Home> India
Advertisement

ಪಟಿಯಾಲದ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ

ಇಂದು ಬೆಳಿಗ್ಗೆ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪಟಿಯಾಲದ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ

ಪಟಿಯಾಲ: ಇಲ್ಲಿನ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಭಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಶನಿವಾರ ನಡೆದಿದೆ.

ಇಂದು ಬೆಳಿಗ್ಗೆ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆ ಬಗ್ಗೆ ಮಾಹಿತಿ ನೀಡಿದ ಮೇಯರ್ ಸಂಜೀವ್ ಶರ್ಮಾ, "ಅನಾಹುತ ಸಂಭವಿಸಿದ ಕೆಲವೇ ಗಂಟೆಗಳಲ್ಲಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದರೆ ಸಾಕಷ್ಟು ಆಸ್ತಿಪಾಸ್ತಿ ಹಾನಿಯಾಗಿದೆ. ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ" ಎಂದು ಹೇಳಿದ್ದಾರೆ.

ಪೋಲೀಸರು ಸ್ಥಳಕ್ಕೆ ಧಾವಿಸಿದ್ದು ತನಿಖೆ ಆರಂಭಿಸಿದ್ದಾರೆ.

Read More