Home> India
Advertisement

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗೆ ಕೊರೊನಾ ದೃಢ, ಕಟೀಲ್ ಎರಡನೇ ಬಾರಿಗೆ ಕೊವಿಡ್ ಪಾಸಿಟಿವ್

Corona:ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಕೊರೊನಾ ಸೋಂಕು ತಗುಲಿದೆ. ಅಲ್ಲದೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಎರಡನೇ ಬಾರಿಗೆ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗೆ ಕೊರೊನಾ ದೃಢ, ಕಟೀಲ್ ಎರಡನೇ ಬಾರಿಗೆ ಕೊವಿಡ್ ಪಾಸಿಟಿವ್

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಕೊರೊನಾ ಸೋಂಕು (Rajanath Singh Tested Positive for Corona) ತಗುಲಿದೆ. ಮನೆಯಲ್ಲಿ ತಮ್ಮನ್ನು ತಾವು ಪ್ರತ್ಯೇಕಿಸಿಕೊಂಡಿದ್ದಾರೆ. ಅವರು "ಸೌಮ್ಯ ರೋಗಲಕ್ಷಣಗಳನ್ನು" ಹೊಂದಿದ್ದಾರೆ ಎಂದು ತಿಳಿದುಬಂದಿದೆ.

"ನಾನು ಇಂದು ಸೌಮ್ಯ ರೋಗಲಕ್ಷಣಗಳೊಂದಿಗೆ ಕೊರೊನಾಗೆ ಧನಾತ್ಮಕ ಪರೀಕ್ಷೆ ಮಾಡಿದ್ದೇನೆ. ನಾನು ಹೋಮ್ ಕ್ವಾರಂಟೈನ್‌ನಲ್ಲಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರೂ ತಮ್ಮನ್ನು ಪ್ರತ್ಯೇಕಿಸಲು ಮತ್ತು ಕೊರೊನಾ ಪರಿಕ್ಷೆ ಮಾಡಿಸಿಕೊಳ್ಳಲು ನಾನು ವಿನಂತಿಸುತ್ತೇನೆ" ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ (Defence Minister Rajanath Singh) ಟ್ವೀಟ್ ಮಾಡಿದ್ದಾರೆ.

 

 

ನಳಿನ್ ಕುಮಾರ್ ಕಟೀಲ್​ಗೆ ಎರಡನೇ ಬಾರಿಗೆ ಕೊರೊನಾ:

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರಿಗೆ ಎರಡನೇ ಬಾರಿಗೆ ಕೊರೊನಾ ಸೋಂಕು ತಗುಲಿದೆ. ಈ ಬಗ್ಗೆ ಟ್ವೀಟ್ ಮಾಡಿರುವ  ಕಟೀಲ್ ಅವರು, "ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೇ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ (Corona Positive) ಮಾಡಿಸಿಕೊಳ್ಳಿ" ಎಂದಿದ್ದಾರೆ.  ನಳಿನ್ ಕುಮಾರ್ ಕಟೀಲ್ ಅವರಿಗೆ ಮೊದಲನೆ ಅಲೆಯ ಸಂದರ್ಭದಲ್ಲೂ ಕೋವಿಡ್ ಸೋಂಕು ತಗುಲಿತ್ತು.

 

 

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,79,723 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿ ಪಾಸಿಟಿವ್​ ದರ ಶೇ. 13.29ಕ್ಕೆ ಏರಿದೆ. 

ಇದನ್ನೂ ಓದಿ: ನನ್ನನ್ನು ಅವಮಾನಿಸಲು ಹಲವು ಪ್ರಯತ್ನಗಳು ನಡೆದಿವೆ: ನಟಿ ಭಾವನಾ ಮೆನನ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ. 

Read More