Home> India
Advertisement

ಪಶ್ಚಿಮ ಬಂಗಾಳದಲ್ಲಿ ಮತ್ತೆ ಹಿಂಸಾಚಾರ; ಓರ್ವ ಸಾವು

ಮೃತ ವ್ಯಕ್ತಿಯನ್ನು ರಂಬಾಬು ಶಾ ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಮತ್ತೆ ಹಿಂಸಾಚಾರ; ಓರ್ವ ಸಾವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಭಾತ್‌ಪಾರ ಪ್ರದೇಶದಲ್ಲಿ ಗುರುವಾರ ಎರಡು ಗುಂಪುಗಳ ನಡುವೆ ನಡೆದ ಗಲಭೆಯಲ್ಲಿ ಓರ್ವ ವ್ಯಕ್ತಿಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ವ್ಯಕ್ತಿಯನ್ನು ರಂಬಾಬು ಶಾ ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಬಗ್ಗೆ ಹೆಚ್ಚಿನ ವಿವರಗಳು ಇನ್ನೂ ಲಭ್ಯವಾಗಿಲ್ಲ ಎಂದು ಅವರು ಹೇಳಿದ್ದಾರೆ.

ವರದಿಗಳ ಪ್ರಕಾರ, ನೂತನವಾಗಿ ನಿರ್ಮಿಸಲಾದ ಪೊಲೀಸ್ ಠಾಣೆಯ ಬಳಿ ಎರಡು ಗುಂಪುಗಳು ಕಚ್ಚಾ ಬಾಂಬ್‌ಗಳನ್ನು ಎಸೆದಿದ್ದು, ಗುಂಡಿನ ಕಾಳಗವನ್ನೂ ನಡೆಸಿದ ಪರಿಣಾಮ ಈ ದುರ್ಘಟನೆ ನಡೆದಿದೆ.

ಘಟನಾ ಸ್ಥಳದಲ್ಲಿ ಹೆಚ್ಚುವರಿ ಆರ್ ಪಿಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಅಂಗಡಿಗಳು, ಮಾರುಕಟ್ಟೆ ಸ್ಥಳಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.

Read More