Home> India
Advertisement

ರಾಷ್ಟ್ರಪತಿ ಕಾಲು ಮುಟ್ಟಿ ನಮಸ್ಕರಿಸಲು ಬಂದ ಸರ್ಕಾರಿ ಅಧಿಕಾರಿ ಸಸ್ಪೆಂಡ್‌...!

ಜನವರಿ 4 ರಂದು ನಡೆದ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭದ್ರತಾ ಪ್ರೋಟೋಕಾಲ್ ಅನ್ನು ಉಲ್ಲಂಘಿಸಿ ಅವರ ಪಾದಗಳನ್ನು ಮುಟ್ಟಲು ಯತ್ನಿಸಿದ ರಾಜಸ್ಥಾನದ ಸರ್ಕಾರಿ ಇಂಜಿನಿಯರ್ ಅನ್ನು ಅಮಾನತುಗೊಳಿಸಲಾಗಿದೆ. ಗೃಹ ಸಚಿವಾಲಯದ ಮಧ್ಯಪ್ರವೇಶದ ನಂತರ ಸಾರ್ವಜನಿಕ ಆರೋಗ್ಯ ಇಂಜಿನಿಯರಿಂಗ್ ವಿಭಾಗವು ಶುಕ್ರವಾರ ಇಂಜಿನಿಯರ್ ಅನ್ನು ಅಮಾನತುಗೊಳಿಸಿ ಆದೇಶಿಸಿದೆ.

ರಾಷ್ಟ್ರಪತಿ ಕಾಲು ಮುಟ್ಟಿ ನಮಸ್ಕರಿಸಲು ಬಂದ ಸರ್ಕಾರಿ ಅಧಿಕಾರಿ ಸಸ್ಪೆಂಡ್‌...!

President Draupadi Murmu : ಜನವರಿ 4 ರಂದು ನಡೆದ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭದ್ರತಾ ಪ್ರೋಟೋಕಾಲ್ ಅನ್ನು ಉಲ್ಲಂಘಿಸಿ ಅವರ ಪಾದಗಳನ್ನು ಮುಟ್ಟಲು ಯತ್ನಿಸಿದ ರಾಜಸ್ಥಾನದ ಸರ್ಕಾರಿ ಇಂಜಿನಿಯರ್ ಅನ್ನು ಅಮಾನತುಗೊಳಿಸಲಾಗಿದೆ. ಗೃಹ ಸಚಿವಾಲಯದ ಮಧ್ಯಪ್ರವೇಶದ ನಂತರ ಸಾರ್ವಜನಿಕ ಆರೋಗ್ಯ ಇಂಜಿನಿಯರಿಂಗ್ ವಿಭಾಗವು ಶುಕ್ರವಾರ ಇಂಜಿನಿಯರ್ ಅನ್ನು ಅಮಾನತುಗೊಳಿಸಿ ಆದೇಶಿಸಿದೆ.

"ಪಿಎಚ್‌ಇಡಿಯಲ್ಲಿ ಜೂನಿಯರ್ ಇಂಜಿನಿಯರ್ ಆಗಿರುವ ಅಂಬಾ ಸಿಯೋಲ್ ಅವರು ಜನವರಿ 4 ರಂದು ರೋಹೆತ್‌ನಲ್ಲಿ ನಡೆದ ಸ್ಕೌಟ್ ಗೈಡ್ ಜಾಂಬೋರಿಯ ಉದ್ಘಾಟನಾ ಕಾರ್ಯಕ್ರಮದ ಸಂದರ್ಭದಲ್ಲಿ ರಾಷ್ಟ್ರಪತಿಗಳ ಪಾದಗಳನ್ನು ಸ್ಪರ್ಶಿಸುವ ಪ್ರಯತ್ನವನ್ನು ಮಾಡುವ ಮೂಲಕ ಶಿಷ್ಟಾಚಾರವನ್ನು ಉಲ್ಲಂಘಿಸಿದರು. ಆದ್ದರಿಂದ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಮುಖ್ಯ ಇಂಜಿನಿಯರ್ (ಆಡಳಿತ), ಪಿಹೆಚ್‌ಇಡಿ (PHED) ತಿಳಿಸಿದ್ದಾರೆ.

ಇದನ್ನೂ ಓದಿ:ಶಾಲಾ ಬಿಸಿ ಊಟದಲ್ಲಿ ಹಾವು ಪತ್ತೆ..! ಮಕ್ಕಳು ಆಸ್ಪತ್ರೆಗೆ ದಾಖಲು

ನೀರಿನ ವ್ಯವಸ್ಥೆಯನ್ನು ನೋಡಿಕೊಳ್ಳಲು ಸಿಯೋಲ್ ಸ್ಥಳದಲ್ಲಿಯೇ ಇದ್ದರು. ಆದರೆ ಭದ್ರತಾ ಗ್ರಿಡ್ ಅನ್ನು ಉಲ್ಲಂಘಿಸಿ, ರಾಷ್ಟ್ರಪತಿಯವರನ್ನು ಸ್ವಾಗತಿಸಲು ಮುಂದಾದರು. ಅಲ್ಲದೆ, ಕಾರ್ಯಕ್ರಮದಲ್ಲಿ ನಡೆಯುತ್ತಿದ್ದ ದ್ರೌಪತಿ ಮುರ್ಮು ಅವರ ಪಾದಗಳನ್ನು ಸ್ಪರ್ಶಿಸಲು ಪ್ರಯತ್ನಿಸಿದರು. ಈ ವೇಳೆ ಭದ್ರತಾ ಪಡೆ ಸಿಯೋಲ್‌ ಅವರನ್ನು ತಡೆದರು. ಸ್ಥಳೀಯ ಪೊಲೀಸರು ಔಪಚಾರಿಕ ವಿಚಾರಣೆಯ ನಂತರ ಅವರನ್ನು ಬಿಡುಗಡೆಮಾಡಿದರು. ಕೇಂದ್ರ ಗೃಹ ಸಚಿವಾಲಯವು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಭದ್ರತಾ ನಿಯಮ ಉಲ್ಲಂಘನೆ ಲೋಪ ಎಂದು ಪರಿಗಣಿಸಿ ರಾಜಸ್ಥಾನ ಪೊಲೀಸರಿಂದ ವರದಿ ಕೇಳಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More