Home> India
Advertisement

Bus Accident: 50 ಅಡಿ ಕಂದಕಕ್ಕೆ ಉರುಳಿದ ಬಸ್: 15 ಜನ ಸಾವು, 10 ಮಂದಿ ನಾಪತ್ತೆ

Chhattisgarh Durg Bus Accident: ಛತ್ತೀಸ್‌ಗಢದ ದುರ್ಗ್ ಜಿಲ್ಲೆಯ ಕುಮ್ಹಾರಿ ಪ್ರದೇಶದಲ್ಲಿ ಮಂಗಳವಾರ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದಿದೆ. 

Bus Accident: 50 ಅಡಿ ಕಂದಕಕ್ಕೆ ಉರುಳಿದ ಬಸ್: 15 ಜನ ಸಾವು, 10 ಮಂದಿ ನಾಪತ್ತೆ

Chhattisgarh Durg Bus Accident: ಛತ್ತೀಸ್‌ಗಢದ ದುರ್ಗ್ ಜಿಲ್ಲೆಯ ಕುಮ್ಹಾರಿ ಪ್ರದೇಶದಲ್ಲಿ ಮಂಗಳವಾರ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದಿದೆ. ಇದರ ಪರಿಣಾಮ ಖಾಸಗಿ ಕಂಪನಿಯೊಂದರ ಸುಮಾರು 15 ಉದ್ಯೋಗಿಗಳು ಸಾವನ್ನಪ್ಪಿದ್ದಾರೆ ಮತ್ತು 10 ಮಂದಿ ಗಾಯಗೊಂಡಿದ್ದಾರೆ. ಮಂಗಳವಾರ ರಾತ್ರಿ ಮಣ್ಣಿನ ಗುಂಡಿಗೆ ಬಸ್ ಬಿದ್ದಿದೆ.

ಕೂಲಿಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ರಾತ್ರಿ 8.30 ರ ಸುಮಾರಿಗೆ ಕುಮ್ಹಾರಿ ಬಳಿ ಹಳ್ಳಕ್ಕೆ ಬಿದ್ದಿತು. ಸುಮಾರು 15 ಜನರು ಸಾವನ್ನಪ್ಪಿದ್ದು, 10 ಜನರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ರಾಯ್‌ಪುರದ ಏಮ್ಸ್‌ಗೆ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Gruha Lakshmi Scheme: ಗೃಹಲಕ್ಷ್ಮೀ ಹಣ ಕೂಡಿಟ್ಟು ಫ್ರಿಡ್ಜ್ ಖರೀದಿಸಿದ ಮಹಿಳೆ..! 

ಅಪಘಾತದ ಬಗ್ಗೆ ಸ್ಥಳೀಯ ಆಡಳಿತ ತನಿಖೆ ಆರಂಭಿಸಿದೆ. ಛತ್ತೀಸ್‌ಗಢ ಮುಖ್ಯಮಂತ್ರಿ ಅವರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ದುರ್ಗದ ಕುಮ್ಹಾರಿ ಬಳಿ ಖಾಸಗಿ ಕಂಪನಿಯೊಂದರ ನೌಕರರು ತುಂಬಿದ್ದ ಬಸ್ ಅಪಘಾತಕ್ಕೀಡಾದ ಸುದ್ದಿಯಿಂದ ನನಗೆ ಬೇಸರವಾಗಿದೆ ಎಂದು ಬರೆದುಕೊಂಡಿದ್ದಾರೆ. ಮೃತರ ಆತ್ಮಕ್ಕೆ ಚಿರಶಾಂತಿ ನೀಡಲೆಂದು ಹಾಗೂ ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಗಾಯಗೊಂಡಿರುವ ನೌಕರರಿಗೆ ಚಿಕಿತ್ಸೆ ನೀಡಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ, ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಪೋಸ್ಟ್‌ ಮಾಡಿದ್ದಾರೆ.

ಈ ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ. ಛತ್ತೀಸ್‌ಗಢದ ದುರ್ಗ್‌ನಲ್ಲಿ ಸಂಭವಿಸಿದ ಬಸ್ ಅಪಘಾತವು ಅತ್ಯಂತ ದುಃಖಕರವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲು ನಾನು ಬಯಸುತ್ತೇನೆ ಎಂದಿದ್ದಾರೆ. 

ಇದನ್ನೂ ಓದಿ: ಅನುದಾನ ಹಂಚಿಕೆ ಒಂದೇ ವೇದಿಕೆಯಲ್ಲಿ ಚರ್ಚೆಗೆ ನಾವು ರೆಡಿ: ಸಚಿವ ಪ್ರಹ್ಲಾದ ಜೋಶಿ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Read More