Home> Entertainment
Advertisement

"ನಿರ್ಮುಕ್ತ" ಹಾಡು ಲೋಕಾರ್ಪಣೆ ಮಾಡಿದ ಸುಮಲತಾ ಅಂಬರೀಶ್

ಇತ್ತೀಚೆಗೆ ಈ ಚಿತ್ರದ ಟೀಸರ್ ಹಾಗೂ ಹಾಡೊಂದರ ಬಿಡುಗಡೆ ಸಮಾರಂಭ ನೆರವೇರಿತು. ಸಂಸದೆ ಸುಮಲತಾ ಅಂಬರೀಶ್, ಅಭಿಷೇಕ್ ಅಂಬರೀಶ್ ಹಾಗೂ ರಾಕ್ ಲೈನ್ ವೆಂಕಟೇಶ್ ಅತಿಥಿಗಳಾಗಿ ಆಗಮಿಸಿ ಶುಭ ಕೋರಿದರು.
 

ಕನ್ನಡ ಚಿತ್ರರಂಗದಲ್ಲಿ ಈಗ ಉತ್ತಮ ಬೆಳವಣಿಗೆ ಆಗುತ್ತಿದೆ. ಕೇವಲ ಬೆರಳೆಣಿಕೆಯಷ್ಟಿದ್ದ ನಿರ್ದೇಶಕಿಯರ ಸಂಖ್ಯೆ ಈಗ ಹೆಚ್ಚುತ್ತಿದೆ.  ಸಾಕಷ್ಟು ಜನ ಮಹಿಳೆಯರು ನಿರ್ದೇಶನದತ್ತ ಒಲವು ತೋರುತ್ತಿದ್ದಾರೆ. "ನಿರ್ಮುಕ್ತ" ಚಿತ್ರವನ್ನು ಸಹ ರಮ್ಯ ಶ್ರೀನಿವಾಸ್ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಸಹ ಇವರೇ ಬರೆದಿದ್ದಾರೆ. ಅಷ್ಟೇ ಅಲ್ಲದೆ ರೂಪ ಸ್ವಾಮಿ ಅವರೊಡಗೂಡಿ ನಿರ್ಮಾಣವನ್ನೂ ಮಾಡಿದ್ದಾರೆ. 

ಇದನ್ನು ಓದಿ: Viral News: 30 ವರ್ಷದ ಯುವಕ 47 ಮಕ್ಕಳ ತಂದೆ, ಮದುವೆ ಆಗಲು ಒಪ್ಪದ ಯುವತಿಯರು!

ಇತ್ತೀಚೆಗೆ ಈ ಚಿತ್ರದ ಟೀಸರ್ ಹಾಗೂ ಹಾಡೊಂದರ ಬಿಡುಗಡೆ ಸಮಾರಂಭ ನೆರವೇರಿತು. ಸಂಸದೆ ಸುಮಲತಾ ಅಂಬರೀಶ್, ಅಭಿಷೇಕ್ ಅಂಬರೀಶ್ ಹಾಗೂ ರಾಕ್ ಲೈನ್ ವೆಂಕಟೇಶ್ ಅತಿಥಿಗಳಾಗಿ ಆಗಮಿಸಿ ಶುಭ ಕೋರಿದರು.

ಈ ಚಿತ್ರದ ನಾಯಕನ‌ ಹೆಸರು ಕೂಡ ಅಭಿಷೇಕ್. ಇವರು ರೆಬಲ್ ಸ್ಟಾರ್ ಅಂಬರೀಶ್ ಅವರ ತಂಗಿ ರಂಜನಿ ಅವರ ಪುತ್ರ. ನವ್ಯ ಪೂಜಾರಿ ಈ ಚಿತ್ರದ ನಾಯಕಿ.

"ಇದು ನಮ್ಮ ಕುಟುಂಬದ ಸಮಾರಂಭ. ಏನು ಮಾತನಾಡಬೇಕೋ ತಿಳಿಯುತ್ತಿಲ್ಲ. ಅಂಬರೀಶ್ ಅವರ ತಾತ ಚೌಡಯ್ಯ ಅವರು ಸಂಗೀತ ಕ್ಷೇತ್ರದಲ್ಲಿ ಅವರದೇ ಆದ ಹೆಸರು ಮಾಡಿದ್ದಾರೆ. ನಂತರ ಅಂಬರೀಶ್ ಸಿನಿಮಾದಲ್ಲಿ ಹೆಸರು ಮಾಡಿದರು. ನಂತರ ನಮ್ಮ ಅಭಿಷೇಕ್. ಈಗ ಈ ಅಭಿಷೇಕ್. ಸಂತೋಷವಾಗುತ್ತಿದೆ ಎಲ್ಲರನ್ನು ನೋಡಿ. ಅಭಿಷೇಕ್ ಸಿ.ಕೆ ಸಹ ಚಿತ್ರರಂಗದಲ್ಲಿ ಒಳ್ಳೆಯ ಹೆಸರು ಮಾಡಲಿ" ಎಂದು ಸುಮಲತಾ ಅಂಬರೀಶ್ ಶುಭ ಹಾರೈಸಿದರು.

"ಟೀಸರ್ ನೋಡಿದೆ. ಚೆನ್ನಾಗಿದೆ. ಅಭಿಷೇಕ್ ಸಿಕೆ ನನ್ನ ಬ್ರದರ್. ಅವರಿಗೆ ಶುಭವಾಗಲಿ" ಎಂದು ಅಭಿಷೇಕ್ ಅಂಬರೀಶ್ ಹಾರೈಸಿದರು. ಚಿತ್ರತಂಡಕ್ಕೆ ಶುಭಕೋರಿದ ರಾಕ್ ಲೈನ್ ವೆಂಕಟೇಶ್, ಅಂಬರೀಶ್ ಅವರನ್ನು ನೆನೆದು ಭಾವುಕರಾದರು. ವೈದ್ಯರಾಗಿರುವ ಡಾ. ರೂಪಸ್ವಾಮಿ ನಿರ್ಮಾಣದ ಬಗ್ಗೆ ಮಾತನಾಡಿ, ಇಡೀ ತಂಡಕ್ಕೆ ಧನ್ಯವಾದ ತಿಳಿಸಿದರು. 

ಇದನ್ನು ಓದಿ: PHOTOS: ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣರಿಗೆ ಜನ್ಮದಿನದ ಶುಭ ಕೋರಿದ ಡಿಕೆಶಿ

ಇದೊಂದು ಮೆಡಿಕಲ್ ಕಾಲೇಜ್‌ನಲ್ಲಿ ನಡೆಯುವ ಕಥೆ. ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಹೊಂದಿದೆ. ನಾನು ನಿರ್ದೇಶನ ಮಾಡಲು ಸಹಕಾರ ನೀಡಿದವರು ನನ್ನ ಪತಿ ಶ್ರೀನಿವಾಸ್. ಬಂದಿರುವ ಗಣ್ಯರಿಗೆ, ಇಡೀ ತಂಡಕ್ಕೆ ಧನ್ಯವಾದ ಎಂದರು ನಿರ್ದೇಶಕಿ ರಮ್ಯ ಶ್ರೀನಿವಾಸ್. ಹಾಡು ಬರೆದಿರುವ ಸ್ವಾಮಿ ಹಾಗೂ ಸಂಗೀತ ನೀಡಿರುವ ಸಾಮ್ರಾಟ್ "ನಿರ್ಮುಕ್ತ" ಚತ್ರದ ಬಗ್ಗೆ ಮಾತನಾಡಿದರು. 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Read More