ್ಷೆಗಳು ಹೆಚ್ಚಾಗುತ್ತಲೇ ಇದೆ. ಮೊದಲು ಶಾರುಖ್ ಖಾನ್ ಅವರ ಬಾಲ್ಡ್ ಲುಕ್, ನಂತರ ನಯನತಾರಾ ಅವರ ಸಾಹಸಮಯ ಅವತಾರ, ಈಗ ವಿಜಯ್ ಸೇತುಪತಿ ಅವರ ಪಾತ್ರದ ಪರಿಚಯ … ಇದೆಲ್ಲದರಿಂದ ಜವಾನ್ ಈ ವರ್ಷದ ಅತೀ ನಿರೀಕ್ಷಿತ ಚಿತ್ರವಾಗಿದೆ.

‘ಜವಾನ್’ ಚಿತ್ರವನ್ನು ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಗೌರಿ ಖಾನ್ ನಿರ್ಮಿಸಿದರೆ, ಗೌರವ ವರ್ಮ ಸಹನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಈ ಚಿತ್ರವು ಸೆಪ್ಟೆಂಬರ್ 07ರಂದು ಜಗತ್ತಿನಾದ್ಯಂತ ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More