Home> India
Advertisement

Delhi fire news: ಶಿಶುಪಾಲನಾ ಕೇಂದ್ರಕ್ಕೆ ಹೊತ್ತಿಕೊಂಡ ಬೆಂಕಿ, 6 ಮಕ್ಕಳು ಸಾವು

Fire Tragedy In Delhi Child Care Center: ಅಗ್ನಿಶಾಮಕ ದಳದ ಸಿಬ್ಬಂದಿ 11 ನವಜಾತ ಮಕ್ಕಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. 

Delhi fire news: ಶಿಶುಪಾಲನಾ ಕೇಂದ್ರಕ್ಕೆ ಹೊತ್ತಿಕೊಂಡ ಬೆಂಕಿ, 6 ಮಕ್ಕಳು ಸಾವು

ನವದೆಹಲಿ: ದೆಹಲಿಯ ವಿವೇಕ್ ವಿಹಾರ್‌ನಲ್ಲಿರುವ ಬೇಬಿ ಕೇರ್ ಸೆಂಟರ್‌ನಲ್ಲಿ ತಡರಾತ್ರಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಈ ಅಪಘಾತದಲ್ಲಿ 6 ಮಕ್ಕಳು ಸಾವನ್ನಪ್ಪಿದ್ದಾರೆ. 

ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದರು. ಅಗ್ನಿಶಾಮಕ ದಳದ ಸಿಬ್ಬಂದಿ 11 ನವಜಾತ ಮಕ್ಕಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಇದನ್ನೂ ಓದಿ:  Gujarat : ರಾಜ್‌ಕೋಟ್ ಗೇಮಿಂಗ್ ಝೋನ್‌ನಲ್ಲಿ ಅಗ್ನಿದುರಂತ, 20 ಸಾವು 

ಶಿಶುಪಾಲನಾ ಕೇಂದ್ರದಿಂದ 11 ನವಜಾತ ಶಿಶುಗಳನ್ನು ರಕ್ಷಿಸಲಾಗಿದೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಆರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಪೂರ್ವ ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ಶಿಶುಪಾಲನಾ ಕೇಂದ್ರದಲ್ಲಿ ರಾತ್ರಿ 11.32 ಕ್ಕೆ ಬೆಂಕಿ ಕಾಣಿಸಿಕೊಂಡಿದೆ ಎಂದು ದೆಹಲಿ ಅಗ್ನಿಶಾಮಕ ಸೇವಾ ಸಿಬ್ಬಂದಿ ತಿಳಿಸಿದ್ದಾರೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ.

ಇದನ್ನೂ ಓದಿ:  ಛತ್ತೀಸಗಡದಲ್ಲಿ ಪೋಲಿಸ್ ಎನ್ ಕೌಂಟರ್ ಗೆ 7 ನಕ್ಸಲೀಯರ ಹತ್ಯೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Read More