Home> India
Advertisement

Farmers call off protest : ದೆಹಲಿಯಲ್ಲಿ ನಡೆಸುತ್ತಿದ್ದ ಪ್ರತಿಭಟನೆ ಕೈಬಿಟ್ಟ ರೈತರು!

ಸಂಯುಕ್ತ ಕಿಸಾನ್ ಮೋರ್ಚಾ ಸಿಂಘು ಗಡಿಯಿಂದ ಇದನ್ನು ಘೋಷಿಸಿತು.

Farmers call off protest : ದೆಹಲಿಯಲ್ಲಿ ನಡೆಸುತ್ತಿದ್ದ ಪ್ರತಿಭಟನೆ ಕೈಬಿಟ್ಟ ರೈತರು!

ದೆಹಲಿ : ಕೇಂದ್ರವು ಗುರುವಾರ ಬೇಡಿಕೆಯಂತೆ ಪರಿಷ್ಕೃತ ಪ್ರಸ್ತಾವನೆಯನ್ನು ಹಸ್ತಾಂತರಿಸಿದ ನಂತರ ರೈತ ಸಂಘಟನೆಗಳು ತಮ್ಮ ಒಂದು ವರ್ಷದಿಂದ ನಡೆಸುತ್ತಿದ್ದ ಪ್ರತಿಭಟನೆಯನ್ನು ಕೈಬಿಟ್ಟಿವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಗುರುವಾರ (ಡಿಸೆಂಬರ್ 9) ಘೋಷಿಸಿತು.

ಸಂಯುಕ್ತ ಕಿಸಾನ್ ಮೋರ್ಚಾ(Samyukta Kisan Morcha) ಸಿಂಘು ಗಡಿಯಿಂದ ಇದನ್ನು ಘೋಷಿಸಿತು.

ಶನಿವಾರ ದೆಹಲಿ ಗಡಿಯನ್ನು ಖಾಲಿ ಮಾಡುವುದಾಗಿ ಮತ್ತು ಜನವರಿ 15 ರಂದು ಸಭೆ ನಡೆಸುವುದಾಗಿ ರೈತರು ಹೇಳಿದ್ದಾರೆ.

ಇದನ್ನೂ ಓದಿ : Investment Idea : ಸರ್ಕಾರದ ಈ ಯೋಜನೆಗಳಲ್ಲಿ ಹೂಡಿಕೆ ಮಾಡಿ, ಡಬಲ್ ಲಾಭ ಪಡೆಯಿರಿ

"ನಾವು ನಮ್ಮ ಮನೆಗಳಿಗೆ ಹೊರಡಲು ತಯಾರಿ ನಡೆಸುತ್ತಿದ್ದೇವೆ, ಆದರೆ ಅಂತಿಮ ನಿರ್ಧಾರವನ್ನು ಸಂಯುಕ್ತ ಕಿಸಾನ್ ಮೋರ್ಚಾ(Samyukta Kisan Morcha) ತೆಗೆದುಕೊಳ್ಳುತ್ತದೆ" ಎಂದು ರೈತರೊಬ್ಬರು ಹೇಳಿದರು.

ಕೇಂದ್ರದ ಪರಿಷ್ಕೃತ ಪ್ರಸ್ತಾವನೆ ಬಂದ ಕೂಡಲೇ, ರೈತಸಂಘದ ಛತ್ರಿ ಸಂಸ್ಥೆಯಾದ ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಭಟನೆಯ ನೇತೃತ್ವವನ್ನು ವಹಿಸಿಕೊಂಡಿದ್ದು, ಮುಂದಿನ ಕ್ರಮವನ್ನು ರೂಪಿಸಲು ಸಭೆಯೊಂದರಲ್ಲಿ ಕೂಡಿಕೊಂಡಿದೆ.

ಇದನ್ನೂ ಓದಿ : ಈ ದಿನಾಂಕದಂದು ಜಾರಿಯಾಗಲಿದೆ ಪಿಎಂ ಕಿಸಾನ್ ಯೋಜನೆಯ 10ನೇ ಕಂತು

ಕಾನೂನು ಹಿಂಪಡೆದ ನಂತರ, ಕೇಂದ್ರವು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು ಅದನ್ನು ರೈತರು(Farmers) ಒಪ್ಪಿಕೊಂಡಿದ್ದಾರೆ. ಅವರ ಬೇಡಿಕೆಯನ್ನು ಆಧರಿಸಿ ಕೇಂದ್ರವು ಲಿಖಿತವಾಗಿ ಹೊರತಂದಿದೆ.

ಈ ನಡುವೆ ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಟೆಂಟ್‌ ತೆಗೆಯಲು ಆರಂಭಿಸಿದ್ದಾರೆ. ಅವರು ಸಿಹಿ ವಿನಿಮಯ ಮಾಡಿಕೊಳ್ಳುವುದೂ ಕಂಡು ಬಂತು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More