Home> India
Advertisement

Heavy Rain: ಮುಂದಿನ 3 ದಿನ ಕರ್ನಾಟಕ ಸೇರಿದಂತೆ ದೇಶದ ಈ ಭಾಗಗಳಲ್ಲಿ ಭಾರೀ ಮಳೆ ಎಚ್ಚರಿಕೆ

ಮುಂದಿನ ಮೂರು ದಿನಗಳವರೆಗೆ ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 7 ರಿಂದ 9 ರವರೆಗೆ ವಾಯುವ್ಯ ಭಾರತ ಮತ್ತು ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.

Heavy Rain: ಮುಂದಿನ 3 ದಿನ ಕರ್ನಾಟಕ ಸೇರಿದಂತೆ ದೇಶದ ಈ ಭಾಗಗಳಲ್ಲಿ ಭಾರೀ ಮಳೆ ಎಚ್ಚರಿಕೆ

ಬೆಂಗಳೂರು: ಸೆಪ್ಟೆಂಬರ್ 7 ರಿಂದ 9 ರವರೆಗೆ  ವಾಯುವ್ಯ ಭಾರತ ಮತ್ತು ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ, ಮುಂದಿನ ಮೂರು ದಿನಗಳವರೆಗೆ ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪಂಜಾಬ್, ಜಮ್ಮು ಮತ್ತು ಕಾಶ್ಮೀರ, ರಾಜಸ್ಥಾನದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅದೇ ಸಮಯದಲ್ಲಿ, ದಕ್ಷಿಣ ಭಾರತದ ಮೂರು ರಾಜ್ಯಗಳಲ್ಲಿ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಭಾರತದ ಕರ್ನಾಟಕ (Karnataka), ಕೇರಳ (Kerala) ಮತ್ತು ತಮಿಳುನಾಡು (Tamil nadu) ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.

ಹವಾಮಾನ ಇಲಾಖೆಯ ಪ್ರಕಾರ, ನೈಋತ್ಯ ಮುಂಗಾರು ಪುನರುಜ್ಜೀವನದಿಂದಾಗಿ, ಈ ರಾಜ್ಯಗಳಲ್ಲಿ ಭಾರೀ ಮಳೆಯಾಗುವ (Heavy Rain) ಮುನ್ಸೂಚನೆ ನೀಡಲಾಗಿದೆ. ಸೆಪ್ಟೆಂಬರ್ 6 ಮತ್ತು 7 ರಂದು ಹೊರಡಿಸಲಾಗಿರುವ ಎಚ್ಚರಿಕೆಯ ಪ್ರಕಾರ, ದಕ್ಷಿಣ ಒಡಿಶಾ, ಕರಾವಳಿ ಆಂಧ್ರ ಪ್ರದೇಶ, ತೆಲಂಗಾಣ, ವಿದರ್ಭ ಮತ್ತು ದಕ್ಷಿಣ ಛತ್ತೀಸ್‌ಗಢದ ಕಡಿಮೆ ಒತ್ತಡದ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಾನ್ಸೂನ್ ತೊಟ್ಟಿ ಬಿಕನೇರ್, ಗ್ವಾಲಿಯರ್, ಪಾಟ್ನಾ ಮೂಲಕ ಬಂಗಾಳ ಕೊಲ್ಲಿಯ ಈಶಾನ್ಯ ದಿಕ್ಕಿಗೆ ಹಾದು ಹೋಗುತ್ತಿದೆ. ಅದೇ ಸಮಯದಲ್ಲಿ, ಕಚ್ ಮತ್ತು ಪಕ್ಕದ ಪ್ರದೇಶಗಳಲ್ಲಿ ಚಂಡಮಾರುತದ ಪರಿಚಲನೆ ಇದೆ ಎನ್ನಲಾಗಿದೆ.

ಇದನ್ನೂ ಓದಿ- ಮೂರನೇ ಅಲೆ ಭೀತಿ ಹಿನ್ನಲೆಯಲ್ಲಿ ಸೆಪ್ಟೆಂಬರ್ 20 ರವರೆಗೆ ಲಾಕ್ ಡೌನ್ ವಿಸ್ತರಿಸಿದ ಹರ್ಯಾಣ

ಟ್ವೀಟ್‌ನಿಂದ ಮಳೆ ಗ್ರಾಫ್ ಅನ್ನು ಅರ್ಥಮಾಡಿಕೊಳ್ಳಿ:

ಉತ್ತರ ಭಾರತದ ಈ ಭಾಗಗಳಲ್ಲಿ ಭಾರೀ ಮಳೆ!
ಐಎಂಡಿ ಪ್ರಕಾರ, ಸೆಪ್ಟೆಂಬರ್ 7 ರಿಂದ 9 ರ ನಡುವೆ ವಾಯುವ್ಯ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪಂಜಾಬ್, ಜಮ್ಮು ಮತ್ತು ಕಾಶ್ಮೀರ, ರಾಜಸ್ಥಾನದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಭಾರತದಲ್ಲೂ ಮಳೆ ಎಚ್ಚರಿಕೆ:
ಮುಂದಿನ 3 ದಿನಗಳಲ್ಲಿ ಕರ್ನಾಟಕ (Karnataka), ತಮಿಳುನಾಡು (Tamil Nadu) ಮತ್ತು ಕೇರಳದಲ್ಲಿ (Kerala) ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದರ ಹೊರತಾಗಿ, ಪಶ್ಚಿಮ ಬಂಗಾಳದಲ್ಲಿ ಚಂಡಮಾರುತದ ಪರಿಚಲನೆಯು ರೂಪುಗೊಂಡ ಕಾರಣ, ಮುಂದಿನ 24 ಗಂಟೆಗಳಲ್ಲಿ ಉತ್ತರ ಮತ್ತು ಮಧ್ಯ ಬಂಗಾಳ ಕೊಲ್ಲಿಯಲ್ಲಿ ಮಳೆಯಾಗಬಹುದು ಎಂದು ಹೇಳಲಾಗಿದೆ.

ಇದನ್ನೂ ಓದಿ- ರೈತರ ಬೇಡಿಕೆಗಳು ಈಡೇರುವವರೆಗೆ ಪ್ರತಿಭಟನೆ ಮುಂದುವರೆಯುತ್ತದೆ-ರಾಕೇಶ್ ಟಿಕಾಯತ್

'ಇಂದು ಈ ರಾಜ್ಯಗಳಲ್ಲಿ ಮಳೆ' ಸಾಧ್ಯತೆ:
ಅದೇ ರೀತಿ, ಹವಾಮಾನ ಮುನ್ಸೂಚನೆ ಸಂಸ್ಥೆ ಸ್ಕೈಮೆಟ್ ಪ್ರಕಾರ, ಸೆಪ್ಟೆಂಬರ್ 6 ರ ಸಂಜೆಯವರೆಗೆ, ಆಂಧ್ರಪ್ರದೇಶ, ಛತ್ತೀಸ್‌ಗಢ, ಮಹಾರಾಷ್ಟ್ರ, ಕರ್ನಾಟಕ, ಕೇರಳ, ಮಧ್ಯಪ್ರದೇಶ ಮತ್ತು ದಕ್ಷಿಣ ಒಡಿಶಾದ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿದು ಬಂದಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More