Home> India
Advertisement

Karnataka Rains Forecast: ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

ಕಳೆದ ಕೆಲವು ದಿನಗಳ ಕಾಲ ಬಿಡುವು ನೀಡಿದ್ದ ಮುಂಗಾರು ಮತ್ತೆ ಚುರುಕಾಗಿದ್ದು, ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains Forecast: ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಆಗಸ್ಟ್ ನಲ್ಲಿನ ಒಣಹವೆ(Dry Spell)ಯ ನಂತರ ರಾಜ್ಯದಲ್ಲಿ ಈ ತಿಂಗಳು ಭಾರೀ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ. 3 ತಿಂಗಳಲ್ಲಿ 2ನೇ ಬಾರಿಗೆ ಪ್ರವಾಹದಂತಹ ಪರಿಸ್ಥಿತಿಯನ್ನು ತಡೆಗಟ್ಟಲು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಜ್ಞರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಜೂನ್ ನಲ್ಲಿ ಮುಂಗಾರು ಉತ್ತಮ ಆರಂಭವನ್ನು ಪಡೆದಿತ್ತು. ಆದರೆ ಉತ್ತರ ಕರ್ನಾಟಕ(Karnataka)ದ ಕೆಲವು ಭಾಗಗಳು ನಂತರ ಪ್ರವಾಹದ ಹೊಡೆತಕ್ಕೆ ಸಿಲುಕಿದವು. ಇದಲ್ಲದೆ ಮಲೆನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಭೂಕುಸಿತ ಉಂಟಾಯಿತು. ಆಗಸ್ಟ್ ತಿಂಗಳಿನಲ್ಲಿ ಮಳೆ ಕಡಿಮೆಯಾಯಿತು. ಇದರಿಂದ ರಾಜ್ಯವು ಶೇ.47ರಷ್ಟು ಮಳೆ ಕೊರತೆಯನ್ನು ದಾಖಲಿಸಿದೆ.

‘ಕಳೆದ ಕೆಲವು ದಿನಗಳ ಕಾಲ ಬಿಡುವು ನೀಡಿದ್ದ ಮುಂಗಾರು(Monsoon)ಮತ್ತೆ ಚುರುಕಾಗಿದ್ದು, ಮುಂದಿನ ಕೆಲ ದಿನ ಭಾರೀ ಮಳೆಯಾಗುವ(Rainfall) ಸಾಧ್ಯತೆ ಇದೆ’ ಎಂದು ಭಾರತೀಯ ಹವಾಮಾನ ಇಲಾಖೆ (IMD)ಮುನ್ಸೂಚನೆ ನೀಡಿದೆ. ಕರಾವಳಿ(Coastal Karnataka) ಮತ್ತು ಉತ್ತರ ಒಳನಾಡಿನ ಕೆಲವು ಕಡೆ ವರುಣನ ಆರ್ಭಟ ಜೋರಾಗಿರಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 28ರವರೆಗೂ ಭಾರೀ ಮಳೆಯಾಗಲಿದೆಯಂತೆ. ಕರಾವಳಿ ಮತ್ತು ಉತ್ತರ ಒಳನಾಡಿನ ಹಲವು ಪ್ರದೇಶ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞರು ಹೇಳಿದ್ದಾರೆ.  

ಇದನ್ನೂ ಓದಿ: ಆತ್ಮಸಾಕ್ಷಿಯೇ ಸತ್ತು ಹೋಗಿರುವ ಕಾಂಗ್ರೆಸ್ ಪಕ್ಷದಲ್ಲಿ ಸತ್ಯಕ್ಕೆ ಬೆಲೆಯಿದೆಯೇ: ಬಿಜೆಪಿ ಪ್ರಶ್ನೆ

ಈ ಜಿಲ್ಲೆಗಳಲ್ಲಿ ಮಳೆಯಾಗಲಿದೆ

ಪ್ರಮುಖವಾಗಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಧಾರವಾಡ, ಬೀದರ್‌, ಯಾದಗಿರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಹಾವೇರಿ ಸೇರಿ ರಾಜ್ಯದ ಹಲವು ಪ್ರದೇಶಗಳಲ್ಲಿ ಮುಂದಿನ 3-4 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ(India Meteorological Department) ಅಧಿಕಾರಿಗಳು ಮುನ್ನೆಚ್ಚರಿಕೆ ನೀಡಿದ್ದಾರೆ.

ಇದಲ್ಲದೆ ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆಯಾಗುವ ನಿರೀಕ್ಷೆಯಿದೆ.  ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು ಇಲ್ಲಿಯೂ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಗುಜರಾತ್ ಸಿಎಂ ಆಗಿದ್ದಾಗ 80 ದೇವಾಲಯ ಕೆಡವಿದ್ದರು: ಕಾಂಗ್ರೆಸ್ ಆರೋಪ

ದೇಶದ ಹಲವು ರಾಜ್ಯಗಳಲ್ಲಿ ವರುಣನ ಆರ್ಭಟ

ಮುಂಗಾರು(Monsoon) ಹಾಗೂ ವಾಯುಭಾರ ಕುಸಿತದ ಪರಿಣಾಮ ದೇಶದ ಹಲವು ರಾಜ್ಯಗಳಲ್ಲಿ ವರುಣನ ಆರ್ಭಟ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ(IMD) ಎಚ್ಚರಿಕೆ ನೀಡಿದೆ. ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಕೊಂಕಣ ಪ್ರದೇಶದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಭಾರೀ ಮಳೆಯ ನಿರೀಕ್ಷೆ ಇದ್ದು, ಸುಮಾರು 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಭಾನುವಾರ(ಸೆ.26)ದಿಂದ ಪಶ್ಚಿಮ ಬಂಗಾಳ ಹಾಗೂ ಒಡಿಶಾದಲ್ಲಿ ಅತಿಹೆಚ್ಚಿನ ಮಳೆಯಾಗುವ ಸೂಚನೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮುಂದಿನ 24 ಗಂಟೆಗಳಲ್ಲಿ ಗುಜರಾತ್‌, ಮಧ್ಯಪ್ರದೇಶ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸೆಪ್ಟೆಂಬರ್ ತಿಂಗಳಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ವಾಯುಭಾರ ಕುಸಿತದಿಂದ ಸೆಪ್ಟೆಂಬರ್‌ನಲ್ಲಿ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಿದೆ ಎಂದು ತಿಳಿದುಬಂದಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More