Home> Entertainment
Advertisement

ಜನವರಿ 12 ರಂದು ಬಿಡುಗಡೆಯಾಗಲಿದೆ ಬಹುನಿರೀಕ್ಷಿತ "BAD" ಚಿತ್ರದ ಟ್ರೇಲರ್ 

ಪಿ.ಸಿ.ಶೇಖರ್ ನಿರ್ದೇಶನದ ಎಸ್ ಆರ್ ವೆಂಕಟೇಶ್ ಗೌಡ ನಿರ್ಮಿಸಿರುವ ಹಾಗೂ ನಕುಲ್ ಗೌಡ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ "BAD" ಚಿತ್ರದ ಟ್ರೇಲರ್ ಜನವರಿ 12 ರಂದು ಜೆಂಕಾರ್‌ ಮ್ಯೂಸಿಕ್ ಮೂಲಕ ಬಿಡುಗಡೆಯಾಗಲಿದೆ.

 ಜನವರಿ 12 ರಂದು ಬಿಡುಗಡೆಯಾಗಲಿದೆ ಬಹುನಿರೀಕ್ಷಿತ

ಬೆಂಗಳೂರು: ಪಿ.ಸಿ.ಶೇಖರ್ ನಿರ್ದೇಶನದ ಎಸ್ ಆರ್ ವೆಂಕಟೇಶ್ ಗೌಡ ನಿರ್ಮಿಸಿರುವ ಹಾಗೂ ನಕುಲ್ ಗೌಡ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ "BAD" ಚಿತ್ರದ ಟ್ರೇಲರ್ ಜನವರಿ 12 ರಂದು ಜೆಂಕಾರ್‌ ಮ್ಯೂಸಿಕ್ ಮೂಲಕ ಬಿಡುಗಡೆಯಾಗಲಿದೆ.

ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಈ ಚಿತ್ರದ ಟ್ರೇಲರ್ ನಲ್ಲಿ ಏನೆಲ್ಲಾ ಇರಬಹುದು? ಎಂಬದನ್ನು ತಿಳಿಸಲು ಚಿತ್ರತಂಡ ಪ್ರೋಮೊ ಬಿಡುಗಡೆ ಮಾಡಿದೆ. ಈ ಪ್ರೋಮೊದಲ್ಲಿ ನಿರ್ದೇಶಕರಾದ ಪಿ.ಸಿ.ಶೇಖರ್ ಹಾಗೂ ನಾಯಕರಾದ ನಕುಲ್ ಗೌಡ ಸುಂದರವಾದ ನಿರೂಪಣೆಯಲ್ಲಿ "BAD" ಚಿತ್ರದ ಟ್ರೇಲರ್ ನ ವೈಶಿಷ್ಟ್ಯತೆ  ಹಾಗು ತಾಂತ್ರಿಕ ವಿಭಿನ್ನತೆಯ ಮಾಹಿತಿ ನೀಡಿದ್ದಾರೆ‌.

ಇದನ್ನೂ ಓದಿ- ಶೌಚಾಲಯವನ್ನು ಮಕ್ಕಳೇ ಸ್ವಚ್ಚಗೊಳಿಸಿದರೆ ತಪ್ಪಿಲ್ಲ, ಇದು ಶಿಕ್ಷಣದ ಒಂದು ಭಾಗ : ಯುಟಿ ಖಾದರ್

ಈ ಪ್ರೋಮೊ ನೋಡಿದ ಮೇಲೆ ಚಿತ್ರದ ಬಗ್ಗೆ ಹಾಗೂ ಬಿಡುಗಡೆಯಾಗಲಿರುವ ಟ್ರೇಲರ್ ಬಗ್ಗೆ ಮತ್ತಷ್ಟು ನಿರೀಕ್ಷೆ ಹೆಚ್ಚಿಸಿದೆ.ಅರ್ಜುನ್ ಜನ್ಯ ಸಂಗೀತ ನಿರ್ದೇಶನವಿರುವ "BAD" ಚಿತ್ರಕ್ಕೆ ಪಿ.ಸಿ.ಶೇಖರ್ ಸಂಕಲನ,  ಜಿ.ರಾಜಶೇಖರ್ ಕಲಾ ನಿರ್ದೇಶನ ಹಾಗೂ ಶಕ್ತಿ ಶೇಖರ್ ಛಾಯಾಗ್ರಹಣವಿದೆ‌.ಈ ಚಿತ್ರಕ್ಕೆ ಸಚಿನ್ ಬಿ ಹೊಳಗುಂಡಿ ಸಂಭಾಷಣೆ ಬರೆದಿದ್ದಾರೆ."ಪ್ರೀತಿಯ ರಾಯಭಾರಿ" ಚಿತ್ರದ ಮೂಲಕ ಜನರ ಮನಗೆದ್ದಿರುವ ನಕುಲ್ ಗೌಡ  "BAD" ಚಿತ್ರದ ನಾಯಕನಾಗಿ ಕಾಣಿಸಿಕೊಂಡಿದ್ದು, ಮಾನ್ವಿತ ಹರೀಶ್, ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್ , ಅಶ್ವಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ- ಆರ್‌ಸೆಟಿ ಸಂಸ್ಥೆಯಿಂದ ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ

ಕಾಮ, ಕ್ರೋಧ ಮೊದಲಾದ ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರು ಪಾತ್ರಗಳಲ್ಲಿ ಆರು ಜನ ಕಲಾವಿದರು ಅಭಿನಯಿಸಿರುವುದು ಈ ಚಿತ್ರದ ವಿಶೇಷ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Read More