Home> India
Advertisement

Venkaiah Naidu: ಎಂ.ವೆಂಕಯ್ಯ ನಾಯ್ಡು ಮುಂದಿನ ರಾಷ್ಟ್ರಪತಿ..?

ರಾಜನಾಥ್ ಸಿಂಗ್ ಮತ್ತು ಜೆ.ಪಿ.ನಡ್ಡಾ ಅವರು ರಾಷ್ಟ್ರಪತಿ ಚುನಾವಣೆಯ ಕುರಿತು ವಿರೋಧ ಪಕ್ಷಗಳು ಸೇರಿದಂತೆ ವಿವಿಧ ಪಕ್ಷಗಳೊಂದಿಗೆ ಮಾತನಾಡಲು ಪಕ್ಷದಿಂದ ಅಧಿಕಾರ ಪಡೆದಿದ್ದಾರೆ.

Venkaiah Naidu: ಎಂ.ವೆಂಕಯ್ಯ ನಾಯ್ಡು ಮುಂದಿನ ರಾಷ್ಟ್ರಪತಿ..?

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ನಿರ್ಣಾಯಕ ಪಕ್ಷದ ಸಭೆಗೂ ಮುನ್ನವೇ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಸಚಿವರಾದ ಅಮಿತ್‌ ಶಾ, ರಾಜನಾಥ್ ಸಿಂಗ್‌ ಮಂಗಳವಾರ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾಗಿದ್ದಾರೆ. ಹೀಗಾಗಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರೇ ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಯ ಮೈತ್ರಿಕೂಟದ ಅಭ್ಯರ್ಥಿಯಾಗಲಿದ್ದಾರೆಯೇ ಅನ್ನೋ ಮಾತುಗಳ ಕೇಳಿಬರುತ್ತಿವೆ.

ರಾಜನಾಥ್ ಸಿಂಗ್ ಮತ್ತು ಜೆ.ಪಿ.ನಡ್ಡಾ ಅವರು ರಾಷ್ಟ್ರಪತಿ ಚುನಾವಣೆಯ ಕುರಿತು ವಿರೋಧ ಪಕ್ಷಗಳು ಸೇರಿದಂತೆ ವಿವಿಧ ಪಕ್ಷಗಳೊಂದಿಗೆ ಮಾತನಾಡಲು ಪಕ್ಷದಿಂದ ಅಧಿಕಾರ ಪಡೆದಿದ್ದಾರೆ.

ಇದನ್ನೂ ಓದಿ: International Yoga Day 2022: ಸಾಂಸ್ಕೃತಿಕ ನಗರಿಯಲ್ಲಿ ಪ್ರಧಾನಿ ಮೋದಿ ಯೋಗ!

ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಚುನಾವಣೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಇಂದು(ಜೂನ್ 21) ಸಂಸದೀಯ ಪಕ್ಷದ ಸಭೆ ನಡೆಯಲಿದೆ. ಪ್ರಧಾನಿ ಮೋದಿ ಕೂಡ ವರ್ಚುವಲ್‌ ಆಗಿ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಇದಕ್ಕೂ ಮುನ್ನವೇ ಬಿಜೆಪಿ ನಾಯಕರು ವೆಂಕಯ್ಯ ನಾಯ್ಡು ಭೇಟಿಯಾಗಿರುವುದು ಮಹತ್ವ ಪಡೆದುಕೊಂಡಿದೆ.

ಚುನಾವಣೆ ಸಂಬಂಧ ಪಕ್ಷದ ಕಾರ್ಯತಂತ್ರದ ಕುರಿತು ಚರ್ಚಿಸಲು ಜೆ.ಪಿ.ನಡ್ಡಾ ಪಕ್ಷದ 14 ಸದಸ್ಯರನ್ನೊಳಗೊಂಡ ಉಸ್ತುವಾರಿ ಸಮಿತಿಯೊಂದಿಗೆ ಸೋಮವಾರ ಮಹತ್ವದ ಸಭೆ ನಡೆಸಿದ್ದರು.

ಇದನ್ನೂ ಓದಿ: Viral Video: ಭಾರೀ ಮಳೆ ಗಾಳಿ ಮಧ್ಯೆ ಪತ್ನಿ ಸಮೇತ ನಾಲೆಗೆ ಬಿದ್ದ ಪೋಲೀಸಪ್ಪ ..!

ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ಎಲೆಕ್ಟೋರಲ್ ಕಾಲೇಜಿನಲ್ಲಿ ಆಡಳಿತ ಪಕ್ಷವು ಶೇ.48ಕ್ಕಿಂತ ಹೆಚ್ಚು ಮತಗಳನ್ನು ಹೊಂದಿದೆ. NDA ಅಭ್ಯರ್ಥಿಯು ವಿರೋಧಕ್ಕಿಂತ ಸ್ಪಷ್ಟವಾದ ಪ್ರಯೋಜನವನ್ನು ಹೊಂದಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More