Home> India
Advertisement

ಗಣರಾಜ್ಯೋತ್ಸವ ಪೆರೇಡ್‍ನಲ್ಲಿ ಗಮನ ಸೆಳೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಸ್ತಬ್ಧಚಿತ್ರ

ಇದು ಮಹಾತ್ಮ ಗಾಂಧಿಜೀಯವರ 150ನೇ ಜನ್ಮದಿನಾಚರಣೆ ಅಂಗವಾಗಿ ಸಿದ್ಧವಾದ ಗಾಂಧಿಯವರ ಜೀವನಾಧಾರಿತ ಸ್ತಬ್ಧಚಿತ್ರ ಇದಾಗಿದ್ದು, ಕಲಾವಿದ ಶಶಿಧರ ಅಡಪ ವಿನ್ಯಾಸ ಮಾಡಿದ್ದಾರೆ.

ಗಣರಾಜ್ಯೋತ್ಸವ ಪೆರೇಡ್‍ನಲ್ಲಿ ಗಮನ ಸೆಳೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಸ್ತಬ್ಧಚಿತ್ರ

ನವದೆಹಲಿ: 70ನೇ ಗಣರಾಜ್ಯೋತ್ಸವದ ಅಂಗವಾಗಿ ನವದೆಹಲಿಯ ರಾಜಪಥದಲ್ಲಿ ನಡೆದ ಮೆರವಣಿಗೆಯಲ್ಲಿ ವಿವಿಧ ರಾಜ್ಯಗಳ, ಇಲಾಖೆಗಳ ಸ್ತಬ್ಧಚಿತ್ರಗಳು ಎಲ್ಲರ ಗಮನಸೆಳೆದವು. ಇದರಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ 'ಮಹಾತ್ಮ ಗಾಂಧೀಜಿ -ಬೆಳಗಾವಿ ಕಾಂಗ್ರೆಸ್‌ ಅಧಿವೇಶನ' ವಿಷಯಾಧಾರಿತ ಸ್ತಬ್ಧಚಿತ್ರ ವೀಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು. 

fallbacks

1924ರ ಡಿಸೆಂಬರ್‌ 26 ಮತ್ತು 27 ರಂದು ಬೆಳಗಾವಿಯಲ್ಲಿ ನಡೆದ ಐತಿಹಾಸಿಕ ಮಹತ್ವದ ಕಾಂಗ್ರೆಸ್‌ ಅಧಿವೇಶನದ ಅಧ್ಯಕ್ಷತೆಯನ್ನು ಮಹಾತಂ ಗಾಂಧೀಜಿ ವಹಿಸಿದ್ದರು. ಇದು ಗಾಂಧೀಜಿ ವಹಿಸಿದ್ದ ಏಕೈಕ ಕಾಂಗ್ರೆಸ್‌ ಮಹಾ ಅಧಿವೇಶನವಾಗಿದ್ದು, ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್‌ನ 39 ನೇ ಮಹಾಧಿವೇಶನ ಇದಾಗಿತ್ತು. ಈ ಸ್ತಬ್ಧಚಿತ್ರವನ್ನು ಕಲಾವಿದ ಶಶಿಧರ ಅಡಪ ವಿನ್ಯಾಸ ಮಾಡಿದ್ದು, ಪ್ರವೀಣ್‌ ಡಿ.ರಾವ್‌ ಅವರು 'ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು' ಎಂಬ ಗೀತೆಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಮಹಾತ್ಮ ಗಾಂಧಿಜೀಯವರ 150ನೇ ಜನ್ಮದಿನಾಚರಣೆ ಅಂಗವಾಗಿ ಸಿದ್ಧವಾದ ಗಾಂಧಿಯವರ ಜೀವನಾಧಾರಿತ ಸ್ತಬ್ಧಚಿತ್ರ ಇದಾಗಿತ್ತು.

fallbacks

ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳು, ಇಲಾಖೆಗಳ 22 ಸ್ತಬ್ಧಚಿತ್ರಗಳು, ದೇಶದ ವಿವಿಧ ಭಾಗಗಳ 58 ಮಂದಿ ಆದಿವಾಸಿ ಅತಿಥಿಗಳು ಹಾಗೂ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಈ ಬಾರಿಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮೆರಗು ನೀಡಿದವು. ಪ್ರಧಾನಿ ನರೇಂದ್ರ ಮೋದಿ, ಮುಖ್ಯ ಅತಿಥಿಯಾದ ಆಫ್ರಿಕಾ ಅಧ್ಯಕ್ಷ ಸಿರಿಲ್‌ ರಾಮಫೋಸಾ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ಅನೇಕ ಮಂದಿ ಗಣರಾಜ್ಯೋತ್ಸವ ಮೆರವಣಿಗೆಯನ್ನು ವೀಕ್ಷಿಸಿದರು.

Read More