Home> India
Advertisement

Jammu Kashmir: ಶ್ರೀನಗರದಲ್ಲಿ ಉಗ್ರರಿಂದ ಗ್ರೆನೇಡ್ ದಾಳಿ, ಓರ್ವ ಸಾವು

Granade Attack In Jammu And Kashmir -ಜಮ್ಮು ಮತ್ತು ಕಾಶ್ಮೀರದ ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ದಾಳಿಯನ್ನು ಖಂಡಿಸಿದ್ದಾರೆ.

Jammu Kashmir: ಶ್ರೀನಗರದಲ್ಲಿ ಉಗ್ರರಿಂದ ಗ್ರೆನೇಡ್ ದಾಳಿ, ಓರ್ವ ಸಾವು

Terror Attack -ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಯೋತ್ಪಾದಕ ದಾಳಿ ನಡೆದಿದೆ. ಅಮಿರಾ ಕಡಲ್‌ನ ಹರಿ ಸಿಂಗ್ ಹೈ ಸ್ಟ್ರೀಟ್ ಪ್ರದೇಶದಲ್ಲಿ ಭಾನುವಾರ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗ್ರೆನೇಡ್ (Granade Attack) ಅನ್ನು ಎಸೆದಿದ್ದಾರೆ. ಈ ದಾಳಿಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಒಬ್ಬ ಪೊಲೀಸ್ ಸೇರಿದಂತೆ 24 ಜನರು ಗಾಯಗೊಂಡಿದ್ದಾರೆ. "ಸಂಜೆ 4:20ರ ಸುಮಾರಿಗೆ, ಹರಿ ಸಿಂಗ್ ಹೈ ಸ್ಟ್ರೀಟ್‌ನಲ್ಲಿ ನಿಯೋಜಿಸಲಾಗಿದ್ದ ಪೊಲೀಸರು ಮತ್ತು ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗ್ರೆನೇಡ್‌ನಿಂದ ದಾಳಿ ನಡೆಸಿದ್ದಾರೆ" ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗಾಯಾಳುಗಳನ್ನು ಶ್ರೀ ಮಹಾರಾಜ ಹರಿ ಸಿಂಗ್ ಆಸ್ಪತ್ರೆಗೆ (Maharaja Hari Singh Hospital) ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಉಗ್ರರನ್ನು (Terror Attack) ಬಂಧಿಸುವ ಪ್ರಯತ್ನ ಮುಂದುವರಿದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಘಟನೆಯಲ್ಲಿ ಓರ್ವ ಪೊಲೀಸ್ ಸೇರಿದಂತೆ 24 ಮಂದಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದರೆ. ಗಾಯಾಳುಗಳನ್ನು ಶ್ರೀ ಮಹಾರಾಜ ಹರಿ ಸಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬರು ಮೃತಪಟ್ಟಿದ್ದಾನೆ. ಮೃತರನ್ನು ನಗರದ ನೌಹಟ್ಟಾ ಪ್ರದೇಶದ ನಿವಾಸಿ ಮೊಹಮ್ಮದ್ ಅಸ್ಲಾಂ ಮಖ್ದೂಮಿ (70) ಎಂದು ಗುರುತಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ದಾಳಿಯನ್ನು ಖಂಡಿಸಿದ್ದಾರೆ. 'ಈ ಹೇಡಿತನದ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ' ಎಂದು ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ. 'ಮೃತನಿಗೆ ಸ್ವರ್ಗ ಸಿಗಲಿ ಮತ್ತು ಗಾಯಾಳುಗಳು ಶೀಘ್ರ ಗುಣಮುಖರಾಗಲಿ' ಎಂದು ಹಾರೈಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ-PM Kisan: ಶೀಘ್ರದಲ್ಲಿಯೇ ಕೇಂದ್ರ ಸರ್ಕಾರ ರೈತರಿಗೆ ನೀಡಲಿದೆ ಈ ಸಂತಸದ ಸುದ್ದಿ

ಈ ದಾಳಿಯನ್ನು ಖಂಡಿಸಿ ಮೆಬಬೂಬಾ ಮುಫ್ತಿ ಕೂಡ ಟ್ವೀಟ್ ಮಾಡಿದ್ದಾರೆ.  " ಜಮ್ಮು ಮತ್ತು ಕಾಶ್ಮೀರದ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಮತ್ತು ಈ ಸಂಘರ್ಷ ಮತ್ತು ರಕ್ತಪಾತವನ್ನು ಕೊನೆಗೊಳಿಸಲು ಭಾರತ ಅಥವಾ ಪಾಕಿಸ್ತಾನ ಏನೂ ಮಾಡದಿರುವುದು ದುಃಖಕರ ಸಂಗತಿಯಾಗಿದೆ. ನಾನು ದುಃಖಿತ ಕುಟುಂಬಗಳಿಗಾಗಿ ಪ್ರಾರ್ಥಿಸುತ್ತೇನೆ ”

ಇದನ್ನೂ ಓದಿ-ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಏಳು ಜಿಲ್ಲೆಗಳ ಇಂಟರ್ನೆಟ್ ಸೇವೆ ಸ್ಥಗಿತ!

ಸಜ್ಜದ್ ಲೋನ್ ನೇತೃತ್ವದ ಪೀಪಲ್ಸ್ ಕಾನ್ಫರೆನ್ಸ್ ಮತ್ತು ಅಪ್ನಿ ಪಾರ್ಟಿ ಅಧ್ಯಕ್ಷ ಅಲ್ತಾಫ್ ಬುಖಾರಿ ಕೂಡ ದಾಳಿಯನ್ನು ಖಂಡಿಸಿದ್ದಾರೆ. ಭಾರತೀಯ ಜನತಾ ಪಕ್ಷದ ಜಮ್ಮು ಮತ್ತು ಕಾಶ್ಮೀರ ಘಟಕದ ಅಧ್ಯಕ್ಷ ಅಲ್ತಾಫ್ ಠಾಕೂರ್ ಕೂಡ ಈ ದಾಳಿಯನ್ನು ಅನಾಗರಿಕ ಮತ್ತು ಹೇಡಿತನದ ಕೃತ್ಯ ಎಂದು ಹೇಳಿದ್ದಾರೆ. 

ಇದನ್ನೂ ಓದಿ-SBI ಗ್ರಾಹಕರಿಗೆ ಸಿಹಿ ಸುದ್ದಿ! ಮನೆಯಲ್ಲೇ ಕುಳಿತು ಈ ಕೆಲಸ ಮಾಡಿ, ತೆರಿಗೆಯಲ್ಲಿ ಬಂಪರ್ ವಿನಾಯಿತಿ ಸಿಗುತ್ತೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More